Mysore News: ಮನೆಯಲ್ಲೇ ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಚೆಸ್ಕಾಂ ಎಂಜಿನಿಯರ್ ; ಚಾಮರಾಜನಗರದಲ್ಲೂ ಇಬ್ಬರ ಬಂಧನ
Jun 10, 2023 08:20 AM IST
ಲೋಕಾಯುಕ್ತ ಬಲೆಗೆ ಬಿದ್ದ ಚಾಮರಾಜನಗರದ ಇಬ್ಬರು ಎಂಜಿನಿಯರ್‌ಗಳು
- ಮೈಸೂರು ಭಾಗದಲ್ಲಿ ಲೋಕಾಯುಕ್ತ ದಾಳಿಗೆ ಸಿಲುಕುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಒಂದೇ ದಿನ ಮೂವರು ಎಂಜಿನಿಯರ್‌ಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಕಡೆವಿದ್ದಾರೆ.
ಚಾಮರಾಜನಗರ/ಮೈಸೂರು: ಒಂದೇ ದಿನ ಪ್ರತ್ಯೇಕ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಎಂಜಿನಿಯರ್‌ಗಳು ಬಂಧನಕ್ಕೆ ಒಳಗಾಗಿದ್ಧಾರೆ. ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ಪ್ರಕರಣಗಳು ದಾಖಲಾಗಿವೆ.
ಇಬ್ಬರು ಎಂಜಿನಿಯರ್‌ಗಳ ಬಂಧನ
ಶಾಲಾ ಕಟ್ಟಡ ಕಾಮಗಾರಿಗೆ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿಕೊಡಲು 30 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಚಾಮರಾಜನಗರ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಚಾಮರಾಜನಗರದ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಮಧುಸೂದನ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆಂಪರಾಜು ಅವರು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಚಾಮರಾಜನಗರ ತಾಲೂಕಿನ ಬಾಗಳಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡದ ಕಾಮಗಾರಿಯನ್ನು ಸೂರ್ಯ ಬಿಲ್ಡರ್‌ನ ಸುನೀಲ್‌ಕುಮಾರ್ ಎಂಬ ಗುತ್ತಿಗೆದಾರರು ನಿರ್ವಹಿಸಿದ್ದರು. ಈ ಕಾಮಗಾರಿಯ ಬಿಲ್ ಹಣವನ್ನು ಮಂಜೂರು ಮಾಡಿಕೊಡಲು ಇಬ್ಬರೂ ಅಧಿಕಾರಿಗಳು ಸುನೀಲ್ ಕುಮಾರ್ ಅವರಿಂದ 30 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶುಕ್ರವಾರ ಸಂಜೆ ಲಂಚ ಸ್ವೀಕರಿಸುವಾಗ ಇಬ್ಬರನ್ನೂ ಕುದೇರು ಬಳಿ ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಚೆಸ್ಕಾಂ ಎಇಇ ಅಶೋಕ್ ಕುಮಾರ್ 2 ಲಕ್ಷ ಲಂಚ ಪಡೆಯವ ವೇಳೆ ಲಾಕ್
49 ಕಿಲೋ ವ್ಯಾಟ್ ಚಾರ್ಜಿಂಗ್ ಪಾಯಿಂಟ್ ಗೆ ಅನುಮತಿ ನೀಡಲು 2 ಲಕ್ಷ ಲಂಚ ಪಡೆಯುತ್ತಿದ್ದ ಕುಶಾಲನಗರ ಎಇಇ ಅಶೋಕ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರಿನ ವಿಜಯನಗರ ನಿವಾಸದಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಲಾಕ್ ಮಾಡಿದ್ದಾರೆ.
ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಮಾರ್ಗದರ್ಶನಲ್ಲಿ ಕಾರ್ಯಾಚರಣೆ ನಡೆದಿದೆ. ಡಿವೈಎಸ್‌ಪಿ ಪವನ್ ಕುಮಾರ್ ಇನ್ಸಪೆಕ್ಟರ್ ಲೋಕೇಶ್ ಸೇರಿ ಹಲವು ಸಿಬ್ಬಂದಿ ಭಾಗಿಯಾಗಿದ್ದಾರೆ. 5 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದ ಅಧಿಕಾರಿ 2 ಲಕ್ಷ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.
ವಿಭಾಗ