Mysugar Sugar Factory: ಮೈಶುಗರ್‌ನಲ್ಲಿ 30ರಿಂದ ಕಬ್ಬು ಅರೆಯುವಿಕೆ ಶುರು- ಸಚಿವ ಕೆ.ಗೋಪಾಲಯ
Sep 17, 2022 04:32 PM IST
ಮಂಡ್ಯ ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನೆಯ ಕಾರ್ಯವೈಖರಿ ಕುರಿತು ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಯುವಸಬಲಿಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ.ನಾರಾಯಣ ಗೌಡ ಕೂಡ ಹಾಜರಿದ್ದರು.
- ಮಂಡ್ಯ ಜಿಲ್ಲೆಯ ಜನರ ಜೀವನಾಡಿ ಆಗಿರುವ ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಸೆ.30ರಿಂದ ಕಬ್ಬು ಅರೆಯುವಿಕೆ ಶುರುವಾಗಲಿದೆ ಎಂದು ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ಮಂಡ್ಯ : ಮೈ ಶುಗರ್ ಸಕ್ಕರೆ ಕಾರ್ಖಾನೆಯ ಮೊದಲ ಬಾಯ್ಲರ್ ಈಗಾಗಲೇ ಆರಂಭಗೊಂಡಿದ್ದು ಎರಡನೇ ಬಾಯ್ಲರ್ ಗೆ ಇದೇ 19 ರಂದು ಚಾಲನೆ ನೀಡಲಾಗುವುದು. ಇದೇ 30 ರಿಂದ ರೈತರಿಂದ ಸಂಪೂರ್ಣ ಕಬ್ಬು ಖರೀದಿಸಿ ಅರೆಯುವ ಕೆಲಸ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಅವರು ಶನಿವಾರ, ಮಂಡ್ಯ ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನೆಯ ಕಾರ್ಯವೈಖರಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಯುವಸಬಲಿಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ.ನಾರಾಯಣ ಗೌಡ, ಉಸ್ತುವಾರಿ ಕಾರ್ಯದರ್ಶಿಗಳಾದ ಜಯರಾಮ್ ರಾಯಪುರ, ಜಿಲ್ಲಾಧಿಕಾರಿ ಎಸ್.ಅಶ್ವತಿ,ಜಿ.ಪಂ.ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶಾಂತಾ ಎಲ್.ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಉಪವಿಭಾಗಾಧಿಕಾರಿಗಳಾದ ಬಿ.ಸಿ ಶಿವಾನಂದಮೂರ್ತಿ, ಆರ್.ಐಶ್ವರ್ಯ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಈಗಾಗಲೇ ಕಾರ್ಖಾನೆ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆಯಲಾಗಿದೆ. ಜಿಲ್ಲೆಯ ಜನರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಕುರಿತು ಸರ್ಕಾರ ನುಡಿದಂತೆ ನಡೆದುಕೊಂಡಿದೆ.
ಕಬ್ಬು ಖರೀದಿ ತಡವಾದ ಹಿನ್ನೆಲೆಯಲ್ಲಿ ಬೇರೆ ಕಾರ್ಖಾನೆಯವರು ಒಂದು ಈಗಾಗಲೇ ಲಕ್ಷ ಟನ್ ಕಬ್ಬು ಖರೀದಿ ಮಾಡಿದ್ದರೆ. ನಮ್ಮ ಕಾರ್ಖಾನೆಯಿಂದ ಶೇ ನೂರರಷ್ಟು ಕಬ್ಬು ಖರೀದಿ ಮಾಡಲಾಗುವುದು. ಜಿಲ್ಲೆಯ ಎಲ್ಲ ತಾಲ್ಲೂಕಿನ ರೈತರ ಕಬ್ನು ಖರೀದಿ ಮಾಡಲಾಗುವುದು ಎಂದು ಹೇಳಿದರು.
ಕಾರ್ಖಾನೆ ಆರಂಭ ಕುರಿತು ಮಾತುಕೊಟ್ಟಂತೆ ನಡೆದುಕೊಂಡ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಸೆ.30 ರ ನಂತರ ಕಾರ್ಖಾನೆ ಯನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಗುವುದು. ಶಾಶ್ವತವಾಗಿ ಈ ಕಾರ್ಖಾನೆ ನಡೆಯಬೇಕೆನ್ನುವುದು ಸರ್ಕಾರದ ಆಶಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣ ಗೌಡ,ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್, ಜಿಲ್ಲಾಧಿಕಾರಿ ಎಸ್.ಅಶ್ವತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
-------------------------------------------------------------------
ಇವುಗಳನ್ನೂ ಓದಿ
1) ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವು ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಹಲವು ಕೊಡುಗೆಗಳನ್ನು ಪ್ರಕಟಿಸಿದ್ದಾರೆ. Kalyana Karnataka: ಅಮೃತ ಮಹೋತ್ಸವದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಭರ್ಜರಿ ಕೊಡುಗೆ ಘೋಷಿಸಿದ ಬಸವರಾಜ ಬೊಮ್ಮಾಯಿ, ಇಲ್ಲಿದೆ ವಿವರ
2) ಬೆಳೆ ಹಾನಿ ಕುರಿತಂತೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದುಕೊಂಡು ತಕ್ಷಣ ಪರಿಹಾರ ನೀಡಲಾಗುತ್ತಿದೆ. ಹಿಂದೆಲ್ಲ ಪರಿಹಾರ ನೀಡಲು ವರ್ಷಗಟ್ಟಲೆ ಬೇಕಾಗುತ್ತಿತ್ತು. ಇದೀಗ ಫ್ರೂಟ್ಸ್ ತಂತ್ರಾಂಶದಲ್ಲಿ ನಷ್ಟದ ಮಾಹಿತಿ ನಮೂದಿಸಿದ ಕೂಡಲೆ ರೈತರಿಗೆ ಪರಿಹಾರ ನೀಡಲಾಗುತ್ತಿದೆ ಎಂದು ಸಿಎಂ ಹೇಳಿದರು. Basavaraj Bommai: ಬೆಳೆ ಪರಿಹಾರಕ್ಕಾಗಿ 300 ಕೋಟಿ ರೂಪಾಯಿ ಬಿಡುಗಡೆ, ಕಲಬುರಗಿಯಲ್ಲಿ ಸಿಎಂ ಸ್ಪಷ್ಟನೆ
3) ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ವರ್ಷದಿಂದ 5000 ಕೋಟಿ ರೂ.ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. Kalyana Karnataka: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ವರ್ಷದಿಂದ 5 ಸಾವಿರ ಕೋಟಿ ರೂ.ಗಳ ಅನುದಾನ
4) ಕಲಬುರಗಿ-ಕೊಲ್ಹಾಪುರ ರೈಲು ಸಂಚಾರಕ್ಕೆ ಇಂದು ಹಸಿರು ನಿಶಾನೆ ತೋರಿಸಲಾಯಿತು. ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ ಇಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಈ ಮೂಲಕ ಕಲಬುರಗಿ ಕೊಲ್ಹಾಪುರ ಮಾರ್ಗದ ರೈಲು ಸಂಚಾರಕ್ಕೆ ಚಾಲನೆ ನೀಡಿದರು. -Kalaburagi-Kolhapur train: ಕಲಬುರಗಿ - ಕೊಲ್ಹಾಪುರ ರೈಲಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಲನೆ