Balaram Health issue: ಜಂಬೂಸವಾರಿಯ ಬಲರಾಮ ಆನೆಗೆ ತೀವ್ರ ಅನಾರೋಗ್ಯ; ಕ್ಷಯರೋಗದ ಶಂಕೆ
May 07, 2023 05:57 PM IST
ಬಲರಾಮ ಆನೆಗೆ ಅನಾರೋಗ್ಯ
- 67 ವರ್ಷದ ಬಲರಾಮನಿಗೆ ವಯೋಸಹಜ ಆರೋಗ್ಯ ಸಮಸ್ಯೆ ಇದ್ದು, ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿದೆ.
ಮೈಸೂರು: ಜಂಬೂಸವಾರಿಯ ಗಜಪಡೆಯ ಪೈಕಿ ಪ್ರಮುಖವಾದ ಬಲರಾಮ ಆನೆ (Elephant balaram) ಅನಾರೋಗ್ಯದಿಂದ ಬಳಲುತ್ತಿದ್ದು, ಆತನಿಗೆ ವಯೋಸಹಜ ಆರೋಗ್ಯ ಸಮಸ್ಯೆ ಕಾಡುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
67 ವರ್ಷದ ಬಲರಾಮನಿಗೆ ವಯೋಸಹಜ ಆರೋಗ್ಯ ಸಮಸ್ಯೆ (Balaram Health issue) ಇದ್ದು, ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿದೆ. ಬಾಯಲ್ಲಿ ಹುಣ್ಣಾಗಿರುವ ಕಾರಣ ಆಹಾರ ಸೇವಿಸಲು ಸಾಧ್ಯವಾಗದೆ ನಿತ್ರಾಣಗೊಂಡಿದ್ದಾನೆ.
ಇದು ಟಿಬಿ (ಕ್ಷಯ) ಇರಬಹುದೆಂದು ವೈದ್ಯರು ಶಂಕಿಸಿದ್ದು, ಇದಕ್ಕೆ ಅಗತ್ಯ ಪರೀಕ್ಷೆ ನಡೆಸಲಾಗಿದೆ. ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಬಲರಾಮನಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಅಸ್ವಸ್ಥಗೊಂಡಿರುವ ಬಲರಾಮನಿಗೆ ಊಟ ಮಾಡಲು ಸಾಧ್ಯವಾಗುತ್ತಿಲ್ಲವಾದ ಕಾರಣ ರಾಗಿ ಗಂಜಿ, ರಾಗಿ ಹಿಟ್ಟು, ಬಾಳೆ ಹಣ್ಣು, ಕಲ್ಲಂಗಡಿ ಹಣ್ಣಿನಂತಹ ಮೆದು ಆಹಾರ ನೀಡಲಾಗುತ್ತಿದೆ.
ದಸರಾ ಆನೆಗಳಿಗೆ ಮೈಸೂರಿನಲ್ಲಿ ವಿಶೇಷ ಪ್ರೀತಿ, ಆದರ ಇದೆ. ಅವುಗಳಿಗೆ ಪೂಜ್ಯ ಸ್ಥಾನಮಾನ ನೀಡಲಾಗಿದೆ. ಸೌಮ್ಯ ಸ್ವಭಾವದ ಬಲರಾಮ ಆನೆ 14 ಬಾರಿ ಅಂಬಾರಿ ಹೊತ್ತಿದೆ, ಎಲ್ಲರ ಪ್ರೀತಿ ಪಾತ್ರ ಬಲರಾಮ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಆಶಿಸುತ್ತಿದ್ದಾರೆ. ಮೈಸೂರು ಮಾತ್ರವಲ್ಲದೆ ಜಗತ್ತಿನ ಹಲವರು ಬಲರಾಮನ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸುತ್ತಿದ್ದಾರೆ.
ಕರ್ನಾಟಕದ ಇಂದಿನ ಪ್ರಮುಖ ಸುದ್ದಿ
SSLC Exam Result 2023: ನಾಳೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟ
ಬೆಂಗಳೂರು: 2022-2023ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ (ಮೇ 8) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದ ಕುರಿತಾಗಿ ಸುದ್ದಿಗೋಷ್ಠಿ ನಡೆಸಲಾಗುತ್ತದೆ. ಆ ಬಳಿಕ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.
11 ಗಂಟೆಯ ನಂತರ ಇಲಾಖೆಯ ಅಧಿಕೃತ ವೆಬ್‌ಸೈಟ್ https://karresults.nic.in/ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನದ ಬಳಿಕ ಶಾಲೆಗಳಲ್ಲೂ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ, ಇದರ ಜೊತೆಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೂ ಎಸ್‌ಎಂಎಸ್ ಮೂಲಕ ಫಲಿತಾಂಶವನ್ನು ಕಳುಹಿಸಲಾಗುತ್ತದೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ. ಇದರ ಸಂಪೂರ್ಣ ಸುದ್ದಿಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.