Mysuru Accident: ಮೈಸೂರು ಟಿ ನರಸಿಪುರದಲ್ಲಿ ಬಸ್ ಕಾರು ನಡುವೆ ಭೀಕರ ಅಪಘಾತ, ಮಗು ಸೇರಿದಂತೆ 10 ಮಂದಿ ಸಾವು
May 29, 2023 04:45 PM IST
Mysuru Accident: ಮೈಸೂರು ಟಿ ನರಸಿಪುರದಲ್ಲಿ ಬಸ್ ಕಾರು ನಡುವೆ ಭೀಕರ ಅಪಘಾತ, 10 ಮಂದಿ ಸಾವು
- Mysuru T Narasipura Car Bus accident: ಮೈಸೂರಿನ ಟಿ ನರಸಿಪುರ ಸಮೀಪ ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಹತ್ತು ಮಂದಿ ಮೃತಪಟ್ಟ ಧಾರುಣ ಘಟನೆ ವರದಿಯಾಗಿದೆ.
ಮೈಸೂರು: ಮೈಸೂರಿನ ಟಿ ನರಸಿಪುರ ಸಮೀಪ ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಹತ್ತು ಮಂದಿ ಮೃತಪಟ್ಟ ಧಾರುಣ ಘಟನೆ ವರದಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಒಂದೇ ಕುಟುಂಬದ ಹತ್ತು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆರಂಭದಲ್ಲಿ ಮೂರು ಜನರು ಮೃತಪಟ್ಟಿರುವ ಕುರಿತು ವರದಿಯಾಗಿತ್ತು. ಇದೀಗ ಬಂದ ವರದಿ ಪ್ರಕಾರ ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.
ಇನ್ನೋವಾ ಕಾರಿನಲ್ಲಿ ಒಂದೇ ಕುಟುಂಬದ ಪ್ರಯಾಣಿಕರು ಮೈಸೂರು ಪ್ರವಾಸಕ್ಕೆ ಆಗಮಿಸಿದ್ದರು. ಟಿ ನರಸಿಪುರ ಸಮೀಪದಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಇವರಿದ್ದ ಇನ್ನೋವಾ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಸಾವಿನ ಸಂಖ್ಯೆ ಇನ್ನಷ್ಟು ಏರಿಕೆ ಕಾಣುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಮಾಧ್ಯಮಗಳ ವರದಿ ಪ್ರಕಾರ, ಗಾಯಗೊಂಡವರನ್ನು ಬಳ್ಳಾರಿಯ ಜನಾರ್ದನ್ (45), ಪುನೀತ್ (4), ಶಶಿಕುಮಾರ್(24) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತಪಟ್ಟವರು ಮತ್ತು ಗಾಯಗೊಂಡವರ ಕುರಿತು ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ. ಗಾಯಗೊಂಡವರನ್ನು ಚಾಮರಾಜನಗರ ಆಸ್ಪತ್ರೆಯಿಂದ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಹತ್ತು ಮಂದಿ ಸಾವು
ಅಪ್‌ಡೇಟ್: ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದವರು ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಟಿ ನರಸಿಪುರ ಪೊಲೀಸರು ಆಗಮಿಸಿ ದೂರು ದಾಖಲಿಸಿಕೊಂಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇದೇ ಭಾನುವಾರ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ದುರ್ಮರಣ ಹೊಂದಿದ್ದರು. ಲಾರಿಗೆ ಇಂಡಿಕಾ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ನಡೆದಿತ್ತು.
ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕಾರಿನ ಟೈರ್ ಸ್ಪೋಟಗೊಂಡಿದ್ದು, ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿತ್ತು. ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮಿಕಾ ಎಂದು ಗುರುತಿಸಲಾಗಿದೆ. ಇವರೆಲ್ಲರೂ ವಿಜಯಪುರಿಂದ ಬೆಂಗಳೂರಿಗೆ ಹೊರಟಿದ್ದರು. ಈ ಕುರಿತ ಸಚಿತ್ರ ವರದಿ ಇಲ್ಲಿದೆ.
ವಿಭಾಗ