ಕನ್ನಡ ಸುದ್ದಿ  /  ಕರ್ನಾಟಕ  /  Mysore Dasara: ಮೈಸೂರು ದಸರಾ ಯಶಸ್ಸು: ಅಧಿಕಾರಿಗಳಿಗೆ ಸಿಎಂ ಶಹಬ್ಬಾಶ್‌ ಗಿರಿ

Mysore Dasara: ಮೈಸೂರು ದಸರಾ ಯಶಸ್ಸು: ಅಧಿಕಾರಿಗಳಿಗೆ ಸಿಎಂ ಶಹಬ್ಬಾಶ್‌ ಗಿರಿ

HT Kannada Desk HT Kannada

Nov 06, 2023 10:31 AM IST

ಮೈಸೂರು ದಸರಾ ಔತಣ ಕೂಟದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿದರು.

  •  Mysore Dasara Get Together ಮೈಸೂರು ದಸರಾ( Mysore Dasara) ಯಶಸ್ಸಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ( CM Siddaramaiah) ಅವರು ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗಿಯಾದರು.

ಮೈಸೂರು ದಸರಾ ಔತಣ ಕೂಟದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿದರು.
ಮೈಸೂರು ದಸರಾ ಔತಣ ಕೂಟದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿದರು.

ಮೈಸೂರು: ಮೈಸೂರು ದಸರಾವನ್ನು ಯಶಸ್ವಿಯಾಗಿ ಆಚರಿಸಲು ಅವಿರತ ಶ್ರಮಿಸಿದ್ದೀರಿ. ನಿಮಗೆ ಸರಕಾರದ ಪರವಾಗಿ ಅಭಿನಂದನೆಗಳು.

ಟ್ರೆಂಡಿಂಗ್​ ಸುದ್ದಿ

ನಮ್ಮಲ್ಲಿ ಒಳಜಗಳ ಇಲ್ಲ, ನಮ್ಮ ಸರ್ಕಾರ ಉರುಳಿಸಿಕೊಳ್ಳಲು ಯಾರಿಂದಲೂ ಆಗೋಲ್ಲ: ಸಿಎಂ ಸಿದ್ದರಾಮಯ್ಯ

Hassan Scandal: 6 ದಿನ ಜೈಲು ವಾಸದ ನಂತರ ಜಾಮೀನಿನ ಮೇಲೆ ರೇವಣ್ಣ ಬಿಡುಗಡೆ

Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; ನಾಗಸಂದ್ರ-ಮಾದಾವರ ಮೆಟ್ರೋ ರೈಲು ಸಂಚಾರ ಜುಲೈ ಅಂತ್ಯಕ್ಕೆ ಆರಂಭ

Bengaluru News: ಬೆಳೆಸೋಕೆ ವರುಷ ಮಳೆಗೆ ನಿಮಿಷ; ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ ಧರೆಗುರುಳಿದ 1000 ಮರಗಳು

ಇದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನೀಡಿದ್ದ ಶಹಬ್ಬಾಶ್‌ಗಿರಿ.

ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಔತಣ ಕೂಟದಲ್ಲಿ ದಸರಾ ಯಶಸ್ವಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಸಿಎಂ ಮಾತನಾಡಿದರು.

ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ. ಅಧಿಕಾರಿಗಳು ಜನರ ನಡುವೆ ಇದ್ದರೆ ಅಧಿಕಾರಿಗಳ ಜನಪ್ರಿಯತೆಯೂ ಹೆಚ್ಚುತ್ತದೆ. ಜನರ ಸಮಸ್ಯೆಗಳೂ ಅರ್ಥ ಆಗುತ್ತವೆ. ಸಮಸ್ಯೆ ಅರ್ಥವಾದಷ್ಟೂ ಪರಿಣಾಮಕಾರಿ ಪರಿಹಾರ ಒದಗಿಸಲು ಸಾಧ್ಯ ಎಂದು ಸಲಹೆ ನೀಡಿದರು.

ದಸರಾ ಜನರ ಹಬ್ಬ. ಅಧಿಕಾರಿಗಳಿಗೆ ಜನಪರವಾದ ಮನಸ್ಸು, ಕಾಳಜಿ, ಹೃದಯ ಇದ್ದರೆ ಮಾತ್ರ ಜನಪರ ಅಭಿವೃದ್ಧಿ ಸಾಧ್ಯ. ಕಳೆದ ಐದು ವರ್ಷಗಳಲ್ಲಿ ಮೈಸೂರಿನಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಹೀಗಾಗಿ ಇಡೀ ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿ. ಮೈಸೂರನ್ನು ಅಭಿವೃದ್ಧಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ತಗೆದುಕೊಂಡು ಹೋಗಿ ಎಂದು ಸೂಚನೆ ನೀಡಿದರು.

ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿಯಲ್ಲಿ ಮೈಸೂರು ನಂಬರ್ ಒನ್ ಆಗಬೇಕು. ಇದು ನಿಮ್ಮಿಂದ ಸಾಧ್ಯವಿದೆ. ಸಾಧಿಸಿ ತೋರಿಸೋಣ ಎಂದು ಎಲ್ಲರ ಸಹಕಾರ ಕೋರಿದರು.

ನಾಲ್ವಡಿ ಅರಸರು ಮಾದರಿ

ಗತಕಾಲದ ಅಭಿವೃದ್ಧಿಯ ವೈಭವ ಮೈಸೂರಿನಲ್ಲಿ ಮರುಕಳಿಸಬೇಕು. ನಾಲ್ವಡಿ ಅರಸರು ಮಾಡಿದ ನೀರಾವರಿ, ಕೃಷಿ, ಸಮಾಜ ಕಲ್ಯಾಣ ಸೇರಿದಂತೆ ಎಲ್ಲಾ ಅಭಿವೃದ್ಧಿ ಕಾರ್ಯಗಳು ನಮಗೆ ಮಾದರಿಯಾಗಲಿ. ಅವರ ಕಾಲದ ಅಭಿವೃದ್ಧಿಯ ವೈಭವ ಜಿಲ್ಲೆಯಲ್ಲಿ ಮರುಕಳಿಸಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲಾ ಅಧಿಕಾರಿಗಳಿಗೂ ಅಭಿನಂದಿಸಿ , ದಸರಾದಲ್ಲಿ ಕಾಣಿಸಿದ ಒಗ್ಗಟ್ಟು ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲೂ ಕಾಣಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌ ಸಹಿತ ಹಿರಿಯ ಅಧಿಕಾರಿಗಳು ಭಾಗಿಯಾದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ