logo
ಕನ್ನಡ ಸುದ್ದಿ  /  ಕರ್ನಾಟಕ  /  Mysuru News: ಏಪ್ರಿಲ್‌ 25ರಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮೈಸೂರು ಪ್ರವಾಸ, ಗರಿಗೆದರಿದ ಕರ್ನಾಟಕ ಚುನಾವಣಾ ಪ್ರಚಾರ

Mysuru News: ಏಪ್ರಿಲ್‌ 25ರಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮೈಸೂರು ಪ್ರವಾಸ, ಗರಿಗೆದರಿದ ಕರ್ನಾಟಕ ಚುನಾವಣಾ ಪ್ರಚಾರ

Praveen Chandra B HT Kannada

Apr 24, 2023 12:23 PM IST

ಪ್ರಿಯಾಂಕಾ ಗಾಂಧಿ ವಾದ್ರಾ

    • ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ(Karnataka Election) ಹೆಚ್ಚಿನ ಮತಬೇಟೆಗಾಗಿ ಕೇಂದ್ರ ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ (Priyanka Gandhi Vadra) ಏಪ್ರಿಲ್‌ 25ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಸಾರ್ವಜನಿಕ‌ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
 ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ (ANI Picture Service)

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ(Karnataka Election) ಹೆಚ್ಚಿನ ಮತಬೇಟೆಗಾಗಿ ಕೇಂದ್ರ ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈಗಾಗಲೇ ಬಿಜೆಪಿಯ ಹಲವು ನಾಯಕರು ಸರದಿಯಲ್ಲಿ ಕರ್ನಾಟಕ ಪ್ರವಾಸ ಮಾಡುತ್ತಿದೆ. ಕಾಂಗ್ರೆಸ್‌ ಚುನಾವಣಾ ಪ್ರಚಾರಕ್ಕೂ ರಾಹುಲ್‌ ಗಾಂಧಿ ಈಗಾಗಲೇ ಆಗಮಿಸಿದ್ದು, ಇದೀಗ ನಾಳೆ ಪ್ರಿಯಾಂಕ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರಿನಲ್ಲಿ ಸತತ ಎರಡನೇ ದಿನವೂ ಮಳೆ, ತೊಂದರೆ ಅನುಭವಿಸಿದರೂ ಮಳೆಯಾಗಿದ್ದಕ್ಕೆ ಖುಷಿಪಟ್ಟ ನಾಗರಿಕರು

ಕರ್ನಾಟಕ ಹವಾಮಾನ ಮೇ 10; ಮೈಸೂರು, ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಸಾಧಾರಣ ಮಳೆ, ತುಮಕೂರು ಸೇರಿ 6 ಜಿಲ್ಲೆಗಳಲ್ಲಿ ಒಣಹವೆ

ಬೆಂಗಳೂರು ಗುಡ್‌ಗಿಂಗ್ ಅಂಡ್ ಮಿಂಚಿಂಗ್ ಹೆವಿಲಿ: ಮಳೆ ಕಂಡು ಖುಷಿಯಾದ ನೆಟ್ಟಿಗರು ಹಂಚಿಕೊಂಡ ಖುಷಿ ವಿಡಿಯೊಗಳು ಇಲ್ಲಿವೆ

SSLC Results 2024: ಚರ್ಚೆಗೆ ಗ್ರಾಸವಾದ ಬೆಂಗಳೂರು ನಗರ, ಸುತ್ತಮುತ್ತಲ ಜಿಲ್ಲೆಗಳ ಕಳಪೆ ಸಾಧನೆ, ಇಲ್ಲಿದೆ ಅಂಕಿಅಂಶ

ರಾಜ್ಯ ಕಾಂಗ್ರೆಸ್ ನಾಯಕರಿಗೆ ಶಕ್ತಿ ತುಂಬಲು ಹೈಕಮಾಂಡ್ ನಾಯಕರು ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಿರುವ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಏಪ್ರಿಲ್‌ 25ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಸಾರ್ವಜನಿಕ‌ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಿಲ್ಲೆಯ ಟಿ.ನರಸೀಪುರ ಕ್ಷೇತ್ರದ ಹೆಳವರಹುಂಡಿಯಲ್ಲಿ ಮಧ್ಯಾಹ್ನ 12ರಿಂದ 1 ಗಂಟೆವರೆಗೆ ನಡೆಯುವ ಸಾರ್ವಜನಿಕ‌ ಸಭೆಯಲ್ಲಿ ಪಾಲ್ಗೊಂಡ ನಂತರ ಪ್ರಿಯಾಂಕಾ ಗಾಂಧಿ, ಮಧ್ಯಾಹ್ನ 2.30ಕ್ಕೆ ಹನೂರು ಕ್ಷೇತ್ರಕ್ಕೆ ತೆರಳಲಿದ್ದಾರೆ. ಅಲ್ಲಿ ಗೌರಿಶಂಕರ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿರುವ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3ರಿಂದ ಸಂಜೆ 4 ಗಂಟೆವರೆಗೆ ಮಹಿಳೆಯರ ಜೊತೆ ಸಂವಾದ ನಡೆಸಲಿದ್ದಾರೆ.

ಸಂವಾದ ಕಾರ್ಯಕ್ರಮದ ಬಳಿಕ ಪ್ರಿಯಾಂಕಾ ಗಾಂಧಿ ಅವರು 4.15ಕ್ಕೆ ಕೆ.ಆರ್.ನಗರಕ್ಕೆ ತೆರಳಲಿದ್ದಾರೆ. ಸಂಜೆ 5.30ರಿಂದ 6.30ರವರೆಗೆ ಅಲ್ಲಿ ನಡೆಯುವ ರೋಡ್‌ಶೋನಲ್ಲಿ ಭಾಗಿಯಾಗಲಿದ್ದಾರೆ. ತೋಪಮ್ಮನ ದೇವಸ್ಥಾನದಿಂದ ಸುಮಾರು‌ 2 ಕಿ.ಮೀ. ವರೆಗೆ ಈ ರೋಡ್‌ ಶೋ ನಡೆಯಲಿದೆ.

ವರದಿ: ಧಾತ್ರಿ ಭಾರದ್ವಾಜ್

Rahul Gandhi: ರಾಜಕಾರಣಿಗಳಲ್ಲಿ ತುಂಬಾ ಚೆನ್ನಾಗಿ ಅಡುಗೆ ಮಾಡೋರು ಯಾರೆಂದು ಹೇಳಿದ್ರು ರಾಹುಲ್ ಗಾಂಧಿ; ಯಾರಿರಬಹುದು

ಸದಾ ರಾಜಕೀಯದಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಸಂದರ್ಶನವೊಂದರಲ್ಲಿ ತಮ್ಮ ಲೈಫ್ ಬಗ್ಗೆ ಒಂದಿಷ್ಟು ಅಂಶಗಳನ್ನು ಹಂಚಿಕೊಂಡಿದ್ದು, ಆಹಾರದ ಬಗ್ಗೆ ತಮಗಿರುವ ಉತ್ಸಾಹವನ್ನು ವಿವರಿಸಿದ್ದಾರೆ. ಇಷ್ಟದ ಅಡುಗೆ ಮಾಡುವ ವ್ಯಕ್ತಿ (Favourite Cook) ಯಾರೆಂಬುದನ್ನು ಬಹಿರಂಗಪಡಿಸಿದ್ದಾರೆ. ಈ ವರದಿ ಓದಿ.

ಬೇರೆಯವರನ್ನ ಪ್ರಶ್ನೆ ಮಾಡುವುದು ಬಹಳ ಸುಲಭ, ಆದರೆ ತಮ್ಮನ್ನ ತಾವು ಪ್ರಶ್ನೆ ಮಾಡಿಕೊಳ್ಳುವುದು ಕಷ್ಟ

ಬೇರೆಯವರನ್ನು ಪ್ರಶ್ನೆ ಮಾಡುವುದು ಬಹಳ ಸುಲಭ, ಆದರೆ ತಮ್ಮನ್ನು ತಾವು ಪ್ರಶ್ನೆ ಮಾಡಿಕೊಳ್ಳುವುದು ಕಠಿಣ ಹಾಗೂ ಬಹಳ ದೊಡ್ಡ ವಿಚಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress leader Rahul Gandhi) ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ (Kudalasangama) ಬಸವ ಜಯಂತಿ (Basava Jayanthi) ಅಂಗವಾಗಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅನೇಕರು ಪ್ರಶ್ನೆ ಕೇಳುತ್ತಾರೆ, ಸತ್ಯವನ್ನು ಅರಿಯುತ್ತಾರೆ. ಆದರೆ, ತಾವು ಅರಿತ ಸತ್ಯವನ್ನು ಸಮಾಜದಲ್ಲಿ ಹೇಳಲು ಹಿಂಜರಿಯುತ್ತಾರೆ ಎಂದಿದ್ದಾರೆ. ಈ ವರದಿ ಓದಿ

    ಹಂಚಿಕೊಳ್ಳಲು ಲೇಖನಗಳು