logo
ಕನ್ನಡ ಸುದ್ದಿ  /  ಕರ್ನಾಟಕ  /  ಮೈಸೂರಿನಲ್ಲೂ ಕುಡಿಯುವ ನೀರಿನ ಸಮಸ್ಯೆಯ ಆತಂಕ; ಜಿಲ್ಲಾಡಳಿತದಿಂದ ನಿಯಂತ್ರಣ ಕೊಠಡಿ ಸ್ಥಾಪನೆ, ಇಲ್ಲಿದೆ ಸಹಾಯವಾಣಿ ವಿವರ

ಮೈಸೂರಿನಲ್ಲೂ ಕುಡಿಯುವ ನೀರಿನ ಸಮಸ್ಯೆಯ ಆತಂಕ; ಜಿಲ್ಲಾಡಳಿತದಿಂದ ನಿಯಂತ್ರಣ ಕೊಠಡಿ ಸ್ಥಾಪನೆ, ಇಲ್ಲಿದೆ ಸಹಾಯವಾಣಿ ವಿವರ

Praveen Chandra B HT Kannada

Mar 14, 2024 06:23 PM IST

google News

ಮೈಸೂರಿನಲ್ಲೂ ಕುಡಿಯುವ ನೀರಿನ ಸಮಸ್ಯೆಯ ಆತಂಕ; ಜಿಲ್ಲಾಡಳಿತದಿಂದ ನಿಯಂತ್ರಣ ಕೊಠಡಿ ಸ್ಥಾಪನೆ

    • ಮೈಸೂರಿನಲ್ಲಿ ಬೇಸಿಗೆಯ ಆರಂಭದಲ್ಲೇ ಹಲವೆಡೆಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ. ಬಿರುಬೇಸಿಗೆಯಿಂದಾಗಿ ಜಲಮೂಲಗಳು ಬತ್ತಿ ಹೋಗುತ್ತಿವೆ. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಯಿದೆ.
ಮೈಸೂರಿನಲ್ಲೂ ಕುಡಿಯುವ ನೀರಿನ ಸಮಸ್ಯೆಯ ಆತಂಕ; ಜಿಲ್ಲಾಡಳಿತದಿಂದ ನಿಯಂತ್ರಣ ಕೊಠಡಿ ಸ್ಥಾಪನೆ
ಮೈಸೂರಿನಲ್ಲೂ ಕುಡಿಯುವ ನೀರಿನ ಸಮಸ್ಯೆಯ ಆತಂಕ; ಜಿಲ್ಲಾಡಳಿತದಿಂದ ನಿಯಂತ್ರಣ ಕೊಠಡಿ ಸ್ಥಾಪನೆ (wikipedia photo)

ಮೈಸೂರು: ಕಾವೇರಿ ಹಾಗೂ ಕಪಿಲ ನದಿಗಳು ಹರಿಯುತ್ತಿರುವ ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ ಉಂಟಾಗಿದೆ. ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟ ಕಾರಣ ಕಾವೇರಿ ಕಣಿವೆಯ ಪ್ರಮುಖ ಜಲಾಶಯಗಳ ನೀರಿನ ಮಟ್ಟ ತೀವ್ರ ಕುಸಿತ ಕಂಡಿದೆ. ಪರಿಣಾಮ ಬೇಸಿಗೆಯ ಆರಂಭದಲ್ಲೇ ಹಲವೆಡೆಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ. ಬಿರುಬೇಸಿಗೆಯಿಂದಾಗಿ ಜಲಮೂಲಗಳು ಬತ್ತಿ ಹೋಗುತ್ತಿವೆ. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಯಿದೆ. ಹಾಗಾಗಿ ಎಚ್ಚೆತ್ತುಕೊಂಡಿರುವ ಮೈಸೂರು ಜಿಲ್ಲಾಡಳಿತ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಅದರಲ್ಲೂ ಮೈಸೂರು ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸ್ಪಂದಿಸಲು ಮತ್ತು ದೂರುಗಳನ್ನು ಸ್ವೀಕರಿಸಲು ಮೈಸೂರು ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.

ಕುಡಿಯುವ ನೀರಿನ ಸಮಸ್ಯೆ: ಮೈಸೂರು ಸಹಾಯವಾಣಿ

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರು ನೀಡುವವರು ಸಹಾಯವಾಣಿಯ ಸಂಖ್ಯೆ 0821-2526355 ಕ್ಕೆ ಕರೆ ಮಾಡಬಹುದಾಗಿದೆ. ಆಯಾಯ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಯ ಮೇಲ್ವಿಚಾರಣೆಗಾಗಿ ತಲಾ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ.

ಮೈಸೂರು, ಪಿರಿಯಾಪಟ್ಟಣ ತಾಲೂಕಿನ ಜನರು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ (ಆಡಳಿತ) ದೂರವಾಣಿ ಸಂಖ್ಯೆ:- 0821-2526321, ಮೊಬೈಲ್ ಸಂಖ್ಯೆ:- 94808 73002 ಅನ್ನು ಸಂಪರ್ಕಿಸಬಹುದಾಗಿದೆ.

ನಂಜನಗೂಡು, ಹೆಚ್ ಡಿ ಕೋಟೆ ಮತ್ತು ಸರಗೂರು ತಾಲೂಕಿನ ಜನರು, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ (ಅಭಿವೃದ್ಧಿ), ದೂರವಾಣಿ ಸಂಖ್ಯೆ:- 0821-2526354, ಮೊಬೈಲ್ ಸಂಖ್ಯೆ 94806 73666 ಅನ್ನು ಸಂಪರ್ಕಿಸಬಹುದಾಗಿದೆ.

ಟಿ ನರಸೀಪುರ ತಾಲೂಕಿನ ಜನರು, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ, ದೂರವಾಣಿ ಸಂಖ್ಯೆ:- 0821-2526355, ಮೊಬೈಲ್ ಸಂಖ್ಯೆ:- 94808 73001 ಅನ್ನು ಸಂಪರ್ಕಿಸಬಹುದಾಗಿದೆ.

ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕುಗಳ ಜನರು ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ, ದೂರವಾಣಿ ಸಂಖ್ಯೆ:- 0821-2526308, ಮೊಬೈಲ್ ಸಂಖ್ಯೆ:- 94808 73004 ಅನ್ನು ಸಂಪರ್ಕಿಸಬಹುದಾಗಿದೆ.

ಹುಣಸೂರು ತಾಲೂಕಿನ ಜನರು, ಜಿಲ್ಲಾ ಪಂಚಾಯ್ತಿಯ ಮುಖ್ಯ ಲೆಕ್ಕಾಧಿಕಾರಿ, ದೂರವಾಣಿ ಸಂಖ್ಯೆ:- 0821-2526302, ಮೊಬೈಲ್ ಸಂಖ್ಯೆ 94808 73003 ಅನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ. ಮೈಸೂರು ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ ಆಯಾಯ ತಾಲೂಕುಗಳ ನಿಯಂತ್ರಣ ಕೊಠಡಿಗಳನ್ನು ಸಂಪರ್ಕಿಸಿ ತಿಳಿಸುವಂತೆ ಸೂಚಿಸಲಾಗಿದೆ.

ವರದಿ: ರಂಗಸ್ವಾಮಿ ಪಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ