ಕನ್ನಡ ಸುದ್ದಿ  /  ಕರ್ನಾಟಕ  /  Salam Aarti To Namaskara: ದೇವಾಲಯಗಳಲ್ಲಿನ್ನು ದೀವಟಿಗೆ ಸಲಾಂ, ಸಲಾಂ ಆರತಿ, ಸಲಾಂ ಮಂಗಳಾರತಿ ಇಲ್ಲ, ಸಲಾಂ ಬದಲು ನಮಸ್ಕಾರ

Salam Aarti to Namaskara: ದೇವಾಲಯಗಳಲ್ಲಿನ್ನು ದೀವಟಿಗೆ ಸಲಾಂ, ಸಲಾಂ ಆರತಿ, ಸಲಾಂ ಮಂಗಳಾರತಿ ಇಲ್ಲ, ಸಲಾಂ ಬದಲು ನಮಸ್ಕಾರ

HT Kannada Desk HT Kannada

Dec 10, 2022 02:16 PM IST

ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ

    • ರಾಜ್ಯದ ಕೆಲವು ದೇಗುಲಗಳಲ್ಲಿ ಬಳಕೆಯಲ್ಲಿದ್ದ “ದೀವಟಿಗೆ ಸಲಾಂ” ಎಂಬ ಪದದ ಬದಲಾಗಿ “ದೀವಟಿಗೆ ನಮಸ್ಕಾರ” ಎಂದು, “ಸಲಾಂ ಆರತಿ” ಎಂಬ ಪದದ ಬದಲಾಗಿ “ಆರತಿ ನಮಸ್ಕಾರ” ಎಂದು ಹಾಗೂ ʼಸಲಾಂ ಮಂಗಳಾರತಿ” ಎಂಬ ಪದದ ಬದಲಾಗಿ “ಮಂಗಳಾರತಿ ನಮಸ್ಕಾರ” ಎಂದು ಹೆಸರನ್ನು ಬಳಸಲು ನಿರ್ಧರಿಸಲಾಗಿದೆ.
ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ
ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ

ಬೆಂಗಳೂರು: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರೂಢಿಯಾಗಿ ಬಂದಿರುವ "ದೀವಟಿಗೆ ಸಲಾಂ” “ಸಲಾಂ ಆರತಿ” ಮತ್ತು “ಸಲಾಂ ಮಂಗಳಾರತಿ” ಎಂಬ ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸಿ ನಮ್ಮ ಸಂಪ್ರದಾಯದ ಹೆಸರನ್ನು ನೀಡುವ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಿಸ್ತ್ರುತವಾಗಿ ಚರ್ಚಿಸಲಾಗಿದೆ. ಈ ಪೂಜಾಕಾರ್ಯಗಳ ಹೆಸರನ್ನ ನಮ್ಮ ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾನ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ , ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Forest News: ನಾಗರಹೊಳೆಯಲ್ಲಿ ಮಿತಿ ಮೀರಿದ ಪ್ಲಾಸ್ಟಿಕ್‌ ಹಾವಳಿ, ಕಣ್ಣಾರೆ ಕಂಡ ಅರಣ್ಯ ಸಚಿವರು

Prajwal Revanna: ಪ್ರಜ್ವಲ್‌ ರೇವಣ್ಣ ಬಂಧಿಸಿ ಕರೆ ತನ್ನಿ; ಸಿಎಂಗೆ ಪತ್ರ ಬರೆದ ಕರ್ನಾಟಕದ ಚಿಂತಕರು, ಸಾಹಿತಿಗಳು

ಹಾಸನ ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣ ಇಂದು ತಡರಾತ್ರಿ ಬೆಂಗಳೂರಿಗೆ ವಾಪಸ್‌ ಎನ್ನುತ್ತಿದೆ ವರದಿ, ಲುಫ್ತಾನ್ಸಾ ಟಿಕೆಟ್‌ ವೈರಲ್‌

Bangalore Water: ಬೆಂಗಳೂರು ಸರ್ಕಾರಿ ಶಾಲೆ, ಸಂಸ್ಥೆಗಳಲ್ಲೂ ಮಳೆ ಕೊಯ್ಲು, ಇಂಗುಗುಂಡಿ; ಜಲಮಂಡಳಿ ಯೋಜನೆ

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಕೆಲವು ದೇವಾಲಯಗಳಲ್ಲಿ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಸಂಧರ್ಭಗಳಲ್ಲಿ ದೀವಟಿಗೆ ಹಿಡಿದು ದೇವಾಲಯಕ್ಕೆ ಮತ್ತು ದೇವರಿಗೆ ಆರತಿಯಂತೆ ನಡೆಸುವ ಕಾರ್ಯಕ್ಕೆ ದೀವಟಿಗೆ ಸಲಾಂ, ಸಲಾಂ ಮಂಗಳಾರತಿ ಮತ್ತು ಸಲಾಂ ಆರತಿ ಎಂದು ಕೆಲವು ದೇವಾಲಯಗಳಲ್ಲಿ ಕರೆಯಲಾಗುತ್ತಿದೆ. ಇದನ್ನ ಬದಲಾಯಿಸಬೇಕು ಎನ್ನುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಕ್ತಾದಿಗಳಿಂದ ಸಾಕಷ್ಟು ಒತ್ತಾಯ ಇರುವ ಬಗ್ಗೆ, ಧಾರ್ಮಿಕ ಪರಿಷತ್ತಿನ ಸದಸ್ಯರು ಸಭೆಯ ಗಮನಕ್ಕೆ ತಂದರು. ಇದರ ಹಿನ್ನಲೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಚರ್ಚೆಯನ್ನು ನಡೆಸಲಾಯಿತು.

ಈ ಹಿನ್ನಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಹಿರಿಯ ಆಗಮ ಪಂಡಿತರ ಅಭಿಪ್ರಾಯದಂತೆ ದೇವಾಲಯಗಳಲ್ಲಿ ಇನ್ನು ಮುಂದೆ “ದೀವಟಿಗೆ ಸಲಾಂ” ಎಂಬ ಪದದ ಬದಲಾಗಿ “ದೀವಟಿಗೆ ನಮಸ್ಕಾರ” ಎಂದು, “ಸಲಾಂ ಆರತಿ” ಎಂಬ ಪದದ ಬದಲಾಗಿ “ಆರತಿ ನಮಸ್ಕಾರ” ಎಂದು ಹಾಗೂ ʼಸಲಾಂ ಮಂಗಳಾರತಿ” ಎಂಬ ಪದದ ಬದಲಾಗಿ “ಮಂಗಳಾರತಿ ನಮಸ್ಕಾರ” ಎಂದು ಹೆಸರನ್ನು ಬದಲಾಯಿಸಿಕೊಂಡು ಸೇವೆಗಳನ್ನು ಮತ್ತು ಸೇವಾಕಾರ್ಯಗಳನ್ನು ಮುಂದುವರೆಸಲು ಸುತ್ತೋಲೆ ಹೊರಡಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಸಲಾಂ ಆರತಿ ಪೂಜೆ ರದ್ದುಪಡಿಸಲಾಗಿಲ್ಲ

ಕೇವಲ ಬೇರೆ ಭಾಷೆಯ ಪದಗಳನ್ನು ಬದಲಾಯಿಸಿ, ನಮ್ಮ ಭಾಷೆಯ ಪದವನ್ನು ಅಳವಡಿಸಿ ಈ ಹಿಂದಿನಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಮತ್ತು ಪೂಜೆಗಳನ್ನು ಮುಂದುವರೆಸಲಾಗುವುದು. ಪೂಜಾ ಕಾರ್ಯಗಳನ್ನು ರದ್ದುಪಡಿಸಲಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವಂತಹ ಎ ಮತ್ತು ಬಿ ವರ್ಗದ ದೇವಸ್ಥಾನಗಳು ಪ್ರತಿವರ್ಷ ಆಡಿಟ್‌ ಮಾಡಿಸುವುದು ಕಡ್ಡಾಯ. ಆದರೆ, ಹಲವಾರು ದೇವಸ್ಥಾನಗಳಲ್ಲಿ ಹಲವಾರು ವರ್ಷಗಳಿಂದ ಆಡಿಟ್‌ ಮಾಡಿಸಿರಲಿಲ್ಲ. ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಜವಾಬ್ದಾರಿ ತಗೆದುಕೊಂಡ ನಂತರ ದೇವಸ್ಥಾನಗಳ ಆಡಳಿತದಲ್ಲಿ, ಭಕ್ತರು ನೀಡುವ ಕಾಣಿಕೆಯ ಬಳಕೆಯ ಪಾರದರ್ಶಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಡಿಟ್‌ ವರದಿಯನ್ನ ಆಯಾ ವರ್ಷವೇ ಸಲ್ಲಿಸುವುದರ ಬಗ್ಗೆ ಕಟ್ಟುನಿಟ್ಟು ಆದೇಶ ನೀಡಲಾಗಿತ್ತು. ದೇವಸ್ಥಾನಗಳು ತಮ್ಮ ಆಡಿಟ್‌ ವರದಿಯನ್ನ ಸರ್ಕಾರಿ ಲೆಕ್ಕಪತ್ರ ಇಲಾಖೆಯಿಂದಲೇ ಆಡಿಟ್‌ ಮಾಡಿಸಿ ವರದಿ ಸಲ್ಲಿಸಿದ್ದಾರೆ. ಖಾಸಗಿ ಸಂಸ್ಥೆಗಳಿಗೆ ಆಡಿಟ್‌ ಹೊಣೆಯನ್ನು ನೀಡಲಾಗಿದೆ ಎನ್ನುವ ಕೆಲವರ ಆರೋಪ ಸತ್ಯಕ್ಕೆ ದೂರವಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ