logo
ಕನ್ನಡ ಸುದ್ದಿ  /  ಕರ್ನಾಟಕ  /  Dk Shivakumar On Congress Ticket: ಮುಂದಿನ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್: ಡಿ ಕೆ ಶಿವಕುಮಾರ್

DK Shivakumar on Congress Ticket: ಮುಂದಿನ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್: ಡಿ ಕೆ ಶಿವಕುಮಾರ್

HT Kannada Desk HT Kannada

Nov 25, 2022 03:27 PM IST

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

  • ಮತದಾರರ ಮಾಹಿತಿ ಕಳವು, ಮಾರಾಟ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ತೆಗೆದಿರುವ ಬಗ್ಗೆ ತನಿಖೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಆಯೋಗವು ಉಪ ಆಯುಕ್ತರನ್ನು ತನಿಖೆಗೆ ನೇಮಕ ಮಾಡಿದ್ದು, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ. 

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

CET Results2024: ಕರ್ನಾಟಕ ಸಿಇಟಿ ಫಲಿತಾಂಶ ಇಂದು ಪ್ರಕಟ ಸಾಧ್ಯತೆ, ನಿಮ್ಮ ಅಂಕ ನೋಡುವುದು ಹೀಗೆ

Bangalore News: ತಮಿಳುನಾಡಿನಲ್ಲಿ ಗುಂಡು ತಗುಲಿ ಬೆಂಗಳೂರಿನ ಯೋಧ ಸಾವು

Hassan Scandal: ಗೃಹ ಇಲಾಖೆ ಬೇರೆಯವರಿಂದ ಹೈಜಾಕ್‌‌, ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ, ಅಶೋಕ ಆರೋಪ

Karnataka Rains: ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹೊಸದುರ್ಗ,ಚನ್ನಗಿರಿಯಲ್ಲಿ ಭಾರೀ ಮಳೆ, ನಿಮ್ಮೂರಲ್ಲಿ ಎಷ್ಟು ಮಳೆಯಾಗಿದೆ ?

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಅರ್ಜಿ ಸಲ್ಲಿಸುವಾಗ ಆಕಾಂಕ್ಷಿಗಳಿಂದ ದೇಣಿಗೆ ಸಂಗ್ರಹ ವಿಚಾರ ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದರು.

ಅರ್ಜಿ ಸಲ್ಲಿಕೆ ನಂತರ ಆಕಾಂಕ್ಷಿಗಳು ಸಿದ್ದರಾಮಯ್ಯ ಹಾಗೂ ನಿಮ್ಮ ಮನೆಗೆ ಭೇಟಿ ನೀಡುತ್ತಿರುವುದರಿಂದ ತೊಂದರೆ ಆಗುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ, 'ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಸಾಧ್ಯವಿಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ ಎಂದು ಹೇಳಿದರು. ಇಂದು ಯಾವುದೇ ಚರ್ಚೆ ಇರುವುದಿಲ್ಲ. ನಮ್ಮ ನಾಯಕರಿಗೆ ಕೆಲವು ಮಾರ್ಗದರ್ಶನ ನೀಡಲಾಗುವುದು ಎಂದು ತಿಳಿಸಿದರು.

ಕೇಂದ್ರ ಚುನಾವಣಾ ಆಯೋಗದಿಂದ ಕ್ರಮದ ಭರವಸೆ

ಪಕ್ಷದ ನಾಯಕ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಮತದಾರರ ಮಾಹಿತಿ ಕಳವು, ಮಾರಾಟ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ತೆಗೆದಿರುವ ಬಗ್ಗೆ ತನಿಖೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಆಯೋಗವು ಉಪ ಆಯುಕ್ತರನ್ನು ತನಿಖೆಗೆ ನೇಮಕ ಮಾಡಿದ್ದು, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಈ ಮಧ್ಯೆ ತಮ್ಮನ್ನು ತಾವೇ ಗಂಡಸು ಎಂದು ಗಂಡಸ್ಥನದ ಬಗ್ಗೆ ಮಾತನಾಡುತ್ತಿದ್ದವರು ಹಾಗೂ ಚಿಲುಮೆ ಸಂಸ್ಥೆಯ ಪ್ರಮುಖ ಕಿಂಗ್ ಪಿನ್ ಗಳು ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಹಲವು ವ್ಯಕ್ತಿಗಳ ಖಾತೆಗೆ ಹಣ ಹಾಕಿಸಿ, ಅವುಗಳನ್ನು ನಗದೀಕರಣ ಮಾಡಿಕೊಂಡಿದ್ದಾರೆ. ಇವರೆಲ್ಲರೂ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಈ ಹಣವನ್ನು ಯಾರು ಯಾವ ಕಾರಣಕ್ಕೆ ಯಾರಿಗೆ ವರ್ಗಾವಣೆ ಮಾಡಿದ್ದಾರೆ ಎಂಬ ಅಂಶ ಬೆಳಕಿಗೆ ಬರಬೇಕು ಎಂದರು.

ನಮ್ಮ ಬಗ್ಗೆ ಏನೇ ಮಾಹಿತಿ ಇದ್ದರೂ ಇದರ ವಿಚಾರವನ್ನು ಮಾಧ್ಯಮಗಳ ವಿವೇಚನೆಗೆ ಬಿಡುತ್ತೇವೆ. ಕೆಲ ಮಾಧ್ಯಮಗಳು ಈ ರೈತರ ಜತೆ ಮಾತುಕತೆ ನಡೆಸಿವೆ. ಇವರು ಹೇಳಿಕೊಂಡಿರುವ ವಿಚಾರ ಬಯಲಾಗಿದ್ದು, ಈ ಬಗ್ಗೆ ತನಿಖೆಯಾಗಬೇಕು. ಪ್ರತಿ ಬೂತ್ ಗಳಲ್ಲಿ ಮತಗಳನ್ನು ಉಳಿಸಿಕೊಳ್ಳಲು ಜಾಗೃತಿ ಮೂಡಿಸಲು ಮಾರ್ಗದರ್ಶನ ನೀಡಲಾಗುವುದು. ಈ ಸರ್ಕಾರ ಅಲ್ಪಸಂಖ್ಯಾತರು, ಪರಿಶಿಷ್ಟರ ಮತಗಳನ್ನು ಕಿತ್ತುಹಾಕುತ್ತಿದ್ದು, ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಅರ್ಜಿ ಹಾಕಿರುವ ಎಲ್ಲರೂ ಹಳ್ಳಿಗಳಿಗೆ ಹೋಗಿ ಪಕ್ಷ ಸಂಘಟನೆ ಮಾಡಬೇಕು. ಕ್ಷೇತ್ರ ಮಟ್ಟದಲ್ಲಿ ಆಗಿರುವ ಅನ್ಯಾಯದ ಬಗ್ಗೆ ಹೋರಾಟ ಮಾಡಬೇಕು. ಈ ಬಗ್ಗೆ ಮಾರ್ಗದರ್ಶನ ನೀಡಲಾಗುವುದು ಎಂದು ತಿಳಿಸಿದರು.

ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರ ತಗಾದೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಇದೆಲ್ಲ ಬಿಜೆಪಿಯ ಮ್ಯಾಚ್ ಫಿಕ್ಸಿಂಗ್. ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಇದೆ. ಈ ವಿಚಾರವಾಗಿ ಫಡ್ನವೀಸ್ ಏನು ಹೇಳಿದ್ದಾರೆ? ಅವರು ಬೆಳಗಾವಿ ಮಾತ್ರವಲ್ಲ, ಕಾರವಾರವನ್ನು ಕಬಳಿಸಲು ನೋಡುತ್ತಿದ್ದಾರೆ. ಇದೆಲ್ಲವೂ ಪೂರ್ವನಿಯೋಜಿತ ಷಡ್ಯಂತ್ರ. ರಾಜ್ಯದ ಒಂದು ಅಡಿ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆ ಇಲ್ಲ. ರಾಜ್ಯದಲ್ಲಿರುವ ಮರಾಠಿಗರು ನಮ್ಮ ರಾಜ್ಯದವರೇ. ಅವರ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ. ನಮ್ಮ ಸರ್ಕಾರಗಳು ಅದನ್ನು ಮಾಡಿಕೊಂಡು ಬರುತ್ತಿವೆ. ಈಗ ರಾಜಕೀಯ ಉದ್ದೇಶಕ್ಕೆ ಈ ರೀತಿ ಮಾತನಾಡುತ್ತಿದ್ದಾರ ಎಂದು ತಿಳಿಸಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ