logo
ಕನ್ನಡ ಸುದ್ದಿ  /  Karnataka  /  Our Stand Is Constitutional And Legal Says Cm Bommai On Border Dispute

CM Bommai on border dispute: ಗಡಿ ವಿವಾದ; ರಾಜ್ಯದ ನಿಲುವು ಸಂವಿಧಾನಬದ್ದ ಎಂದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

HT Kannada Desk HT Kannada

Dec 01, 2022 01:36 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

    • ಸುಪ್ರೀಂಕೋರ್ಟ್​ನಲ್ಲಿ ಗಡಿ ವಿವಾದದ ಪ್ರಕರಣ ಇಂದು ವಿಚಾರಣೆಗೆ ಬರಲಿದ್ದು, ಕರ್ನಾಟಕದ ನಿಲುವು ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸುಪ್ರೀಂಕೋರ್ಟ್​ನಲ್ಲಿ ಗಡಿ ವಿವಾದದ ಪ್ರಕರಣ ಇಂದು ವಿಚಾರಣೆಗೆ ಬರಲಿದ್ದು, ಕರ್ನಾಟಕದ ನಿಲುವು ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಟ್ರೆಂಡಿಂಗ್​ ಸುದ್ದಿ

Hassan Scandal; ಪ್ರಜ್ವಲ್ ರೇವಣ್ಣ ಜರ್ಮನಿಗೆ?, ಎಸ್‌ಐಟಿ ಅವರನ್ನು ವಾಪಸ್ ಕರೆತರುವುದು ಹೇಗೆ, ಭಾರತ ಜರ್ಮನಿ ಹಸ್ತಾಂತರ ಒಪ್ಪಂದದ 5ಮುಖ್ಯಾಂಶ

KE Kantesh: ಮಾನಹಾನಿ ವರದಿಗೆ ತಡೆಯಾಜ್ಞೆ ತಂದ ಕೆ ಇ ಕಾಂತೇಶ್‌, ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಪುತ್ರನಿಗೆ ಅಶ್ಲೀಲ ವಿಡಿಯೋ ಫೋಟೋ ಆತಂಕ

Hassan Sex Scandal: ಪ್ರಜ್ವಲ್ ರೇವಣ್ಣ, ಹೆಚ್ ಡಿ ರೇವಣ್ಣಗೆ ಎಸ್‌ಐಟಿ ನೋಟಿಸ್‌, ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ

ಬೆಂಗಳೂರು: ಫ್ರೀ ಮೊಬೈಲ್‌ ಸಿಕ್ತು ಅಂತ ಸಿಮ್ ಹಾಕಿ 72 ಲಕ್ಷ ರೂ ಕಳಕೊಂಡರು 56 ವರ್ಷದ ವ್ಯಕ್ತಿ, ಸಂತ್ರಸ್ತ ಖಾಸಗಿ ಸಂಸ್ಥೆಯ ಮುಖ್ಯಸ್ಥ

ಅವರು ಇಂದು ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತ ಯ್ಯನವರ ಪುಣ್ಯತಿಥಿಯ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಹಾರಾಷ್ಟ್ರದ ಅರ್ಜಿ ಮೈಂಟೆನಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ. ನಮ್ಮ ನಿಲುವು ಸಂವಿಧಾನಬದ್ದ ಹಾಗೂ ಕಾನೂನಾತ್ಮಕವಾಗಿದೆ. ಎಲ್ಲಾ ಅಂಶಗಳ ಬಗ್ಗೆ ವಕೀಲರು ವಾದ ಮಾಡಲಿದ್ದಾರೆ ಎಂದರು.

ಪಕ್ಷದಲ್ಲಿ ರೌಡಿಗಳಿಗೆ ಅವಕಾಶವಿಲ್ಲ

ಪಕ್ಷದಲ್ಲಿ ಯಾವುದೇ ರೌಡಿಗಳನ್ನು ನಾವು ಸೇರ್ಪಡೆ ಮಾಡುವುದಿಲ್ಲ. ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು.

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು: ಚರ್ಚೆಯಾಗಿಲ್ಲ

ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು ಹಿಜಾಬ್ ಧರಿಸಲು ಅನುಮತಿ ನೀಡುವು ದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಸರ್ಕಾರದಲ್ಲಿ ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಬೇಕು ಎಂದರು.

ಕರ್ನಾಟಕಕ್ಕೆ ಅಭಿವೃದ್ಧಿಯ ನೀಲನಕ್ಷೆ ಒದಗಿಸಿದವರು ಕೆಂಗಲ್‌ ಹನುಮಂತಯ್ಯನವರು

ಕೆಂಗಲ್ ಹನುಮಂತಯ್ಯನವರು ಕರ್ನಾಟಕದ ಅಭಿವೃದ್ಧಿಗೆ ನೀಲನಕ್ಷೆ ಹಾಕಿಕೊಟ್ಟವರು. ವಿಧಾನಸೌಧದ ನಿರ್ಮಾತೃ, ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯ ನಿಮಿತ್ತ ಅವರನ್ನು ಇಂದು ಸ್ಮರಿಸಿದ್ದೇವೆ. ಇಂದು ಅವರ ಕಾರ್ಯಕ್ರಮಗಳು, ಬಿಟ್ಟು ಹೋಗಿರುವ ತತ್ತ್ವ ಆದರ್ಶಗಳನ್ನು ಸ್ಮರಿಸುವ ದಿನವಾಗಿದೆ ಎಂದರು.

ಕೆಂಗಲ್ ಹನುಮಂತಯ್ಯ ಅವರು ಮೈಸೂರು ಪ್ರಾಂತ್ಯದ ಅತ್ಯಂತ ಹಿರಿಯ, ಪ್ರಮುಖ ನಾಯಕರಾಗಿದ್ದರು. ಕರ್ನಾಟಕದ ಏಕೀಕರಣದಲ್ಲಿ ಮಹತ್ವದ ಪಾತ್ರವನ್ನು ವಹಿಸಿ ಅವರು ಇಡೀ ಕನ್ನಡ ನಾಡಿನ ಬಗ್ಗೆ ಅಪ್ರತಿಮ ಪ್ರೀತಿ, ಕನ್ನಡಿಗರು ಒಂದಾಗಬೇಕೆಂಬ ಹೆಬ್ಬಯಕೆ ಇತ್ತು. ಮೈಸೂರು ಒಡೆಯರ ರಾಜಮನೆತನದ ಪ್ರಭಾವ ಅವರ ಮೇಲಿತ್ತು. ಅಭಿವೃದ್ಧಿಯನ್ನು ರಾಜಕಾರಣದ ಮೂಲ ಮಂತ್ರವಾಗಬೇಕು ಎಂದು ನಾಡಿನ ಅಭಿವೃದ್ಧಿಯ ಬಗ್ಗೆ ಸದಾ ಚಿಂತನೆ ಮಾಡಿದವರು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಂಸದ ಮುನಿಸ್ವಾಮಿ, ಕೆಂಗಲ್ ಹನುಮಂತಯ್ಯ ಅವರ ಕುಟುಂಬ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು