logo
ಕನ್ನಡ ಸುದ್ದಿ  /  ಕರ್ನಾಟಕ  /  Pm Kusum Yojana: ಪಿ,ಎಂ. ಕುಸುಮ್ ಯೋಜನೆಯಲ್ಲಿ ರೈತರ ಪಂಪ್‍ಸೆಟ್‍ಗಳನ್ನು ಸೌರಶಕ್ತಿಗೆ ಪರಿವರ್ತಿಸಲು ಕ್ರಮ - ಸಚಿವ ವಿ. ಸುನಿಲ್ ಕುಮಾರ್

PM KUSUM yojana: ಪಿ,ಎಂ. ಕುಸುಮ್ ಯೋಜನೆಯಲ್ಲಿ ರೈತರ ಪಂಪ್‍ಸೆಟ್‍ಗಳನ್ನು ಸೌರಶಕ್ತಿಗೆ ಪರಿವರ್ತಿಸಲು ಕ್ರಮ - ಸಚಿವ ವಿ. ಸುನಿಲ್ ಕುಮಾರ್

HT Kannada Desk HT Kannada

Feb 13, 2023 08:59 PM IST

google News

ಇಂಧನ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್

  • PM KUSUM yojana: ರಾಜ್ಯದಲ್ಲಿ 2022ರ ಡಿಸೆಂಬರ್ ಅಂತ್ಯಕ್ಕೆ ಒಟ್ಟು 33,11,436 ರೈತರ ಕೃಷಿ ಪಂಪ್ ಸೆಟ್‍ಗಳಿಗೆ ವಿದ್ಯತ್ ಸಂಪರ್ಕ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರವು ಸೌರ ಚಾಲಿತ ಕೃಷಿ ಪಂಪ್‍ಸೆಟ್‍ಗಳನ್ನು ಅಳವಡಿಸುವ ಕಾರ್ಯವನ್ನು 2019ರ ಜುಲೈ 22ರಿಂದ ಜಾರಿಗೆ ತಂದಿರುತ್ತದೆ ಎಂದು ಸಚಿವ ವಿ.ಸುನಿಲ್‌ ಕುಮಾರ್‌ ಹೇಳಿದರು.

ಇಂಧನ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್
ಇಂಧನ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್

ಬೆಂಗಳೂರು: ಪಿ.ಎಂ. ಕುಸುಮ್ ಯೋಜನೆ (PM KUSUM yojana) ಯಡಿ ರೈತರ ಪಂಪ್‍ಸೆಟ್‍ಗಳನ್ನು ಸೌರ ಶಕ್ತಿಗೆ ಪರಿವರ್ತಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.

ಅವರು ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯ ಸಿ.ಎನ್. ಮಂಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತ ಈ ವಿಚಾರ ತಿಳಿಸಿದರು.

ರಾಜ್ಯದಲ್ಲಿ 2022ರ ಡಿಸೆಂಬರ್ ಅಂತ್ಯಕ್ಕೆ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಒಟ್ಟು 33,11,436 ರೈತರ ಕೃಷಿ ಪಂಪ್ ಸೆಟ್‍ಗಳಿಗೆ ವಿದ್ಯತ್ ಸಂಪರ್ಕ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರವು ಸೌರ ಚಾಲಿತ ಕೃಷಿ ಪಂಪ್‍ಸೆಟ್‍ಗಳನ್ನು ಅಳವಡಿಸುವ ಕಾರ್ಯಕ್ರಮವನ್ನು 2019ರ ಜುಲೈ 22ರಿಂದ ಜಾರಿಗೆ ತಂದಿರುತ್ತದೆ.

ಪಿ.ಎಂ. ಕುಸುಮ್ ಕಂಪೊನೆಂಟ್ - ಬಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ 7.5 ಎಚ್.ಪಿ. ಸಾಮರ್ಥ್ಯದ ಸೌರ ಪಂಪ್ ಸೆಟ್‍ಗೆ ಶೇಕಡ 30 ಕೇಂದ್ರ ಸರ್ಕಾರದಿಂದ ಸಹಾಯಧನ ಒದಗಿಸುತ್ತದೆ. ಸರ್ಕಾರದ 2022ರ ಮಾರ್ಚ್‌ 19ರ ಆದೇಶ ಪ್ರಕಾರ ರಾಜ್ಯ ಸರ್ಕಾರದಿಂದ ಸಾಮಾನ್ಯ ವರ್ಗದ ರೈತ ಫಲಾನುಭವಿಗಳಿಗೆ ಪ್ರತಿ ಸೌರ ಪಂಪ್ ಸೆಟ್‍ಗೆ ಶೇಕಡ 30 ರಷ್ಟು ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗದ ಫಲಾನುಭವಿಯ ಪಂಪ್ ಸೆಟ್‍ಗೆ ಶೇಕಡ 50 ರಷ್ಟು ಸಹಾಯಧನ ಒದಗಿಸಲಾಗುವುದು. ಇನ್ನುಳಿದ ಹಣವನ್ನು ರೈತ ಫಲಾನುಭವಿಗಳಿಂದ ಭರಿಸಿ ಯೋಜನೆಯನ್ನು ಕ್ರೆಡಲ್ ಮೂಲಕ ಅನುಷ್ಟಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ಯೋಜನೆಯಡಿ 1532 ಅರ್ಜಿಗಳು ಆನ್‍ಲೈನ್ ಮೂಲಕ ನೊಂದಣಿಗೊಂಡಿದ್ದು, ಎಂಪ್ಯಾನೆಲ್ಡ್ ಏಜೆನ್ಸಿಗಳಿಗೆ ಕಾರ್ಯಾದೇಶ ನೀಡುವ ಕಾರ್ಯವು ಪ್ರಗತಿಯಲ್ಲಿದ್ದು, ಅನುಷ್ಠಾನ ಕಾರ್ಯವನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು.

ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮಾರ್ಗ ಸೂಚಿಗಳ ಅನ್ವಯ ಸದರಿ ಯೋಜನೆಯು ಜಾಲಮುಕ್ತ ನೀರಾವರಿ ಪಂಪ್‍ಸೆಟ್‍ಗಳಿಗೆ ಸೀಮಿತವಾಗಿದ್ದು, ಈಗಾಗಲೇ ಗ್ರಿಡ್ ವ್ಯವಸ್ಥೆಯಿಂದ ವಿದ್ಯುತ್ ಸರಬರಾಜು ಹೊಂದಿದ ಕೃಷಿ ಪಂಪ್‍ಸೆಟ್‍ಗಳಿಗೆ ಪಿ.ಎಂ. ಕುಸುಮ್‌ ಕಾಂಪೊನೆಂಟ್- ಬಿ ಯೋಜನೆ ಅನ್ವಯಿಸುವುದಿಲ್ಲ.

ಕೇಂದ್ರ ಸರ್ಕಾರದ ಪಿ.ಎಂ. ಕುಸುಮ್ ಕಾಂಪೊನೆಂಟ್ - ಸಿ (ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ್) ಯೋಜನೆಯಡಿ ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವಿಧಾನಸಭೆಯಲ್ಲಿಂದು - ಗಮನಿಸಬಹುದಾದ ಸುದ್ದಿಗಳು

ಹೊಸ ತಾಲೂಕುಗಳಿಗೆ ಆಡಳಿತ ಸೌಧ ನಿರ್ಮಾಣ; ತಲಾ 10 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ- ವಿವರ ನೀಡಿದ ಸಚಿವ ಅಶೋಕ

Karnataka assembly session: ಹೊಸದಾಗಿ ರಚನೆಯಾದ ಕೆಜಿಎಫ್, ಮೂಡಬಿದರೆ,ಕಡಬ,ಮೂಲ್ಕಿ, ಬ್ರಹ್ಮಾವರ, ಕಾಪು, ಬೈಂದೂರು, ಹೆಬ್ರಿ, ಕುರುಗೋಡು, ಕಂಪ್ಲಿ, ಬಬಲೇಶ್ವರ, ತಿಕೋಟಾ ತಾಲೂಕುಗಳಲ್ಲಿ ತಲಾ 10 ಕೋಟಿ ರೂಪಾಯಿ ವೆಚ್ಚದಲ್ಲಿ ತಾಲೂಕು ಆಡಳಿತ ಸೌಧಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಚಿವ ಆರ್. ಅಶೋಕ ತಿಳಿಸಿದರು. ವಿವರ ಓದಿಗೆ ಇಲ್ಲಿ ಕ್ಲಿಕ್‌ ಮಾಡಿ

ವಿವಿಧ ವಸತಿ ಯೋಜನೆಗಳಲ್ಲಿ 3200 ಕೋಟಿ ರೂಪಾಯಿಗೂ ಅಧಿಕ ಅನುದಾನ; ಸದನಕ್ಕೆ ಸಚಿವ ವಿ.ಸೋಮಣ್ಣ ಮಾಹಿತಿ

Karnataka housing scheme: ವಸತಿ ಇಲಾಖೆಯಿಂದ ಅನುಷ್ಠಾನ ಮಾಡಲಾಗುತ್ತಿರುವ ವಿವಿಧ ವಸತಿ ಯೋಜನೆಗಳಿಗೆ ಪ್ರಸಕ್ತ ಆರ್ಥಿಕ ವರ್ಷ ಅಂದರೇ 2022-23ನೇ ಸಾಲಿನಲ್ಲಿ 3218.84 ಕೋಟಿ ರೂಪಾಯಿ ಅನುದಾನವನ್ನು ಹಂಚಿಕೆ ಮಾಡಲಾಗುವುದು ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು. ಪೂರ್ಣ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ