logo
ಕನ್ನಡ ಸುದ್ದಿ  /  ಕರ್ನಾಟಕ  /  Pm Modi Roadshow In Mandya: ಮಂಡ್ಯದಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಸಕ್ಕರೆ ನಾಡಿನ ಜನರಿಂದ ಅದ್ಧೂರಿ ಸ್ವಾಗತ: ವಿಡಿಯೋ

PM Modi roadshow in Mandya: ಮಂಡ್ಯದಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಸಕ್ಕರೆ ನಾಡಿನ ಜನರಿಂದ ಅದ್ಧೂರಿ ಸ್ವಾಗತ: ವಿಡಿಯೋ

Raghavendra M Y HT Kannada

Mar 12, 2023 01:00 PM IST

ಮಂಡ್ಯದಲ್ಲಿ ಬೃಹತ್ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ

  • ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ವೇಳೆ ಪುಷ್ಪಾರ್ಚನೆ ಮಾಡುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

ಮಂಡ್ಯದಲ್ಲಿ ಬೃಹತ್ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ
ಮಂಡ್ಯದಲ್ಲಿ ಬೃಹತ್ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಸಕ್ಕರೆ ನಾಡಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಅವರು ಮಂಡ್ಯದ ರೋಡ್ ಶೋ ನಡೆಸಿದರು. ಈ ವೇಳೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು, ನಮೋ ಬೆಂಬಲಿಗರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಪುಷ್ಪಾರ್ಚನೆ ಮಾಡುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು.

ಟ್ರೆಂಡಿಂಗ್​ ಸುದ್ದಿ

ಸೋಮವಾರ ರಾತ್ರಿಯಿಂದ 108 ಆಂಬುಲೆನ್ಸ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಆರೋಗ್ಯ ಸೇವೆಯಲ್ಲಿ ವ್ಯತ್ಯಯ; ಅವರ ಬೇಡಿಕೆಗಳೇನು?

Hassan Scandal: 4 ದಿನ ಎಸ್‌ಐಟಿ ವಶಕ್ಕೆ ಮಾಜಿ ಸಚಿವ ರೇವಣ್ಣ, ತೀವ್ರ ವಿಚಾರಣೆ ಸಾಧ್ಯತೆ

Bangalore Metro:ಮೆಟ್ರೋದಲ್ಲೇ ಬೆಂಗಳೂರು ಸುತ್ತುವ ಅವಕಾಶ, 5 ವರ್ಷದಲ್ಲಿ ನಮ್ಮ ಮೆಟ್ರೋ ಜಾಲಕ್ಕೆ 16 ಇಂಟರ್‌ಚೇಂಜ್‌ ನಿಲ್ದಾಣಗಳ ಸೇರ್ಪಡೆ

Hassan Scandal: ಪ್ರಜ್ವಲ್‌ ರೇವಣ್ಣ ಪ್ರಕರಣ, ಎಸ್‌ಐಟಿಯಿಂದ ಸಹಾಯವಾಣಿ, ಈ ಸಂಖ್ಯೆಗೆ ಮಾಹಿತಿ ನೀಡಿ

ಮಂಡ್ಯದ ಪ್ರವಾಸಿಮಂದಿರದಿಂದ ನಂದಾ ಸರ್ಕಲ್ ವರೆಗೆ ರೋಡ್ ಶೋ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದು ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ಆಗಮಿಸಿದರು. ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನಮೋ ಅವರನ್ನು ಸ್ವಾಗತಿಸಿದರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿಯವರು ದೇಶಕ್ಕೆ ಸಮರ್ಪಿಸಲಿದ್ದಾರೆ. ಯೋಜನೆಯು NH-275 ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗದ 6 ಪಥಗಳನ್ನು ಒಳಗೊಂಡಿದೆ.

118 ಕಿಮೀ ಉದ್ದದ ಯೋಜನೆಯನ್ನು ಒಟ್ಟು 8,480 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು 3 ಗಂಟೆಗಳಿಂದ ಸುಮಾರು 75 ನಿಮಿಷಕ್ಕೆ ಕಡಿಮೆ ಮಾಡಲಾಗಿದೆ ಎಂದು ಪಿಎಂಒ ಹೇಳಿದೆ.

    ಹಂಚಿಕೊಳ್ಳಲು ಲೇಖನಗಳು