logo
ಕನ್ನಡ ಸುದ್ದಿ  /  ಕರ್ನಾಟಕ  /  Pm Modi: ಭಾರತೀಯ ಯುವ ಪ್ರತಿಭೆಗಳು ಜಗತ್ತನ್ನು ಬೆರಗುಗೊಳಿಸುತ್ತಿವೆ: ಹುಬ್ಬಳ್ಳಿಯಲ್ಲಿ ಯುವಶಕ್ತಿಗೆ ಸಲಾಂ ಹೇಳಿದ ಮೋದಿ

PM Modi: ಭಾರತೀಯ ಯುವ ಪ್ರತಿಭೆಗಳು ಜಗತ್ತನ್ನು ಬೆರಗುಗೊಳಿಸುತ್ತಿವೆ: ಹುಬ್ಬಳ್ಳಿಯಲ್ಲಿ ಯುವಶಕ್ತಿಗೆ ಸಲಾಂ ಹೇಳಿದ ಮೋದಿ

HT Kannada Desk HT Kannada

Jan 12, 2023 06:06 PM IST

ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಿದ ಪ್ರಧಾನಿ

    • ಹುಬ್ಬಳ್ಳಿಯಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಯುವ ಸಮುದಾಯ ಎಲ್ಲಾ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಿದ ಪ್ರಧಾನಿ
ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಿದ ಪ್ರಧಾನಿ (ANI)

ಹುಬ್ಬಳ್ಳಿ: ಭಾರತದ ಪ್ರತಿಯೊಂದು ಕ್ಷೇತ್ರದಲ್ಲೂ ಯುವ ಪ್ರತಿಭೆಗಳು ಅಸಾಧಾರಣ ಸಾಧನೆ ಮಾಡುತ್ತಿದ್ದು, ಭಾರತೀಯ ಯುವ ಸಮುದಾಯವು ತನ್ನ ನಂಬಲಸಾಧ್ಯವಾದ ಪ್ರತಿಭೆಯಿಂದ ಜಗತ್ತನ್ನು ಬೆರಗುಗೊಳಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

Hassan Scandal : ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ

Wildlife News: ಹುಲಿ ಉಗುರು ಪ್ರಕರಣ, ವನ್ಯಜೀವಿಗಳ ಅಂಗಾಂಗ ಹಸ್ತಾಂತರ ಇನ್ನಷ್ಟು ವಿಳಂಬ ಸಾಧ್ಯತೆ

ಹುಬ್ಬಳ್ಳಿಯಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಯುವ ಸಮುದಾಯ ಎಲ್ಲಾ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಭಾರತೀಯ ಯುವಕರ ಪ್ರತಿಭೆ ಮತ್ತು ಸಾಮರ್ಥ್ಯದ ನಂಬಲಸಾಧ್ಯವಾದ ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ಜಾಗತಿಕ ವೇದಿಕೆಗಳಲ್ಲಿ ಸ್ಪರ್ಧೆಗಳು ನಡೆದಾಗ, ಭಾರತೀಯ ಯುವಕರ ಪ್ರತಿಭೆ ಕಂಡು ಜಗತ್ತನ್ನು ಬೆರಗಾಗುತ್ತದೆ ಎಂದು ಪ್ರಧಾನಿ ಮೋದಿ ನುಡಿದರು.

ದೇಶ ಈಗ ಅಮೃತ ಕಾಲದಲ್ಲಿದ್ದು, ಯುವಕರು ತಮ್ಮ ರಾಷ್ಟ್ರೀಯ ಕರ್ತವ್ಯಗಳ ಮೇಲೆ ಹೆಚ್ಚಿನ ಒತ್ತು ನೀಡಬೇಕಿದೆ. ನಾವು ರಾಷ್ಟ್ರವನ್ನು ಮುಂದಕ್ಕೆ ಕೊಂಡೊಯ್ಯಬೇಕಾಗಿದೆ. ಭಾರತದ ಯುವ ಸಮುದಾಯ ಸದಾಕಾಲ ಸ್ವಾಮಿ ವಿವೇಕಾನಂದ ಅವರಿಂದ ಸ್ಪೂರ್ತಿಯನ್ನು ಪಡೆದಿದೆ. ಮುಂದೆಯೂ ನಮ್ಮ ಯುವ ಸಮುದಾಯಕ್ಕೆ ಸ್ವಾಮಿ ವಿವೇಕಾನಂದ ಅವರ ಸಂದೇಶಗಳು ಮಾರ್ಗದರ್ಶನ ನೀಡಲಿವೆ ಎಂದು ಪ್ರಧಾನಿ ಮೋದಿ ಹೇಳಿದರು.

ಇಂದು(ಜ.12-ಗುರುವಾರ) ಸ್ವಾಮಿ ವಿವೇಕಾನಂದ ಅವರ 160ನೇ ಜನ್ಮದಿನ. ಯುವ ಸಮುದಾಯಕ್ಕೆ ಸದಾ ಮಾರ್ಗದರ್ಶಕರಾಗಿರುವ ಸ್ವಾಮಿ ವಿವೇಕಾನಂದ ಅವರು, ಭಾರತದ ಯುವಕರಿಗೆ ಸರಿಯಾದ ದಾರಿಯನ್ನು ತೋರುತ್ತಿದ್ದಾರೆ. ರಾಷ್ಟೀಯ ಯುವಜನೋತ್ಸವದ ಈ ಶುಭ ಸಂದರರ್ಭದಲ್ಲಿ ನಾನು ಸ್ವಾಮಿ ವಿವೇಕಾನಂದ ಅವರಿಗೆ ನಮಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಇಂದು ನಾವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದ್ದೇವೆ. ಇದನ್ನು ವಿಶ್ವದ ಅಗ್ರ 3 ಆರ್ಥಿಕತೆಯತ್ತ ಕೊಂಡೊಯ್ಯುವುದು ನಮ್ಮ ಗುರಿಯಾಗಿದೆ. ದೇಶದ ಈ ಆರ್ಥಿಕ ಬೆಳವಣಿಗೆಯು ನಮ್ಮ ಯುವಕರಿಗೆ ಅಪಾರ ಅವಕಾಶಗಳನ್ನು ತರುತ್ತದೆ ಎಂದು ಪ್ರಧಾನಿ ಮೋದಿ ಭರವಸೆ ವ್ಯಕ್ತಪಡಿಸಿದರು.

ಇಂದು ನಾವು ಕೃಷಿಯಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿದ್ದೇವೆ. ತಂತ್ರಜ್ಞಾನ ಮತ್ತು ಆವಿಷ್ಕಾರದೊಂದಿಗೆ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಬರಲಿದೆ. ಇದು ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ. ಹೊಸ ಎತ್ತರವನ್ನು ಏರಲು ಹೊಸ ಮಾರ್ಗವನ್ನು ಸುಗಮಗೊಳಿಸುತ್ತದೆ ಎಂದು ಪ್ರಧಾನಿ ಮೋದಿ ನುಡಿದರು.

ಕ್ರೀಡೆಯಲ್ಲಿಯೂ ಸಹ, ಭಾರತವು ಪ್ರಮುಖ ಜಾಗತಿಕ ಶಕ್ತಿಯಾಗುವತ್ತ ಮುನ್ನಡೆಯುತ್ತಿದೆ. ಭಾರತದ ಯುವಕರ ಸಾಮರ್ಥ್ಯದಿಂದಾಗಿ ಇದು ಸಾಧ್ಯವಾಗುತ್ತಿದೆ ಎಂದು ಪ್ರಧಾನಿ ಮೋದಿ ಪ್ರಶಂಸೆಯ ಮಾತುಗಳನ್ನಾಡಿದರು. ಯುವ ಶಕ್ತಿಯು ಭಾರತದ ಪ್ರೇರಕ ಶಕ್ತಿಯಾಗಿದೆ. ರಾಷ್ಟ್ರ ನಿರ್ಮಾಣಕ್ಕೆ ಮುಂದಿನ 25 ವರ್ಷಗಳು ಅತ್ಯಂತ ಮುಖ್ಯ ಎಂದು ಪ್ರಧಾನಿ ಮೋದಿ ಇದೇ ವೇಳೆ ಅಭಿಪ್ರಾಯಪಟ್ಟರು.

ಯುವ ಶಕ್ತಿಯ ಕನಸುಗಳು ಭಾರತದ ದಿಕ್ಕನ್ನು ನಿರ್ಧರಿಸುತ್ತವೆ. ಯುವ ಶಕ್ತಿಯ ಆಕಾಂಕ್ಷೆಗಳು ಭಾರತದ ಗಮ್ಯಸ್ಥಾನವನ್ನು ನಿರ್ಧರಿಸುತ್ತವೆ. ಯುವ ಶಕ್ತಿಯ ಉತ್ಸಾಹವು ಭಾರತದ ಶಕ್ತಿಯನ್ನು ನಿರ್ಧರಿಸುತ್ತದೆ ಎಂದು ಪ್ರಧಾನಿ ಮೋದಿ ಗಟ್ಟಿ ಧ್ವನಿಯಲ್ಲಿ ಹೇಳಿದರು.

ನಾವು ನಮ್ಮ ಆಲೋಚನೆಗಳೊಂದಿಗೆ ಯುವಕರಾಗಿರಬೇಕು. ಯುವಕರಾಗಿರುವುದು ಎಂದರೆ ನಾವು ನಮ್ಮ ಪ್ರಯತ್ನಗಳಲ್ಲಿ ಕ್ರಿಯಾತ್ಮಕವಾಗಿರುವುದು ಎಂದರ್ಥ. ಯುವಕರಾಗಿರುವುದು ಎಂದರೆ ನಮ್ಮ ದೃಷ್ಟಿಕೋನದಲ್ಲಿ ವಿಹಂಗಮವಾಗಿರುವುದು. ಜಾಗತಿಕ ಸಮಸ್ಯೆಗಳ ಪರಿಹಾರಕ್ಕೆ ಇಂದು ಭಾರತದತ್ತ ನೋಡಲಾಗುತ್ತಿದೆ. ಇದು ನಮ್ಮ ಯುವ ಸಮುದಾಯದ ಕಠಿಣ ಪರಿಶ್ರಮಕ್ಕೆ ಸಾಕ್ಷಿ ಎಂದು ಪ್ರಧಾನಿ ಮೋದಿ ಹೆಮ್ಮೆ ವ್ಯಕ್ತಪಡಿಸಿದರು.

ಕರ್ನಾಟಕಕ್ಕೆ ಭೇಟಿ ನೀಡಿದಾಗಲೆಲ್ಲಾ ನನಗೆ ಇಲ್ಲಿನ ಸಾಂಸ್ಕೃತಿಕ ಶ್ರೀಮಂತಿಕೆಯ ಪರಿಚಯವಾಗುತ್ತದೆ. ಕರ್ನಾಟಕದ ಯುವ ಸಮುದಾಯ ದೇಶದ ಪ್ರಗತಿಗೆ ತನ್ನದೇ ಆದ ಕೊಡುಗೆ ನೀಡುತ್ತಿದ್ದು, ಭಾರತದ ಸ್ಥಾನಮಾನವನ್ನು ಜಾಗತಿಕ ಮಟ್ಟದಲ್ಲಿ ಎತ್ತರಕ್ಕೆ ಏರಿಸುವಲ್ಲಿ ಕರ್ನಾಟಕದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ