logo
ಕನ್ನಡ ಸುದ್ದಿ  /  ಕರ್ನಾಟಕ  /  Bjp Vs Congress: ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ; ಬಿಜೆಪಿಗೆ ಟಾಂಗ್ ಕೊಟ್ಟ ಕಾಂಗ್ರೆಸ್‌

BJP vs Congress: ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ; ಬಿಜೆಪಿಗೆ ಟಾಂಗ್ ಕೊಟ್ಟ ಕಾಂಗ್ರೆಸ್‌

HT Kannada Desk HT Kannada

Jul 01, 2023 01:58 PM IST

google News

ಸೋಷಿಯಲ್‌ ಮೀಡಿಯಾ ಮೂಲಕ ಬಿಜೆಪಿಯನ್ನು ಟಾರ್ಗೆಟ್‌ ಮಾಡಿ ಕಾಂಗ್ರೆಸ್‌ ಟಾಂಗ್‌ ನೀಡುವುದನ್ನು ಮುಂದುವರಿಸಿದ್ದು, ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗಿರುವುದಕ್ಕೆ ಮಾಡಿದ ಟ್ವೀಟ್‌ ಈಗ ಗಮನಸೆಳೆದಿದೆ.

  • BJP vs Congress: ಕಾಂಗ್ರೆಸ್‌ ಪಕ್ಷ ಮಾಡಿರುವ ಟ್ವೀಟ್‌ ಬಿಜೆಪಿಯನ್ನು ಕೆಣಕುವಂತೆ ಇದ್ದು, ಅದರ ಶೀರ್ಷಿಕೆ “ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ” ಎಂದು ಇದೆ. ಇದರ ವಿವರ ಇಲ್ಲಿದೆ.

ಸೋಷಿಯಲ್‌ ಮೀಡಿಯಾ ಮೂಲಕ ಬಿಜೆಪಿಯನ್ನು ಟಾರ್ಗೆಟ್‌ ಮಾಡಿ ಕಾಂಗ್ರೆಸ್‌ ಟಾಂಗ್‌ ನೀಡುವುದನ್ನು ಮುಂದುವರಿಸಿದ್ದು, ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗಿರುವುದಕ್ಕೆ ಮಾಡಿದ ಟ್ವೀಟ್‌ ಈಗ ಗಮನಸೆಳೆದಿದೆ.
ಸೋಷಿಯಲ್‌ ಮೀಡಿಯಾ ಮೂಲಕ ಬಿಜೆಪಿಯನ್ನು ಟಾರ್ಗೆಟ್‌ ಮಾಡಿ ಕಾಂಗ್ರೆಸ್‌ ಟಾಂಗ್‌ ನೀಡುವುದನ್ನು ಮುಂದುವರಿಸಿದ್ದು, ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗಿರುವುದಕ್ಕೆ ಮಾಡಿದ ಟ್ವೀಟ್‌ ಈಗ ಗಮನಸೆಳೆದಿದೆ.

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಮುಗಿದು 50 ದಿನದ ಆಸುಪಾಸು. ಕಾಂಗ್ರೆಸ್‌ ಭರ್ಜರಿ ಜಯಗಳಿಸಿ ಸರ್ಕಾರ ರಚನೆ ಆಗಿದ್ದು, ಅದು ಕೆಲಸ ಶುರುಮಾಡಿದೆ. ಆದರೆ, ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿಗೆ ಇನ್ನೂ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿ ಉಳಿದಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಇಂದು ಬಿಜೆಪಿಗೆ ಟಾಂಗ್‌ ನೀಡಿದೆ.

ಕಾಂಗ್ರೆಸ್‌ ಪಕ್ಷ ಮಾಡಿರುವ ಟ್ವೀಟ್‌ ಬಿಜೆಪಿಯನ್ನು ಕೆಣಕುವಂತೆ ಇದ್ದು, ಅದರ ಶೀರ್ಷಿಕೆ “ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ” ಎಂದು ಇದೆ.

ಮುಂದುವರಿದು, ನಾಯಕರಿಗೆ ಇರಬೇಕಾದ ಅರ್ಹತೆಯನ್ನು ಅದು ವಿವರಿಸಿದೆ.

  • ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
  • ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
  • ಆರ್‌ಎಸ್‌ಎಸ್‌ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
  • ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
  • ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
  • ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ!

ಇಷ್ಟು ಅಂಶಗಳನ್ನು ಒಳಗೊಂಡ ಟ್ವೀಟ್‌ ಮಾಡಿ ಕೆಲ ಹೊತ್ತಿನ ಬಳಿಕ ಮತ್ತೊಂದು ಟ್ವೀಟ್‌ ಮೂಲಕ ಕಾಂಗ್ರೆಸ್‌, ಬಿಜೆಪಿಯನ್ನು ಮತ್ತೊಮ್ಮೆ ಚುಚ್ಚಿದೆ.

ಅದರಲ್ಲಿ, ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು.

ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. ಬಿಜೆಪಿ ಪಕ್ಷ ಆಡಳಿತ ಮಾಡಲು ಆಸಮರ್ಥರು ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ, ಈಗ ವಿರೋಧ ಪಕ್ಷವಾಗಿರಲೂ ಸಹ ಆಸಮರ್ಥರು ಎಂದು ತಿಳಿಯುತ್ತಿದೆ. ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನು ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ ಎಂದು ಕಾಂಗ್ರೆಸ್‌ ಟ್ವೀಟ್‌ ಮೂಲಕ ಟಾಂಗ್‌ ನೀಡಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ