logo
ಕನ್ನಡ ಸುದ್ದಿ  /  ಕರ್ನಾಟಕ  /  Breaking News: ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ; ಡಿಕೆ ಶಿವಕುಮಾರ್‌ಗೆ ಡಿಸಿಎಂ ಸ್ಥಾನ, ಫಲ ಕೊಟ್ಟ ಖರ್ಗೆ ಸಂಧಾನ ಸೂತ್ರ

Breaking News: ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ; ಡಿಕೆ ಶಿವಕುಮಾರ್‌ಗೆ ಡಿಸಿಎಂ ಸ್ಥಾನ, ಫಲ ಕೊಟ್ಟ ಖರ್ಗೆ ಸಂಧಾನ ಸೂತ್ರ

D M Ghanashyam HT Kannada

May 18, 2023 06:28 AM IST

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ

    • Karnataka Next CM: ಒಟ್ಟು 5 ವರ್ಷಗಳ ಅಧಿಕಾರ ಅವಧಿಯಲ್ಲಿ ತಲಾ ಎರಡೂವರೆ ವರ್ಷಗಳಾಗಿ ವಿಂಗಡಿಸಲಾಗಿದೆ. ಮೊದಲ ಅವಧಿಯಲ್ಲಿ ಸಿದ್ದರಾಮಯ್ಯ, ಎರಡನೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಅಧಿಕಾರ ಅನುಭವಿಸಲಿದ್ದಾರೆ
ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ
ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ

ದೆಹಲಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಶನಿವಾರ (ಮೇ 20) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಮುಹೂರ್ತ ನಿಗದಿಯಾಗಿದೆ. ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಡಿ.ಕೆ.ಶಿವಕುಮಾರ್ (DK Shivakumar) ಅವರು ಉಪಮುಖ್ಯಮಂತ್ರಿಯಾಗಿ (ಡಿಸಿಎಂ) ಸಚಿವ ಸಂಪುಟ ಸೇರಲಿದ್ದಾರೆ. ಅವರಿಗೆ ಇತರ ಪ್ರಬಲ ಖಾತೆಗಳನ್ನೂ ಕೊಡುವ ಸಾಧ್ಯತೆಯಿದೆ. ಒಟ್ಟು 5 ವರ್ಷಗಳ ಅಧಿಕಾರ ಅವಧಿಯಲ್ಲಿ ತಲಾ ಎರಡೂವರೆ ವರ್ಷಗಳಾಗಿ ವಿಂಗಡಿಸಲಾಗಿದೆ. ಮೊದಲ ಅವಧಿಯಲ್ಲಿ ಸಿದ್ದರಾಮಯ್ಯ, ಎರಡನೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಅಧಿಕಾರ ಅನುಭವಿಸಲಿದ್ದಾರೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ 'ಹಿಂದೂಸ್ತಾನ್ ಟೈಮ್ಸ್‌' ವರದಿ ಮಾಡಿದೆ.

ಟ್ರೆಂಡಿಂಗ್​ ಸುದ್ದಿ

ಕೊಚ್ಚಿಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಬೆಂಗಳೂರು ವಿಮಾನನಿಲ್ದಾಣದಲ್ಲಿ ತುರ್ತುಭೂಸ್ಪರ್ಶ, 150 ಪ್ರಯಾಣಿಕರು ಸೇಫ್

ಅಂಜಲಿ ಅಂಬಿಗೇರ ಸಹೋದರಿ ಯಶೋದಾ ಆತ್ಮಹತ್ಯೆ ಯತ್ನ, ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ ಸಂಬಂಧಿಸಿದ ಇತ್ತೀಚಿನ 10 ವಿದ್ಯಮಾನಗಳು

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

ಬುಧವಾರ ಮಧ್ಯರಾತ್ರಿಯವರೆಗೂ ಖರ್ಗೆ ಅವರ ನಿವಾಸದಲ್ಲಿ ಚುರುಕಿನ ರಾಜಕೀಯ ಬೆಳವಣಿಗೆಗಳು ನಡೆದವು. ಹಲವು ನಾಯಕರೊಂದಿಗೆ ಖರ್ಗೆ ಸಮಾಲೋಚನೆ ನಡೆಸಿದರು. ಸತತ ಮೂರು ದಿನಗಳ ಸುದೀರ್ಘ ರಾಜಕೀಯ ಬೆಳವಣಿಗೆಗಳು ಖರ್ಗೆ ಅವರ ನಿರ್ಣಯದೊಂದಿಗೆ ಒಂದು ಹಂತಕ್ಕೆ ಬಂದವು.

ಮೇ 20ಕ್ಕೆ ಬೇಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನೂ ಕರೆಯಲಾಗಿದೆ. ಅಂದು ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ. ಈ ಮೂಲಕ ಕರ್ನಾಟಕದಲ್ಲಿ ಸಿದ್ದರಾಮಯ್ಯ 2ನೇ ಬಾರಿಗೆ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಇದೀಗ 75ರ ಹರೆಯದಲ್ಲಿರುವ ಸಿದ್ದರಾಮಯ್ಯ ಕುರುಬ ಸಮಾಜದ ಪ್ರಮುಖ ನಾಯಕರಾಗಿದ್ದಾರೆ. ಕರ್ನಾಟಕದ ಇತರ ಸಮಾಜಗಳು, ಮುಖ್ಯವಾಗಿ ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ ಸಮುದಾಯಗಳು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿವೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಿದ್ದರಾಮಯ್ಯ ಶ್ರಮದ ಕಾಣ್ಕೆಯೂ ಮುಖ್ಯವಾಗಿತ್ತು.

ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಬ್ಬರೂ ಹೈಕಮಾಂಡ್ ಎದುರು ತಮ್ಮ ವಾದ ಮುಂದಿಟ್ಟು ನಿರ್ಣಕ್ಕಾಗಿ ಎದುರು ನೋಡುತ್ತಿದ್ದರು. 'ನಾನು ನಿಮಗೆ ಹೇಳಬೇಕಾದ್ದು ಏನೂ ಇಲ್ಲ. ಹೈಕಮಾಂಡ್ ನಾಯಕರಿಗೆ ಏನೆಲ್ಲಾ ತಿಳಿಯಸಬೇಕೋ ತಿಳಿಸಿದ್ದೇನೆ. ಅವರ ನಿರ್ಧಾರಕ್ಕಾಗಿ ಕಾಯುತ್ತಿದ್ದೇನೆ' ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದರು. ಡಿ.ಕೆ.ಶಿವಕುಮಾರ್ ಇದೀಗ 61ರ ಹರೆಯದಲ್ಲಿದ್ದಾರೆ.

ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನದೊಂದಿಗೆ 6 ಪ್ರಮುಖ ಖಾತೆಗಳನ್ನು ಕೊಡುವ ಬಗ್ಗೆ ಬುಧವಾರ (ಮೇ 17) 'ಹಿಂದೂಸ್ತಾನ್ ಟೈಮ್ಸ್' ವರದಿ ಮಾಡಿತ್ತು. ಆದರೆ ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಈ ವರದಿಗಳನ್ನು ತಳ್ಳಿಹಾಕಿದ್ದರು.

ಕರ್ನಾಟಕದಲ್ಲಿ ಹತ್ತಾರು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿರುವ ಸಿದ್ದರಾಮಯ್ಯ 2006ರಲ್ಲಿ ಜೆಡಿಎಸ್‌ನಿಂದ ಸಿಡಿದು ಹೊರಬಂದಿದ್ದರು. ದೇವರಾಜ ಅರಸ್ ನಂತರ ಮುಖ್ಯಮಂತ್ರಿ ಸ್ಥಾನವನ್ನು ಸಂಪೂರ್ಣ 5 ವರ್ಷ ನಿರ್ವಹಿಸಿದ ಏಕೈಕ ನಾಯಕ ಎನಿಸಿದ್ದಾರೆ. ಸಿದ್ದರಾಮಯ್ಯ ಪರ ಕಾಂಗ್ರೆಸ್‌ನ ಸುಮಾರು 85 ಶಾಸಕರು ದೃಢವಾಗಿ ನಿಂತಿದ್ದಾರೆ ಎಂದು ಮೂಲಗಳು ಹೇಳಿವೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ