logo
ಕನ್ನಡ ಸುದ್ದಿ  /  ಕರ್ನಾಟಕ  /  Hassan Sex Scandal: ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು, ಅಶ್ಲೀಲ ವಿಡಿಯೋ ಹಗರಣ ನಾಚಿಕೆಗೇಡಿನ ಸಂಗತಿ ಎಂದ ಹೆಚ್‌ಡಿ ಕುಮಾರಸ್ವಾಮಿ

Hassan Sex Scandal: ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು, ಅಶ್ಲೀಲ ವಿಡಿಯೋ ಹಗರಣ ನಾಚಿಕೆಗೇಡಿನ ಸಂಗತಿ ಎಂದ ಹೆಚ್‌ಡಿ ಕುಮಾರಸ್ವಾಮಿ

Umesh Kumar S HT Kannada

Apr 30, 2024 01:25 PM IST

ಹಾಸನ ಸಂಸದ, ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಗರಣವು ನಾಚಿಕೆಗೇಡಿನ ಸಂಗತಿ, ಈ ಹಿನ್ನೆಲೆಯಲ್ಲಿ ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಲು ಸಮಿತಿ ಶಿಫಾರಾಸು ಮಾಡಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ (ಎಡಚಿತ್ರ) ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು (ಎಪ್ರಿಲ್ 30) ಜೆಡಿಎಸ್ ಕೋರ್ ಕಮಿಟಿ ಸಭೆ (ಬಲ ಚಿತ್ರ) ನಡೆಯಿತು.

  • ಅಶ್ಲೀಲ ವಿಡಿಯೋ ಹಗರಣವು ನಾಚಿಕೆಗೇಡಿನ ಸಂಗತಿಯಾಗಿದ್ದು, ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತುಗೊಳಿಸಲು ಸಮಿತಿ ಶಿಫಾರಸು ಮಾಡಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ನಡುವೆ, ಪ್ರಜ್ವಲ್ ರೇವಣ್ಣ ಅವರನ್ನು ಸಮರ್ಥಿಸುವ ಪ್ರಶ್ನೆಯೇ ಇಲ್ಲ, ಜೆಡಿಎಸ್ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. 

ಹಾಸನ ಸಂಸದ, ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಗರಣವು ನಾಚಿಕೆಗೇಡಿನ ಸಂಗತಿ, ಈ ಹಿನ್ನೆಲೆಯಲ್ಲಿ ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಲು ಸಮಿತಿ ಶಿಫಾರಾಸು ಮಾಡಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ (ಎಡಚಿತ್ರ) ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು (ಎಪ್ರಿಲ್ 30) ಜೆಡಿಎಸ್ ಕೋರ್ ಕಮಿಟಿ ಸಭೆ (ಬಲ ಚಿತ್ರ) ನಡೆಯಿತು.
ಹಾಸನ ಸಂಸದ, ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಗರಣವು ನಾಚಿಕೆಗೇಡಿನ ಸಂಗತಿ, ಈ ಹಿನ್ನೆಲೆಯಲ್ಲಿ ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಲು ಸಮಿತಿ ಶಿಫಾರಾಸು ಮಾಡಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ (ಎಡಚಿತ್ರ) ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು (ಎಪ್ರಿಲ್ 30) ಜೆಡಿಎಸ್ ಕೋರ್ ಕಮಿಟಿ ಸಭೆ (ಬಲ ಚಿತ್ರ) ನಡೆಯಿತು.

ಬೆಂಗಳೂರು/ ಹುಬ್ಬಳ್ಳಿ: ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಬಹಿರಂಗ, ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದೆ. ಅಪರಾಧ ಸಾಬೀತಾದ ಬಳಿಕ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗುವುದು ಎಂದು ಜೆಡಿಎಸ್ ನಾಯಕ ಎಚ್‌ ಡಿ ಕುಮಾರಸ್ವಾಮಿ ಮಂಗಳವಾರ ಹೇಳಿದರು.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರಿನಲ್ಲಿ ಮೇ 18, 19ಕ್ಕೆ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ; ಆರೆಂಜ್ ಅಲರ್ಟ್ ಘೋಷಣೆ -Bengaluru Rain

ಎಸ್‌ಎಸ್‌ಎಲ್‌ಸಿ ಕಡಿಮೆ ಫಲಿತಾಂಶ ಬಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ; ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು, ಮಹತ್ವದ ತೀರ್ಮಾನ

ಲೈಂಗಿಕ ದೌರ್ಜನ್ಯಕ್ಕೊಳದ ಮಹಿಳೆ ಅಪಹರಣ ಆರೋಪ ಪ್ರಕರಣ; ಮೇ 20ಕ್ಕೆ ಹೆಚ್‌ಡಿ ರೇವಣ್ಣ ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್

HD Revanna: ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಅಪಹರಣ ಆರೋಪ ಪ್ರಕರಣ; ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲೇ ಉಳಿದಿರುವ ಹೆಚ್‌ಡಿ ರೇವಣ್ಣ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಕ್ಕಾಗಿ ಇಂದು (ಏಪ್ರಿಲ್ 30) ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯ ಬಳಿಕ ಅಮಾನತು ಆದೇಶವೂ ಪ್ರಕಟವಾಗಿದೆ. ಇದೇ ವೇಳೆ, ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಈ ವಿಚಾರ ತಿಳಿಸಿದರು.

ಅಶ್ಲೀಲ ವಿಡಿಯೋ ಪ್ರಕರಣ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಣ್ಣನ ಮಗ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಿಸುವ ಅಥವಾ ಅವರಿಗೆ ರಕ್ಷಣೆ ಒದಗಿಸುವ ಕೆಲಸ ಮಾಡುವುದಿಲ್ಲ ಎಂದು ಹೇಳಿದ ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬಕ್ಕೆ ಕಳಂಕ ತರುವಂತಹ ಹುನ್ನಾರ ಇದರಲ್ಲಿದ್ದಂತೆ ಕಾಣುತ್ತಿದೆ. ಹಳೆಯ ಪ್ರಕರಣವನ್ನು ಈಗ ಚುನಾವಣೆ ವೇಳೆ ಮುನ್ನೆಲೆಗೆ ತಂದಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ| ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಬಗ್ಗೆ ಬಿಜೆಪಿ ನಾಯಕ ಅಮಿತ್ ಶಾ ಮೊದಲ ಪ್ರತಿಕ್ರಿಯೆ, ಕಾನೂನು ಕ್ರಮಕ್ಕೆ ಆಗ್ರಹ

ಪ್ರಜ್ವಲ್ ರೇವಣ್ಣ ಪಕ್ಷದಿಂದ ಅಮಾನತು, ಶೋಕಾಸ್ ನೋಟಿಸ್ ಜಾರಿ

ಕರ್ನಾಟಕದ ಜನತಾ ದಳ (ಜಾತ್ಯತೀತ) ಮಂಗಳವಾರ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತುಗೊಳಿಸಿದೆ. ಅವರ ವಿರುದ್ಧ ಹಲವಾರು ಮಹಿಳೆಯರು ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ವಿವರಣೆ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತುಗೊಳಿಸಲು ಜನತಾ ದಳ (ಜಾತ್ಯತೀತ) ತನ್ನ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಿತು.

ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿಯನ್ನು ಸ್ವಾಗತಿಸುತ್ತೇವೆ. ಎಸ್‌ಐಟಿ ತನಿಖೆ ಪೂರ್ಣಗೊಳ್ಳುವವರೆಗೆ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಶಿಫಾರಸು ಮಾಡಲು ನಿರ್ಧರಿಸಿದ್ದೇವೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಾಚಿಕೆಗೇಡಿನ ವಿಷಯವಾಗಿದ್ದು, ಸದ್ಯ ಪಕ್ಷದಿಂದ ಅಮಾನತು ಕ್ರಮ

ಇದು ನಾಚಿಕೆಗೇಡಿನ ವಿಷಯ ಎಂದು ಬಣ್ಣಿಸಿದ ಎಚ್.ಡಿ.ಕುಮಾರಸ್ವಾಮಿ, "... ನಾವು ಅವರನ್ನು ರಕ್ಷಿಸಲು ಹೋಗುವುದಿಲ್ಲ. ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಚಿಕ್ಕಪ್ಪನಾಗಿ ಮಾತ್ರವಲ್ಲ, ದೇಶದ ಸಾಮಾನ್ಯ ಮನುಷ್ಯನಾಗಿ ನಾವು ಮುಂದೆ ಸಾಗಬೇಕಾಗಿದೆ. ನಾನು ಯಾವುದೇ ವ್ಯಕ್ತಿಯನ್ನು ರಕ್ಷಿಸುತ್ತಿಲ್ಲ. ನಾವು ಈ ರೀತಿಯ ಕಾನೂನುಬಾಹಿರ ವಿಷಯಗಳ ವಿರುದ್ಧ ಹೋರಾಡಿದ್ದೇವೆ. ಇದು ಗಂಭೀರ ವಿಷಯವಾಗಿದೆ. ಆದರೆ, ಈ ಪ್ರಕರಣದಲ್ಲಿ ಸರ್ಕಾರದ ಜವಾಬ್ದಾರಿ ಹೆಚ್ಚು. ಸರ್ಕಾರವನ್ನು ಯಾರು ನಡೆಸುತ್ತಿದ್ದಾರೆ, ಅವರು ನಿಜವಾದ ಚಿತ್ರಣವನ್ನು ಬಹಿರಂಗಪಡಿಸಬೇಕು ಮತ್ತು ವಾಸ್ತವವನ್ನು ಸರ್ಕಾರ ಬಹಿರಂಗಪಡಿಸಬೇಕೇ ಹೊರತು ನಾನಲ್ಲ..." ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಅವರ ಅಮಾನತು ವಿಚಾರ ಭಾನುವಾರವೇ ನಿರ್ಧಾರ

ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪ್ರಜ್ವಲ್ ರೇವಣ್ಣ ಅಮಾನತುಗೊಂಡಿರುವ ನಡುವೆಯೇ ಎಚ್.ಡಿ.ಕುಮಾರಸ್ವಾಮಿ ಅವರ ಹೊಸ ಹೇಳಿಕೆ ಬಂದಿದೆ. ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲು ಜೆಡಿಎಸ್ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಹೇಳಿದ್ದರು.

ಈ ವಿಷಯದ ಬಗ್ಗೆ ಪ್ರತಿಕ್ರಿಯೆ ಕೋರಿ ಆಡಳಿತಾರೂಢ ಕಾಂಗ್ರೆಸ್ ದಾಳಿ ನಡೆಸುತ್ತಿರುವ ಮಧ್ಯೆ, ಜೆಡಿಎಸ್ ನ ಮೈತ್ರಿ ಪಾಲುದಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಈ ಪ್ರಕರಣದಿಂದ ದೂರವಿರಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಯತ್ನಿಸಿದರು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಮರ್ಥಿಸುವ ಪ್ರಶ್ನೆಯೇ ಇಲ್ಲ ಮತ್ತು ವಿಶೇಷ ತನಿಖಾ ತಂಡದ ತನಿಖೆಯಲ್ಲಿ ಆರೋಪಗಳು ಸಾಬೀತಾದರೆ ಪಕ್ಷವು ನಿರ್ದಯ ಕ್ರಮ ತೆಗೆದುಕೊಳ್ಳುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ಸೋಮವಾರ ಹೇಳಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ