logo
ಕನ್ನಡ ಸುದ್ದಿ  /  ಕರ್ನಾಟಕ  /  Pralhad Joshi On Siddaramaiah: ಪಿಎಫ್ಐ ನಿಷೇಧ ವಿರೋಧಿಸಿದರೆ ಜನ ಒದೆಯುತ್ತಾರೆ, ಸಿದ್ದರಾಮಯ್ಯ ವಿರುದ್ಧ ಜೋಶಿ ಗುಡುಗು

Pralhad Joshi on Siddaramaiah: ಪಿಎಫ್ಐ ನಿಷೇಧ ವಿರೋಧಿಸಿದರೆ ಜನ ಒದೆಯುತ್ತಾರೆ, ಸಿದ್ದರಾಮಯ್ಯ ವಿರುದ್ಧ ಜೋಶಿ ಗುಡುಗು

HT Kannada Desk HT Kannada

Sep 29, 2022 04:55 PM IST

ಪ್ರಲ್ಹಾದ್ ಜೋಶಿ

    • ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ಐ ಬ್ಯಾನ್ ಮಾಡಿರುವುದನ್ನು ಕಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಪಿಎಫ್ಐ ಬ್ಯಾನ್ ಮಾಡಿರುವುದನ್ನು ವಿರೋಧಿಸಿದರೆ ಜನ ಒದೆಯುತ್ತಾರೆ ಅಷ್ಟೇ. ಪಿಎಫ್ಐ ಪರ ಮಾತನಾಡಿದರೆ ದೇಶದ ಜನರ ಕಂಗೆಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಜೋಶಿ ಎಚ್ಚರಿಕೆ ನೀಡಿದರು.
ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ

ಬೆಂಗಳೂರು: ಪಿಎಫ್‌ಐ ಮೇಲೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ಗೆ ಈಗಲೂ ಒಳಗೊಳಗೆ ಪ್ರೀತಿ ಇದೆ. ಪಿಎಫ್ಐನ ಭಯೋತ್ಪಾದಕ ಚಟುವಟಿಕೆಗಳು ಹಾಗೂ ದೇಶ ದ್ರೋಹ ಕೃತ್ಯಗಳ ಬಗ್ಗೆ ಜನರಿಗೆ ಮಾಹಿತಿ ಇದೆ. ಇಂತಹ ಸಂದರ್ಭದಲ್ಲಿ ಪಿಎಫ್ಐ ಬ್ಯಾನ್ ಮಾಡಿರುವುದನ್ನು ವಿರೋಧಿಸಿದರೆ ಜನ ಒದೆಯುತ್ತಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Mandya News: ಮಂಡ್ಯ ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 180 ಬಾಲ್ಯವಿವಾಹ ಪ್ರಕರಣ, 75ರಲ್ಲಿ ಎಫ್‌ಐಆರ್‌ ದಾಖಲು

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಬೆಂಗಳೂರು: ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳ, ಶುಲ್ಕ ನಿಯಂತ್ರಣ ಬೇಕೆನ್ನುತ್ತಿರುವ ಪಾಲಕರು, ಕೈಕಟ್ಟಿ ಕುಳಿತ ಸರ್ಕಾರ- 10 ಮುಖ್ಯ ಅಂಶ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಪಿಎಫ್‌ಐ ನಿಷೇಧ ಕುರಿತಂತೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಜೋಶಿ, ರಾಷ್ಟ್ರೀಯ ಸುರಕ್ಷತೆ ವಿಚಾರದಲ್ಲಿ ಬಿಜೆಪಿ ಯಾವತ್ತು ಮತಬ್ಯಾಂಕ್ ರಾಜಕಾರಣ ಮಾಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ಐ ಬ್ಯಾನ್ ಮಾಡಿರುವುದನ್ನು ಕಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಪಿಎಫ್ಐ ಬ್ಯಾನ್ ಮಾಡಿರುವುದನ್ನು ವಿರೋಧಿಸಿದರೆ ಜನ ಒದೆಯುತ್ತಾರೆ ಅಷ್ಟೇ. ಪಿಎಫ್ಐ ಪರ ಮಾತನಾಡಿದರೆ ದೇಶದ ಜನರ ಕಂಗೆಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಜೋಶಿ ಎಚ್ಚರಿಕೆ ನೀಡಿದರು.

ಪಿಎಫ್ಐ ಬ್ಯಾನ್ ಮಾಡಿರುವ ಬಿಜೆಪಿ ಸರ್ಕಾರದ ನಿಲುವನ್ನ ವಿರೋಧಿಸಲು ಕಾಂಗ್ರೆಸ್‌ಗೆ ಸಾಧ್ಯವಾಗುತ್ತಿಲ್ಲ. ಏಕೆಂದರೆ ಪಿಎಫ್ಐ ವಿರುದ್ಧ ದೇಶ ದ್ರೋಹದ ಕೃತ್ಯಗಳ ಸಾಕಷ್ಟು ಸಾಕ್ಷಿಗಳು ನಮ್ಮ ಬಳಿ ಇವೆ. ಹೀಗಾಗಿ ಏನಾದರು ಮಾಡಿ ಮುಸ್ಲಿಂ ಒಲೈಕೆ ಮಾಡಬೇಕು ಎಂಬ ಕಾರಣಕ್ಕೆ ಆರ್ ಎಸ್ ಎಸ್ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿದೆ ಎಂದರು.

ಆರ್.ಎಸ್.ಎಸ್ ಎಂದರೆ ನಾವೇ. ಈ ದೇಶದ ಪ್ರಧಾನಿ ನರೇಂದ್ರ ಮೋದಿ ಅವರೇ ಆರ್.ಎಸ್.ಎಸ್‌ನಿಂದ ಬಂದವರು. ಆರ್.ಎಸ್.ಎಸ್ ಅನ್ನು ಯಾವ ಆಧಾರದ ಮೇಲೆ ಹೇಗೆ ಬ್ಯಾನ್ ಮಾಡ್ತೀರಾ? ಈ ಹಿಂದೆ ಕಾಂಗ್ರೆಸ್ ಸರ್ಕಾರ ಮೂರು ಬಾರಿ ಆರ್.ಎಸ್.ಎಸ್ ಬ್ಯಾನ್ ಮಾಡಿತ್ತು. ಬ್ಯಾನ್ ಮಾಡಿ ಕಾಂಗ್ರೆಸ್ ಏನು ಸಾಧಿಸಿದೆ. ಆರ್.ಎಸ್.ಎಸ್ ವಿರುದ್ಧ ಒಂದೇ ಒಂದು ಸಾಕ್ಷಿಯನ್ನೂ ಪ್ರಸ್ತುತಪಡಿಸಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ ಎಂದರು.

ಆರ್.ಎಸ್.ಎಸ್ ಒಂದು ರಾಷ್ಟ್ರೀಯವಾದಿ ಸಂಘಟನೆ. ದೇಶದ ಪರ ಕೆಲಸ ಮಾಡುತ್ತಿರುವ ಸಂಘಟನೆ. ಆದ್ರೆ ಪಿಎಫ್ಐ ಸಂಘಟನೆ ಭಯೋತ್ಪಾದನಾ ಚಟುವಟಿಕೆಗಳನ್ನು ಪ್ರೇರೆಪಿಸುತ್ತಿರುವ ಕುರಿತು ಹಲವು ಸಾಕ್ಷ್ಯಗಳು ದೊರೆತಿವೆ. ದೇಶದಾದ್ಯಂತ ಹಲವು ಹತ್ಯೆಗಳಲ್ಲಿ ಈ ಸಂಘಟನೆ ಕೈವಾಡವಿರುವುದು ಸ್ಪಷ್ಟವಾಗಿದೆ. ಎಲ್ಲ ಸಾಕ್ಷಿಗಳನ್ನು ಕಲೆಹಾಕಿಯೇ ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ಐ ಬ್ಯಾನ್ ಮಾಡಿದೆ. ಇದು ರಾಷ್ಟ್ರೀಯ ಸುರಕ್ಷತೆಯ ವಿಚಾರ. ಇಂಥಹ ಸೂಕ್ಷ್ಮ ವಿಚಾರದಲ್ಲಿ ಬಿಜೆಪಿ ಯಾವತ್ತು ಮತಬ್ಯಾಂಕ್ ರಾಜಕಾರಣ ಮಾಡಿಲ್ಲ. ಎಸ್.ಡಿ.ಪಿ.ಐ ಒಂದು ಪೊಲಿಟಿಕಲ್ ಪಾರ್ಟಿ. ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ತನ್ನ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಜೋಶಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ರಾಷ್ಟ್ರೀಯ ಸುರಕ್ಷತೆಯೇ ಸರ್ವೋಚ್ಛ ಆದ್ಯತೆಯಾಗಿದೆ. ಸಂಘಟನೆಯ ನಿಷೇಧದಿಂದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಅಪಾಯಕಾರಿಯಾಗಿದ್ದ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ನಮ್ಮ ದೇಶ ಸುರಕ್ಷತೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ