logo
ಕನ್ನಡ ಸುದ್ದಿ  /  ಕರ್ನಾಟಕ  /  Draupadi Murmu: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Draupadi Murmu: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

HT Kannada Desk HT Kannada

Sep 27, 2022 09:02 PM IST

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    • ರಾಷ್ಟ್ರೀಯ ಉಚ್ಛತಾ ಶಿಕ್ಷಣ ಅಭಿಯಾನದಡಿ ಕಾರ್ಯಾರಂಭ ಮಾಡಿರುವ ನಗರದ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಉದ್ಘಾಟಿಸಿದರು.
ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು: ರಾಷ್ಟ್ರೀಯ ಉಚ್ಛತಾ ಶಿಕ್ಷಣ ಅಭಿಯಾನದಡಿ ಕಾರ್ಯಾರಂಭ ಮಾಡಿರುವ ನಗರದ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಉದ್ಘಾಟಿಸಿದರು.

ಟ್ರೆಂಡಿಂಗ್​ ಸುದ್ದಿ

ಕರ್ನಾಟಕದ ಎರಡನೇ ಹಂತದ ಮತದಾನ, 4 ಸಚಿವರ ಮಕ್ಕಳಿಗೆ ಸತ್ವ ಪರೀಕ್ಷೆ

108 ಆಂಬುಲೆನ್ಸ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಒಂದು ದಿನ ಮುಂದೂಡಿಕೆ; ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವರು

Hassan Scandal: ಪ್ರಜ್ವಲ್‌ ರೇವಣ್ಣ ವಿಡಿಯೋ ವೈರಲ್‌ಗೆ ಸಿಎಂ, ಡಿಸಿಎಂ ಕಾರಣ: ವಕೀಲ ದೇವರಾಜೇಗೌಡ ಸ್ಪೋಟಕ ಮಾಹಿತಿ

Drought fund: ಮುಂಗಾರು 2023 ಬರ ಪರಿಹಾರ ವಿತರಣೆಗೆ ಕ್ಷಣಗಣನೆ, ಹಣ ಬಂದಿದೆಯೇ ಎಂದು ಹೀಗೆ ಪರೀಕ್ಷಿಸಿ

ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಆರ್ಚ್ ಬಿಷಪ್ ಡಾ. ಪೀಟರ್ ಮಾಚಾಡೋ, ಕುಲಪತಿ ಫಾದರ್ ಡೈನಿಸಿಯಸ್ ವಾಜ್ ಮೊದಲಾದವರು ಉಪಸ್ಥಿತರಿದ್ದರು.

ಬೆಂಗಳೂರು ಜೆಸ್ಯೂಟ್ ಎಜುಕೇಷನಲ್ ಸೊಸೈಟಿ ಇವರ ವತಿಯಿಂದ ಲಾಲ್‍ಬಾಗ್ ರಸ್ತೆ ಬಳಿ ಆಯೋಜಿಸಿರುವ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಶಿಕ್ಷಣ ಸಂಸ್ಥೆಗಳು ಜ್ಞಾನದ ಕೇಂದ್ರಗಳಾಗಿದ್ದು, ಮಾನವೀಯ ಹಾಗೂ ಸರಳ ವ್ಯಕ್ತಿತ್ವವನ್ನು ತನ್ನ ವಿದ್ಯಾರ್ಥಿಗಳಲ್ಲಿ ತುಂಬಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.

ಘನತೆವೆತ್ತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದು, ಶಿಕ್ಷಕರಾಗಿ, ಜನಪ್ರತಿನಿಧಿಯಾಗಿ, ರಾಜ್ಯಪಾಲರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮಾಂಕಿತರಾಗಿದ್ದ ಸಂದರ್ಭದಲ್ಲಿ ದೇವಾಲಯವನ್ನು ಸ್ವಚ್ಛಗೊಳಿಸುತ್ತಿದ್ದುದು ಅವರ ಸರಳ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ. ನಮ್ಮ ದೇಶದಲ್ಲಿ ಚರಿತ್ರೆ ಇದೆ. ಚಾರಿತ್ರ್ಯ ಬೇಕಾಗಿದೆ.ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನಗೊಳಿಸಲು ಅತ್ಯಂತ ಪ್ರಮುಖವಾಗಿದೆ ಎಂದು ತಿಳಿಸಿದರು.

ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆ ಜ್ಞಾನದ ಕೇಂದ್ರ

ಒಂದು ದಶಕಕ್ಕೂ ಹೆಚ್ಚಿನ ಇತಿಹಾಸವನ್ನು ಹೊಂದಿರುವ ಸೇಂಟ್ ಜೋಸೆಫ್ ವಿದ್ಯಾ ಸಂಸ್ಥೆ ಬೆಂಗಳೂರಿನಲ್ಲಿ ಮಾತ್ರವಲ್ಲದೇ ಇಡೀ ಕರ್ನಾಟಕದಲ್ಲಿ ತನ್ನ ಛಾಪನ್ನು ಮೂಡಿಸಿದೆ. ಶಿಕ್ಷಣ ಸಂಸ್ಥೆಯು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಸಂಸ್ಥೆ ಒತ್ತು ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ಹಾಗೂ ಉತ್ತಮಜೀವನಕ್ಕಾಗಿ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆಯಲು ಬಯಸುತ್ತಾರೆ. ಈ ಶಿಕ್ಷಣ ಸಂಸ್ಥೆಯನ್ನು ಒಂದು ದಿನದಲ್ಲಿ ಬೆಳೆಸಲಾಗಿಲ್ಲ.

ಸಂಸ್ಥೆಯ ಅಭಿವೃದ್ಧಿಗೆ ಹಲವು ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಕೊಡುಗೆಯನ್ನು ನೀಡಿದ್ದಾರೆ. ನೂರು ವರ್ಷಗಳ ಭವ್ಯ ಪರಂಪರೆಯನ್ನು ಹೊಂದಿರುವ ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆ ವಿವಿಧ ಕಾಲಮಾನಗಳ ಶಿಕ್ಷಣ ಕ್ಷೇತ್ರದ ಬದಲಾವಣೆಗಳನ್ನು ಕಂಡಿದೆ. 21ನೇ ಶತಮಾನ ಜ್ಞಾನದ ಶತಮಾನವಾಗಿದ್ದು, ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆ ಜ್ಞಾನದ ಕೇಂದ್ರವಾಗಿದೆ.ಸಂಸ್ಥೆಯು ಈ ಜ್ಞಾನದ ಶಕ್ತಿಯನ್ನು ತನ್ನ ವಿದ್ಯಾರ್ಥಿಗಳಿಗೆ ಧಾರೆಯೆರೆಯುತ್ತಿರುವುದು ಅತ್ಯಂತ ಸಂತೋಷದ ವಿಚಾರ ಎಂದು ತಿಳಿಸಿದರು.

ರಾಷ್ಟ್ರಪತಿಗಳ ಉಪಸ್ಥಿತಿಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ದೊರೆದಂತಾಗಿದೆ. ಶಿಕ್ಷಣ ಸಂಸ್ಥೆಯನ್ನು ವಿಶ್ವವಿದ್ಯಾಲಯವನ್ನಾಗಿ ಮಾಡುವ ಕಾರ್ಯಕ್ರಮದಡಿ ರಾಜ್ಯ ಸರ್ಕಾರ ಸೇಂಟ್ ಜೋಸೆಫ್ ಪ್ರಥಮವಾಗಿ ಆಯ್ಕೆಮಾಡಿದ್ದು, ಸಂಸ್ಥೆಯ ಅಭಿವೃದ್ಧಿಗೆ ಪೂರಕವಾಗಲಿದೆ. ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆಯ ಶಿಕ್ಷಣ ಸೇವೆ ನಿರಂತರವಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು