logo
ಕನ್ನಡ ಸುದ್ದಿ  /  Karnataka  /  President Draupadi Murmu To Visit Karnataka Today Mysore Dasara Iiit Dharwad And Bangalore Programs

Draupadi Murmu visit Karnataka: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕರ್ನಾಟಕಕ್ಕೆ, ಸೆ. 28ಕ್ಕೆ ವಾಪಸ್‌, ಕಾರ್ಯಕ್ರಮಗಳೇನು?

HT Kannada Desk HT Kannada

Sep 26, 2022 06:39 AM IST

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕರ್ನಾಟಕಕ್ಕೆ, ಸೆ. 28ಕ್ಕೆ ವಾಪಸ್‌, ರಾಜ್ಯದಲ್ಲಿ ಅವರ ಕಾರ್ಯಕ್ರಮಗಳೇನು? (HT FIle Photo)

    • ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಎರಡು ದಿನಗಳ ಭೇಟಿಗಾಗಿ ಇಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಇಂದಿನಿಂದ ಒಟ್ಟು ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ. ರಾಷ್ಟ್ರಪತಿಯಾಗಿ ಆಯ್ಕೆಯಾದ ಬಳಿಕ ದ್ರೌಪದಿ ಮುರ್ಮು ಅವರು ಕರ್ನಾಟಕಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕರ್ನಾಟಕಕ್ಕೆ, ಸೆ. 28ಕ್ಕೆ ವಾಪಸ್‌, ರಾಜ್ಯದಲ್ಲಿ ಅವರ ಕಾರ್ಯಕ್ರಮಗಳೇನು? (HT FIle Photo)
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕರ್ನಾಟಕಕ್ಕೆ, ಸೆ. 28ಕ್ಕೆ ವಾಪಸ್‌, ರಾಜ್ಯದಲ್ಲಿ ಅವರ ಕಾರ್ಯಕ್ರಮಗಳೇನು? (HT FIle Photo) (HT_PRINT)

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಎರಡು ದಿನಗಳ ಭೇಟಿಗಾಗಿ ಇಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಇಂದಿನಿಂದ ಒಟ್ಟು ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ. ರಾಷ್ಟ್ರಪತಿಯಾಗಿ ಆಯ್ಕೆಯಾದ ಬಳಿಕ ದ್ರೌಪದಿ ಮುರ್ಮು ಅವರು ಕರ್ನಾಟಕಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.

ಟ್ರೆಂಡಿಂಗ್​ ಸುದ್ದಿ

MLC Election 2024: ಪ್ರಜ್ವಲ್ ಪ್ರಕರಣ ನಡುವೆಯೇ ವಿಧಾನ ಪರಿಷತ್ 6 ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ; ಜೂ 6 ಕ್ಕೆ ಫಲಿತಾಂಶ

Hassan Scandal; ಹಾಸನ ಹಗರಣದ ಸಂತ್ರಸ್ತೆ ನಾಪತ್ತೆ ಆತಂಕಕಾರಿ, ಪ್ರಜ್ವಲ್‌ ರೇವಣ್ಣ ಬಂಧನ ಯಾವಾಗ, ಫೇಸ್‌ಬುಕ್ ಪೋಸ್ಟಲ್ಲಿ ವಾಸು ಎಚ್‌ವಿ ಕಳವಳ

Bengaluru Rains: ದಾಖಲೆಯ ಬಿಸಿ ಕಂಡ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ; ರಣ ಬಿಸಿಲಿಗೆ ಬೆಂದ ಜನ ಫುಲ್ ಖುಷ್

NEP ಅಥವಾ SEP: ಪದವಿ ಕೋರ್ಸ್ ಪ್ರವೇಶ ಗೊಂದಲ ರಾಜ್ಯವ್ಯಾಪಿ; ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿದ್ಯಾರ್ಥಿಗಳ ಹಪಾಹಪಿ

ಈ ಎರಡು ದಿನಗಳ ಕಾಲ ಮೈಸೂರು, ಬೆಂಗಳೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವು ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಇವರು ಭಾಗಿಯಾಗಲಿದ್ದಾರೆ.

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮುಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರಪತಿ ದ್ರೌ ಪದಿ ಮುರ್ಮು ಅವರಿಂದ ಚಾಮುಂಡೇಶ್ವರಿ ಪೂಜೆ, ದಸರಾ ಉದ್ಘಾಟನೆ ನಡೆಯಲಿದೆ. ಇದೇ ದಿನ ಅವರು ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ- ಧಾರವಾಡ ಮುನ್ಸಿಪಾಲ್‌ ಕಾರ್ಪೋರೇಷನ್‌ನಿಂದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದರೊಂದಿಗೆ ಧಾರವಾಡದ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇನ್‌ಫಾರ್ಮೆಷನ್‌ ಟೆಕ್ನಾಲಜಿಯ ಹೊಸ ಕ್ಯಾಂಪಸ್‌ ಅನ್ನು ಉದ್ಘಾಟಿಸಲಿದ್ದಾರೆ. ಇಂದು ಬೆಳಗ್ಗೆ ಮೈಸೂರು ದಸರಾ ಉದ್ಘಾಟಿಸಿದ ಬಳಿಕ ದ್ರೌಪದಿ ಮುರ್ಮು ಅಪರಾಹ್ನ ಐಐಐಟಿ ಧಾರವಾಡದ ಹೊಸ ಕ್ಯಾಂಪಸ್‌ ಉದ್ಘಾಟಿಸಲಿದ್ದಾರೆ. ದ್ರೌಪದಿ ಮುರ್ಮು ಅವರು ಮಧ್ಯಾಹ್ನವೇ ಐಐಐಟಿಗೆ ಆಗಮಿಸಿ ಅಲ್ಲೇ ಭೋಜನ ಮಾಡಲಿದ್ದಾರೆ. ಬಳಿಕ ಐಐಐಟಿ-ಧಾರವಾಡವನ್ನು ಉದ್ಘಾಟಿಸಲಿದ್ದಾರೆ.

"ಎಸ್‌ಪಿಜಿ ತಂಡವು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದೆ. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇವಲ 700 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಈ ಕ್ಯಾಂಪಸ್‌ಗೆ ಭೂಮಿ ನೀಡಿರುವ ರೈತರನ್ನು ಕಾರ್ಯಕ್ರಮದಲ್ಲಿ ಆಹ್ವಾನಿಸಲಾಗುತ್ತದೆʼʼ ಎಂದು ಶಾಸಕ ಅರವಿಂದ್‌ ಬೆಲ್ಲದ್‌ ಮಾಹಿತಿ ನೀಡಿದ್ದಾರೆ.

ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನಲ್ಲಿ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನ ಇಂಟಿಗ್ರೇಟೆಡ್‌ ಕ್ರಯೋಜೆನಿಕ್‌ ಎಂಜಿನ್‌ ಉತ್ಪಾದನಾ ಘಟಕವನ್ನು ಉದ್ಘಾಟಿಸಲಿದ್ದಾರೆ.

ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಝೋನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ವೈರೊಲಜಿ (ಸೌತ್‌ ಝೋನ್‌) ಅನ್ನು ವರ್ಚ್ಯುವಲ್‌ ಆಗಿ ಉದ್ಘಾಟಿಸಲಿದ್ದಾರೆ.

ನಾಳೆ ಸೇಂಟ್‌ ಜೋಸೆಫ್‌ ಯೂನಿವರ್ಸಿಟಿಯ ಉದ್ಘಾಟನಾ ಕಾರ್ಯಕ್ರಮದಲ್ಲಿಯೂ ಪಾಲ್ಗೊಳ್ಳಲಿದ್ದಾರೆ. ಬಳಿಕ ರಾಜ್ಯ ಸರಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಗೌರವಿಸಲು ಆಯೋಜಿಸಿದ ನಾಗರಿಕ ಸ್ವಾಗತ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸೆಪ್ಟೆಂಬರ್‌ 28ರಂದು ದ್ರೌಪದಿ ಮುರ್ಮು ದೆಹಲಿಗೆ ಹೊರಡುತ್ತಾರೆ.

    ಹಂಚಿಕೊಳ್ಳಲು ಲೇಖನಗಳು