logo
ಕನ್ನಡ ಸುದ್ದಿ  /  ಕರ್ನಾಟಕ  /  Narendra Modi In Karnataka: ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ ಎಂದ ಪ್ರಧಾನಿ, ಇಂದು ಕಲಬುರಗಿ, ಯಾದಗಿರಿಗೆ ಮೋದಿ

Narendra Modi in Karnataka: ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ ಎಂದ ಪ್ರಧಾನಿ, ಇಂದು ಕಲಬುರಗಿ, ಯಾದಗಿರಿಗೆ ಮೋದಿ

HT Kannada Desk HT Kannada

Jan 19, 2023 06:54 AM IST

Narendra Modi in Karnataka: ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ ಎಂದ ಪ್ರಧಾನಿ, ಇಂದು ಕಲಬುರಗಿ, ಯಾದಗಿರಿಗೆ ನರೇಂದ್ರ ಮೋದಿ. (Hindustan Times - DLI)

    • Narendra Modi Karnataka Visit: "ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ. ಸುಮಾರು 10,000 ಕೋಟಿ ರೂ. ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಅಥವಾ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾಮಗಾರಿಗಳು ಜಲ ಶಕ್ತಿ, ರಸ್ತೆಗಳು ಒಳಗೊಂಡಿವೆ ಮತ್ತು ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದುʼʼ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಟ್ವೀಟ್‌ ಮಾಡಿದ್ದಾರೆ.
Narendra Modi in Karnataka: ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ ಎಂದ ಪ್ರಧಾನಿ, ಇಂದು ಕಲಬುರಗಿ, ಯಾದಗಿರಿಗೆ ನರೇಂದ್ರ ಮೋದಿ. (Hindustan Times - DLI)
Narendra Modi in Karnataka: ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ ಎಂದ ಪ್ರಧಾನಿ, ಇಂದು ಕಲಬುರಗಿ, ಯಾದಗಿರಿಗೆ ನರೇಂದ್ರ ಮೋದಿ. (Hindustan Times - DLI) (MINT_PRINT)

ಕಲಬುರಗಿ: ಇತ್ತೀಚೆಗಷ್ಟೇ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಹುಬ್ಬಳ್ಳಿಯಲ್ಲಿ ಚಾಲನೆ ನೀಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಮತ್ತೆ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಕಲಬುರಗಿ ಮತ್ತು ಯಾದಗಿರಿಗೆ ಆಗಮಿಸುತ್ತಿದ್ದು, ಈ ಎರಡು ಜಿಲ್ಲೆಗಳಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ಇಂದು ಮಹಾರಾಷ್ಟ್ರಕ್ಕೂ ಪ್ರಧಾನಿ ಭೇಟಿ ನೀಡಲಿದ್ದಾರೆ. ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ನಿರಂತರವಾಗಿ ಭೇಟಿ ನೀಡುವ ಯೋಜನೆ ಹೊಂದಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಟ್ರೆಂಡಿಂಗ್​ ಸುದ್ದಿ

ಲೈಂಗಿಕ ದೌರ್ಜನ್ಯಕ್ಕೊಳದ ಮಹಿಳೆ ಅಪಹರಣ ಆರೋಪ ಪ್ರಕರಣ; ಮೇ 20ಕ್ಕೆ ಹೆಚ್‌ಡಿ ರೇವಣ್ಣ ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್

HD Revanna: ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಅಪಹರಣ ಆರೋಪ ಪ್ರಕರಣ; ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲೇ ಉಳಿದಿರುವ ಹೆಚ್‌ಡಿ ರೇವಣ್ಣ

ಬೆಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ, ಇ-ಸಿಗರೇಟ್, ವಿದೇಶಿ ಸಿಗರೆಟ್‌, ಎಂಡಿಎಂಎ ಮಾರಾಟಗಾರರ ಬಂಧನ, ಮಾದಕ ವಸ್ತುಗಳ ಜಪ್ತಿ

ದೊಡ್ಡಬಳ್ಳಾಪುರ: ಹೇಮಂತಗೌಡ ಹತ್ಯೆ ಪ್ರಕರಣದ 2ನೇ ಆರೋಪಿ ಬಂಧನ, ಪೊಲೀಸರ ಮೇಲೆ ಹಲ್ಲೆಗೆತ್ನಿಸಿದ್ದ ಕಾರಣ ಕಾಲಿಗೆ ಗುಂಡೇಟು

"ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ. ಸುಮಾರು 10,000 ಕೋಟಿ ರೂ. ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಅಥವಾ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾಮಗಾರಿಗಳು ಜಲ ಶಕ್ತಿ, ರಸ್ತೆಗಳು ಒಳಗೊಂಡಿವೆ ಮತ್ತು ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದುʼʼ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಟ್ವೀಟ್‌ ಮಾಡಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಿಂದ ಹೊರಡಲಿದ್ದಾರೆ. 11 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಯಾದಗಿರಿಗೆ ಪ್ರಯಾಣ ಬೆಳೆಸಲಿದ್ದಾರೆ. ಜಿಲ್ಲೆಯ ಕೊಡೆಕಲ್‌ಗೆ ಮಧ್ಯಾಹ್ನ ಹನ್ನೆರಡು ಗಂಟೆಗೆ ಭೇಟಿ ನೀಡಿ ಬಸವಸಾಗರ ಡ್ಯಾಂನ ಸ್ವಯಂಚಾಲಿತ ಕ್ರಸ್ಟ್‌ಗೇಟ್‌ಗಳನ್ನು ಉದ್ಘಾಟಿಸಲಿದ್ದಾರೆ.

ಈ ಡ್ಯಾಮ್‌ನಿಂದ ಯಾದಗಿರಿ ಮಾತ್ರವಲ್ಲದೆ ವಿಜಯಪುರ, ರಾಯಚೂರು ಜಿಲ್ಲೆಗಳ ಕೃಷಿಕರಿಗೆ ವರದಾನವಾಗಲಿದೆ. ನಾರಾಯಣಪುರ ಎಡದಂಡೆ ಕಾಲುವೆಯಿಂದ ಈ ಜಿಲ್ಲೆಗಳ ನೂರಾರು ಗ್ರಾಮಗಳ ರೈತರು ಪ್ರಯೋಜನ ಪಡೆಯಲಿದ್ದಾರೆ.

ಬಳಿಕ ಕೊಡೆಕಲ್‌ನಿಂದ ಕಲಬುರಗಿ ಜಿಲ್ಲೆಗೆ ಮೋದಿ ತೆರಳುತ್ತಾರೆ. ಎರಡು ಗಂಟೆಗೆ ಮಳಖೇಡಕ್ಕೆ ತಲುಪಿ ಕಂದಾಯ ಹಕ್ಕು ಪತ್ರಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 51 ಸಾವಿರ ಫಲಾನುಭವಿಗಳು ಹಕ್ಕು ಪತ್ರ ಪಡೆಯಲಿದ್ದಾರೆ. ಬಳಿಕ ಸೂರತ್‌, ಚೆನ್ನೈ ಎಕ್ಸ್‌ಪ್ರೆಸ್‌ನ ಭಾಗವಾಗಿರುವ ಎನ್‌ಎಚ್‌ 150ಸಿ ಹೆದ್ದಾರಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ. ಇದು ಸುಮಾರು 2100 ಕೋಟಿ ರೂ. ವೆಚ್ಚದ ಯೋಜನೆಯಾಗಿದೆ. ಇದು ಆರು ರಾಜ್ಯಗಳ ಮೂಲಕ ಹಾದು ಹೋಗುವ ಎಕ್ಸ್‌ಪ್ರೆಸ್‌ ವೇ ಆಗಿದೆ. ಈ ಎಕ್ಸ್‌ಪ್ರೆಸ್‌ ವೇಯಿಂದಾಗಿ ಈ ಮೊದಲ ರಸ್ತೆಗೆ ಹೋಲಿಸಿದರೆ ಪ್ರಯಾಣವು 1600 ಕಿ.ಮೀ.ಯಿಂದ 1270 ಕಿ.ಮೀ. ತಗ್ಗಲಿದೆ. ರಾಜ್ಯದಲ್ಲಿ ಇಂದು ನರೇಂದ್ರ ಮೋದಿ 65.5 ಕಿ.ಮೀ. ಉದ್ದದ ವಿಭಾಗಕ್ಕೆ ಅಡಿಗಲ್ಲು ಹಾಕುವರು.

ಬಳಿಕ ಮೋದಿ ಮಹಾರಾಷ್ಟ್ರಕ್ಕೆ ತೆರಳುವರು. ಅಲ್ಲಿ ಇಂದು ಮುಂಬೈ ಮೆಟ್ರೋ ಹಳಿಗಳಿಗೆ ಚಾಲನೆ ನೀಡಲಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜಾ ಟರ್ಮಿನಲ್‌ ಮರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಇದರೊಂದಿಗೆ ರಸ್ತೆ ಗುಂಡಿಗಳಿಗೆ ಪರಿಹಾರ ಕಲ್ಪಿಸುವ ಪ್ರಾಜೆಕ್ಟ್‌ವೊಂದಕ್ಕೂ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ಪಿಎಂ ಸ್ವನಿಧಿ ಯೋಜನೆಯ ಸುಮಾರು ಒಂದು ಲಕ್ಷ ಫಲಾನುಭವಿಗಳಿಗೆ ಸಾಲದ ಮೊತ್ತವನ್ನು ಹಸ್ತಾಂತರಿಸುವರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ