Indian Railways: ಕರ್ನಾಟಕದ ಕೆಲವು ರೈಲುಗಳ ಮಾರ್ಗ ಬದಲಾವಣೆ, ಮರು ವೇಳಾಪಟ್ಟಿ ಪ್ರಕಟಿಸಿದ ನೈರುತ್ಯ ರೈಲ್ವೆ
Jun 06, 2024 01:11 AM IST
ಬೆಂಗಳೂರು ಎರ್ನಾಕುಲಂ ಸಹಿತ ಕೆಲ ರೈಲು ಸಮಯದಲ್ಲಿ ವ್ಯತ್ಯಯವಾಗಲಿದೆ.
- Train updates ಕರ್ನಾಟಕ ಹಾಗೂ ಕೇರಳ, ಗೋವಾದಿಂದ ಕರ್ನಾಟಕದ ಮಾರ್ಗವಾಗಿ ಸಂಚರಿಸುವ ಕೆಲವು ರೈಲುಗಳ ಮಾರ್ಗ , ಸಮಯ ಬದಲಾವಣೆ ಮಾಡಲಾಗಿದೆ ಎಂದು ಭಾರತೀಯ ರೈಲ್ವೆ( Indian Railways) ತಿಳಿಸಿದೆ.
ಬೆಂಗಳೂರು: ಬೆಂಗಳೂರಿನಿಂದ ಕೇರಳದ ಎರ್ನಾಕುಲಂ ಗ ಹೋವು ಹಾಗೂ ಅಲ್ಲಿಂದ ಬರುವ ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ ಸಂಚಾರದಲ್ಲಿ ಬದಲಾವಣೆಯಾಗಲಿದೆ. ಇದು ಕೆಲವು ನಿಲ್ದಾಣಗಳಲ್ಲಿ ನಿಲ್ಲುವುದಿಲ್ಲ. ಸೇಲಂ ವಿಭಾಗದ ಎಂಜಿನಿಯರಿಂಗ್ ಕಾಮಗಾರಿ ಪ್ರಗತಿಯಲ್ಲಿರುವುದು ಇದಕ್ಕೆ ಕಾರಣ. ಇದಲ್ಲದೇ ಬೆಂಗಳೂರು ಕೂಚುವೇಲಿ ರೈಲಿನ ಸಂಚಾರದಲ್ಲೂ ಬದಲಾವಣೆ ಮಾಡಲಾಗಿದೆ. ಜತೆಗೆ ವಾಸ್ಕೋದಿಂದ ಲೋಂಡಾ,ಬೆಳಗಾವಿ ಮಾರ್ಗವಾಗಿ ದೆಹಲಿ ಕಡೆ ತೆರಳುವ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲು ಸಂಚಾರ ಸಮಯದಲ್ಲಿ ಬದಲಾವಣೆಯಾಗಲಿದೆ ಎಂದು ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ.
I. ರೈಲುಗಳ ಮಾರ್ಗ ಬದಲಾವಣೆ
ಸೇಲಂ ವಿಭಾಗದಲ್ಲಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವುದರಿಂದ ಈ ಕೆಳಗಿನ ರೈಲುಗಳನ್ನು ಮಾರ್ಗ ಬದಲಾವಣೆ ಮಾಡಲು ದಕ್ಷಿಣ ರೈಲ್ವೆಯು ಸೂಚಿಸಿದೆ.
2024 ರ ಜೂನ್ 06 ಮತ್ತು 13 ರಂದು ಕೇರಳದ(kerala) ಎರ್ನಾಕುಲಂನಿಂದ ಹೊರಡುವ ರೈಲು ಸಂಖ್ಯೆ 12678 ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಪೊದನೂರು, ಇರುಗೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ, ಹೀಗಾಗಿ ತಮಿಳುನಾಡಿನ ಕೊಯಂಬತ್ತೂರ್( Coimbatore) ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ ಮತ್ತು ಪೊದನೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯಾಗಲಿದೆ.
2024ರ ಜೂನ್ 06 ಮತ್ತು 13 ರಂದು ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12677 ಕೆಎಸ್ಆರ್ ಬೆಂಗಳೂರು- ಕೇರಳದ ಎರ್ನಾಕುಲಂ ಎಕ್ಸ್ ಪ್ರೆಸ್ ರೈಲು ಪೊದನೂರು, ಇರುಗೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ, ಹೀಗಾಗಿ ಕೊಯಂಬತ್ತೂರ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ ಮತ್ತು ಪೊದನೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯಾಗಲಿದೆ..
II ರೈಲು ನಿಯಂತ್ರಣ
ಜೂನ್ 05, 12 ಮತ್ತು 19, 2024 ರಂದು ಎಸ್ಎಂವಿಟಿ ಬೆಂಗಳೂರಿನಿಂದ ಸಂಚರಿಸುವ ರೈಲು ಸಂಖ್ಯೆ 06084 ಎಸ್ಎಂವಿಟಿ ಬೆಂಗಳೂರು-ಕೊಚುವೇಲಿ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯೆದಲ್ಲಿ 20 ನಿಮಿಷ ನಿಯಂತ್ರಿಸಲಾಗುವುದು.
III ರೈಲುಗಳ ಮರು ವೇಳಾಪಟ್ಟಿ
ಗೋವಾದ( Goa) ಕನ ಸೊಲಿಮ್ - ಮಜೊರ್ಡಾ ನಿಲ್ದಾಣಗಳ ನಡುವೆ ಜೋಡಿ ಮಾರ್ಗ ಕಾಮಗಾರಿ ನಿಮಿತ್ತ ಈ ಕೆಳಗಿನ ರೈಲಗಳನ್ನು ಮರು ನಿಗದಿಪಡಿಸಲಾಗುವುದು.
1.ರೈಲು ಸಂಖ್ಯೆ 12779 ವಾಸ್ಕೋ-ಡ-ಗಾಮಾ - ಹಜರತ್ ನಿಜಾಮುದ್ದೀನ್ ಎಕ್ಸ್ಪ್ರೆಸ್ ಜೂನ್ 10, 2024 ರಂದು ವಾಸ್ಕೋ-ಡ-ಗಾಮಾದಿಂದ ಹೊರಡಲಿದ್ದು, 120 ನಿಮಿಷ ತಡವಾಗಿ ಹೊರಡಲಿದೆ.
2.ರೈಲು ಸಂಖ್ಯೆ 18048 ವಾಸ್ಕೋ-ಡ-ಗಾಮಾ - ಹೌಸ್‌ನಗರ ಎಕ್ಸ್ ಪ್ರೆಸ್ ಜೂನ್ 09, 2024 ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ವಾಸ್ಕೋ-ಡ-ಗಾಮಾದಲ್ಲಿ 90 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ ಮತ್ತು ಮಾರ್ಗದಲ್ಲಿ 105 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ ಎಂದು ತಿಳಿಸಲಾಗಿದೆ.
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)