logo
ಕನ್ನಡ ಸುದ್ದಿ  /  ಕರ್ನಾಟಕ  /  Weather Today: ಕರಾವಳಿಯ ಕೆಲವೆಡೆ ಭಾರಿ ಮಳೆ, ಉತ್ತರ/ದಕ್ಷಿಣ ಒಳನಾಡಿನಲ್ಲಿ ಹೇಗಿರಲಿದೆ ಮಳೆ, ಶಾಲೆಗೆ ರಜೆ ಇದೆಯಾ?- ಇವತ್ತಿನ ಮಳೆ ಮಾಹಿತಿ

Weather Today: ಕರಾವಳಿಯ ಕೆಲವೆಡೆ ಭಾರಿ ಮಳೆ, ಉತ್ತರ/ದಕ್ಷಿಣ ಒಳನಾಡಿನಲ್ಲಿ ಹೇಗಿರಲಿದೆ ಮಳೆ, ಶಾಲೆಗೆ ರಜೆ ಇದೆಯಾ?- ಇವತ್ತಿನ ಮಳೆ ಮಾಹಿತಿ

Praveen Chandra B HT Kannada

Jul 19, 2024 06:27 AM IST

google News

ಕರ್ನಾಟಕ ಹವಾಮಾನ ವರದಿ, ಇವತ್ತಿನ ಮಳೆ ಮಾಹಿತಿ

    • Karnataka weather and rain today: ಕರ್ನಾಟಕದ ಬಹುತೇಕ ಕಡೆ ಈಗ ವರುಣನ ಅಬ್ಬರ. ಕರಾವಳಿ ಜಿಲ್ಲೆಗಳು ಸೇರಿದಂತೆ ಕೆಲವು ಕಡೆ ಮಳೆಯ ಪ್ರಯುಕ್ತ ಶಾಲೆಗೆ ರಜೆ. ಜುಲೈ 19ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೇಗಿರಲಿದೆ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹವಾಮಾನ ಹೇಗಿರಲಿದೆ- ಓದಿ ಜುಲೈ 19ರ ಹವಾಮಾನ ವರದಿ.
ಕರ್ನಾಟಕ ಹವಾಮಾನ ವರದಿ, ಇವತ್ತಿನ ಮಳೆ ಮಾಹಿತಿ
ಕರ್ನಾಟಕ ಹವಾಮಾನ ವರದಿ, ಇವತ್ತಿನ ಮಳೆ ಮಾಹಿತಿ

ಬೆಂಗಳೂರು: ಕರ್ನಾಟಕದ ಬಹುತೇಕ ಕಡೆ ವರುಣನ ಅಬ್ಬರ ಜೋರಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆರಾಯ ಎಡೆಬಿಡದೆ ಸುರಿಯುತ್ತಿದ್ದಾನೆ. ಇವತ್ತಿನ ಮಳೆ ಹೇಗಿರಲಿದೆ? ಶಾಲೆಗೆ ರಜೆ ಸಿಗುತ್ತ? ಡಿಸಿ ರಜೆ ಘೋಷಣೆ ಮಾಡಬಹುದಾ ಎಂದು ಶಾಲಾ ಮಕ್ಕಳು ಯೋಚಿಸುತ್ತ ಮನೆಯಲ್ಲೇ ಬೆಚ್ಚಗೆ ಇರುವ ಕನಸು ಕಾಣುತ್ತಿದ್ದಾರೆ. ಭಾರತೀಯ ಹವಾಮಾನ ಇಲಾಖೆಯ ಮೆಟ್‌ ಸೆಂಟರ್‌ ಬೆಂಗಳೂರು ಪ್ರಕಾರ ಇಂದು ಎಲ್ಲೆಲ್ಲಿ ಎಷ್ಟೆಷ್ಟು ಮಳೆ ಇರಲಿದೆ ಎಂದು ನೋಡೋಣ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಹವಾಮಾನ ವರದಿ

ಕಳೆದ ಕೆಲವು ದಿನಗಳಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದಾಗಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿತ್ತು. ಆದರೆ, ಇಂದು ಕರಾವಳಿ ಜಿಲ್ಲೆಗಳ ಕೆಲವೆಡೆ ಮಾತ್ರ ಭಾರಿ/ಅತೀ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು, ನಾಳೆ, ನಾಡಿದ್ದು ಇದೇ ರೀತಿಯ ಪರಿಸ್ಥಿತಿ ಮುಂದುವರೆಯಲಿದೆ.

ಉತ್ತರ ಒಳನಾಡಿನ ಹವಾಮಾನ ವರದಿ

ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರ/ಸಾಧಾರಣ ಮಳೆ ಸುರಿಯುವ ಸೂಚನೆಯಿದೆ.

ದಕ್ಷಿಣ ಒಳನಾಡಿನ ಹವಾಮಾನ ವರದಿ

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರಗಳಲ್ಲಿ ಹಗುರ ಸಸಾಧಾರಣ ಮಳೆಯಾಗಲಿದೆ. ಆದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಒಂದೆರಡು ಕಡೆ ಭಾರಿ/ಅತಿ ಭಾರಿ ಮಳೆ ಮುಂದುವರೆಯಲಿದೆ.

ಕರ್ನಾಟಕ ಮಳೆ- ಯಾವೆಲ್ಲ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಆದರೆ, ಮೂಲ್ಕಿ, ಮೂಡಬಿದಿರೆ, ಉಳ್ಳಾಲ, ಮಂಗಳೂರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಇಲ್ಲವೆಂದು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.

ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಇಂದು ಅಂದರೆ ಜುಲೈ 19ರಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ. ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್‌, ಐಟಿಐಗಳಿಗೆ ರಜೆ ಇರುವುದಿಲ್ಲ.

ಉತ್ತರ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಉತ್ತರ ಕನ್ನಡದಲ್ಲಿ ಮಳೆಯ ಅನಾಹುತಗಳು ಹೆಚ್ಚಾಗಿವೆ. ಇಂದು ಕೂಡ ಇಲ್ಲಿ ರೆಡ್‌ ಅಲರ್ಟ್‌ ಘೋಷಣೆಯಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಸತತ ಮಳೆಯಿಂದ ಮಕ್ಕಳ ಆರೋಗ್ಯ, ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.

ಮಳೆಗಾಲದಲ್ಲಿ ಕರ್ನಾಟಕದಲ್ಲಿ ಡೆಂಗ್ಯೂ, ಜ್ವರ, ಶೀತ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಹೆಚ್ಚಿವೆ. ಮಳೆಗಾಲದಲ್ಲಿ ಮಕ್ಕಳು, ಹಿರಿಯರು ಒಳಗೊಂಡಂತೆ ಎಲ್ಲರೂ ಆರೋಗ್ಯದ ಕುರಿತು ಕಾಳಜಿ ವಹಿಸಬೇಕಿದೆ. ಮಳೆಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುವ ಸಲಹೆಗಳು, ಲೇಖನಗಳು ಇಲ್ಲಿವೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ