logo
ಕನ್ನಡ ಸುದ್ದಿ  /  ಕರ್ನಾಟಕ  /  ಬೆಳ್ಳಂಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಅಡ್ಡಹೊಳೆಯಲ್ಲಿ ಸರಣಿ ಅಪಘಾತ; 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಳ್ಳಂಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಅಡ್ಡಹೊಳೆಯಲ್ಲಿ ಸರಣಿ ಅಪಘಾತ; 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Prasanna Kumar P N HT Kannada

Nov 23, 2024 09:08 AM IST

google News

ಬೆಳ್ಳಂಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಅಡ್ಡಹೊಳೆಯಲ್ಲಿ ಸರಣಿ ಅಪಘಾತ; 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

    • Mangalore Crime: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆಯಲ್ಲಿ ಇಂದು ನಸುಕಿನ ಜಾವ ಖಾಸಗಿ ಬಸ್​ ಪಲ್ಟಿಯಾಗಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಬೆಳ್ಳಂಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಅಡ್ಡಹೊಳೆಯಲ್ಲಿ ಸರಣಿ ಅಪಘಾತ; 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಬೆಳ್ಳಂಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಅಡ್ಡಹೊಳೆಯಲ್ಲಿ ಸರಣಿ ಅಪಘಾತ; 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರ ನಸುಕಿನ ಜಾವ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸೈಂಟ್ ಲಾರೆನ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗಿತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಡ್ಡಹೊಳೆ ಎಂಬಲ್ಲಿ ಬಸ್ ರಸ್ತೆಗೆ ಪಲ್ಟಿಯಾದ ಪರಿಣಾಮ ಬೆಂಗಳೂರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಇದೇ ವೇಳೆ ಹಿಂದಿಂದ ಬರುತ್ತಿದ್ದ ಕಾರೊಂದು ಕೆಎಸ್‌ಆರ್‌ಟಿಸಿ ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಪ್ರವಾಸಕ್ಕೆ ತೆರಳಿದ್ದ 32ವಿದ್ಯಾರ್ಥಿಗಳು ಗಾಯಗೊಂಡಿದ್ದು. ಗಾಯಾಳುಗಳನ್ನು ನೆಲ್ಯಾಡಿ ಹಾಗೂ ಕಡಬದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ. ಹೆಚ್ಚಿನ ಚಿಕಿತ್ಸೆಗಾಗಿ 15ಮಂದಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲೆಯಾಗಿದ್ದು, ಈ ಪೈಕಿ 6ಮಂದಿಗೆ ಹೆಚ್ಚಿನ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ