logo
ಕನ್ನಡ ಸುದ್ದಿ  /  ಕರ್ನಾಟಕ  /  Saalumarada Thimmakka: ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ; ವೃಕ್ಷ ಮಾತೆ ಆಸ್ಪತ್ರೆಗೆ ದಾಖಲು, ಬೆನ್ನಿಗೆ ಪೆಟ್ಟು

Saalumarada Thimmakka: ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ; ವೃಕ್ಷ ಮಾತೆ ಆಸ್ಪತ್ರೆಗೆ ದಾಖಲು, ಬೆನ್ನಿಗೆ ಪೆಟ್ಟು

HT Kannada Desk HT Kannada

Aug 06, 2023 09:12 PM IST

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ

    • Vriksha Mathe Thimmakka: ಜಾರಿ ಬಿದ್ದಿರುವ ತಿಮ್ಮಕ್ಕ ಅವರಿಗೆ ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಸಾಲುಮರದ ತಿಮ್ಮಕ್ಕ ಅವರಿಗೆ 112 ವರ್ಷವಾಗಿದೆ.
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ

ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಆಗಸ್ಟ್ 6, ಭಾನಿವಾರ) ಸಂಜೆ ಅವರು ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದು, ಅವರನ್ನು ತಕ್ಷಣವೇ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

Bangalore News: ಬೆಂಗಳೂರು ರಸ್ತೆಗಳಲ್ಲಿ ಮರ ಬೀಳುವ ಸನ್ನಿವೇಶವಿದೆಯಾ, ಈ ನಂಬರ್‌ಗಳಿಗೆ ಕರೆ ಮಾಡಿ

Mandya News: ಮಂಡ್ಯ ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 180 ಬಾಲ್ಯವಿವಾಹ ಪ್ರಕರಣ, 75ರಲ್ಲಿ ಎಫ್‌ಐಆರ್‌ ದಾಖಲು

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಬೆಂಗಳೂರು: ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳ, ಶುಲ್ಕ ನಿಯಂತ್ರಣ ಬೇಕೆನ್ನುತ್ತಿರುವ ಪಾಲಕರು, ಕೈಕಟ್ಟಿ ಕುಳಿತ ಸರ್ಕಾರ- 10 ಮುಖ್ಯ ಅಂಶ

ಜಾರಿ ಬಿದ್ದಿರುವ ತಿಮ್ಮಕ್ಕ ಅವರಿಗೆ ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಸಾಲುಮರದ ತಿಮ್ಮಕ್ಕ ಅವರಿಗೆ 112 ವರ್ಷವಾಗಿದೆ. ಬೆನ್ನಿನ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದ್ದು, ಇನ್ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿರುವುದಾಗಿ ಅವರೊಂದಿಗಿರುವ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿರುವ ತಿಮ್ಮಕ್ಕ ಅಪ್ಪಟ ಪರಿಸರ ಪ್ರೇಮಿ. ಸುಮಾರು 65 ವರ್ಷಗಳ ಕಾಲ 8 ಸಾವಿರಕ್ಕೂ ಹೆಚ್ಚು ಮರಗಳನ್ನು ನೆಡುವ ಮೂಲಕ ವೃಕ್ಷಮಾತೆ ಎನಿಸಿಕೊಂಡಿದ್ದಾರೆ. ವೃಕ್ಷಗಳನ್ನು ನೆಡುವುದು ಮಾತ್ರವಲ್ಲ ಅವುಗಳನ್ನು ಪೋಷಿಸಿ ಹೆಮ್ಮರವಾಗಿ ತಮ್ಮ ಸ್ವಂತ ಮಕ್ಕಳಂತೆ ಹಾರೈಕೆ ಮಾಡಿದ್ದಾರೆ. ಇವರ ನಿಸ್ವಾರ್ಥ ಸೇವೆಗಾಗಿ 2019 ರಲ್ಲಿ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡಿ ಗೌರವಿಸಿದೆ.

ಕಳೆದ ಬಾರಿ ವಯೋ ಸಹಜ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಮಂಡಿ ನೋವು ಹಾಗೂ ಉಸಿರಾಟದ ಸಮಸ್ಯೆ ಅವರಲ್ಲಿ ಕಾಣಿಸಿಕೊಂಡಿತ್ತು. ಶೀಘ್ರವೇ ಚೇತರಿಸಿಕೊಂಡ ತಿಮ್ಮಕ್ಕ ಸಹಜ ಜೀವನಕ್ಕೆ ಮರಳಿದ್ದರು. ಇದೀಗ ತಮ್ಮ ಮನೆಯಲ್ಲಿ ಜಾರಿ ಬೀಳುವ ಮೂಲಕ ಬೆನ್ನಿಗೆ ಪೆಟ್ಟಾಗಿದೆ. ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವರದಿ: ಅಕ್ಷರಾ ಕಿರಣ್

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ