logo
ಕನ್ನಡ ಸುದ್ದಿ  /  ಕರ್ನಾಟಕ  /  Cm Bommai On Sahitya Sammelana: ಹಾವೇರಿಯ ಸಮ್ಮೇಳನ ಸಾಹಿತ್ಯ ಲೋಕಕ್ಕೆ ಉತ್ಕೃಷ್ಟ ಮುನ್ನುಡಿ ಬರೆಯಲಿದೆ: ಸಿಎಂ ಬೊಮ್ಮಾಯಿ

CM Bommai on sahitya sammelana: ಹಾವೇರಿಯ ಸಮ್ಮೇಳನ ಸಾಹಿತ್ಯ ಲೋಕಕ್ಕೆ ಉತ್ಕೃಷ್ಟ ಮುನ್ನುಡಿ ಬರೆಯಲಿದೆ: ಸಿಎಂ ಬೊಮ್ಮಾಯಿ

HT Kannada Desk HT Kannada

Jan 06, 2023 01:27 PM IST

google News

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಬೊಮ್ಮಾಯಿ ಹಾವೇರಿಯಲ್ಲಿ ಚಾಲನೆ ನೀಡಿದರು.

  • 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಹಾವೇರಿ ಸಾಹಿತ್ಯ ಸಮ್ಮೇಳನ ಸಾಹಿತ್ಯ ಲೋಕಕ್ಕೆ ಉತ್ಕೃಷ್ಟ ಮುನ್ನುಡಿಯನ್ನು ಬರೆಯಲಿದೆ ಎಂದಿದ್ದಾರೆ. 

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಬೊಮ್ಮಾಯಿ ಹಾವೇರಿಯಲ್ಲಿ ಚಾಲನೆ ನೀಡಿದರು.
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಬೊಮ್ಮಾಯಿ ಹಾವೇರಿಯಲ್ಲಿ ಚಾಲನೆ ನೀಡಿದರು.

ಹಾವೇರಿ: ಇಂದಿನಿಂದ ಹಾವೇರಿಯಲ್ಲಿ ಆರಂಭವಾಗಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ‌‌. ಎಸ್. ಯಡಿಯೂರಪ್ಪ, ಸಮ್ಮೇಳನಾಧ್ಯಕ್ಷ ಸಾಹಿತಿ ದೊಡ್ಡ ರಂಗೇಗೌಡ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಎಚ್.‌ಎಸ್. ವೆಂಕಟೇಶಮೂರ್ತಿ, ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಸುನಿಲ್ ಕುಮಾರ್, ಅರಬೈಲ್ ಶಿವರಾಮ್ ಹೆಬ್ಬಾರ್, ಸಂಸದ ಶಿವಕುಮಾರ್ ಉದಾಸಿ, ಶಾಸಕರಾದ ನೆಹರೂ ಒಲೇಕಾರ, ಶ್ರೀನಿವಾಸ ಮಾನೆ, ವಿಧಾನ ಪರಿಷತ್ ಸದಸ್ಯರಾದ ಪ್ರದೀಪ್ ಶೆಟ್ಟರ್, ಸಲೀಂ ಅಹಮದ್, ಎಸ್.ವಿ ಸಂಕನೂರು ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ, 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ ಲೋಕಕ್ಕೆ ಉತ್ಕೃಷ್ಟ ಮುನ್ನುಡಿಯನ್ನು ಬರೆಯಲಿದೆ ಎಂದು ತಿಳಿಸಿದ್ದಾರೆ.

ನನ್ನ ತವರು ಜಿಲ್ಲೆಯಲ್ಲಿ ಸಮ್ಮೇಳನ ನಡೆಯುತ್ತಿರುವುದು ಬಹಳ ಸಂತೋಷ ತಂದಿದೆ. ಹಾವೇರಿ ಜ್ಞಾನದ ನಾಡು, ಸಾಹಿತ್ಯದ ಬೀಡು. ಇಂಥ ನಾಡಿನಲ್ಲಿ ಸಾಹಿತ್ಯ ಸಮ್ಮೇಳನ ಮಾಡುವ ಮೂಲಕ ಕನ್ನಡ , ಕನ್ನಡ ಅಸ್ಮಿತೆಯನ್ನು ಎತ್ತಿಹಿಡಿದಂತಾಗುತ್ತದೆ. ಪ್ರಚಲಿತ ವಿಷಯಗಳ ಬಗ್ಗೆ ಚರ್ಚೆ ಮಾಡುವುದು, ಪರಿಹಾರ ನೀಡುವುದು, ಭವಿಷ್ಯದಲ್ಲಿ ಕನ್ನಡ ಹಾಗೂ ಕನ್ನಡ ಸಾಹಿತ್ಯ ಯಾವ ಮಟ್ಟಕ್ಕೆ ಹೋಗಬೇಕು ಎನ್ನುವ ಉತ್ಕೃಷ್ಟ ಸಾಹಿತ್ಯ ರಚನೆಗೆ ಮುನ್ನಡಿಯಾಗಲಿದೆ ಎಂದು ಹೇಳಿದರು.

ಕನ್ನಡ ಅಭಿವೃದ್ಧಿಗೆ ಮಸೂದೆ

ಸಮಗ್ರ ಕನ್ನಡ ಅಭಿವೃದ್ಧಿಗೆ ಮಸೂದೆ ಬಗ್ಗೆ ಪ್ರತಿಕ್ರಿಯೆ ನೀಡಿ, ಕನ್ನಡದ ಮಸೂದೆ ಚರ್ಚೆಯಾಗಬೇಕು. ಮುಖ್ಯವಾಗಿ ವಿಧಾನಸಭೆ ಒಳಗೆ ಹೊರಗೆ ವ್ಯಾಪಕವಾಗಿ ಚರ್ಚೆಯಾಗಬೇಕು. ಈಗಾಗಲೇ ಕಳೆದ ಬಾರಿ ಮಂಡನೆಯಾದ ನಂತರ ಹತ್ತು ಹಲವು ಸಲಹೆಗಳು ಬಂದಿವೆ. ಇನ್ನಷ್ಟು ಸಲಹೆಗಳನ್ನು ನೀಡುವುದಾಗಿ ಹೇಳಿದ್ದಾರೆ. ಇದು ಸಾಹಿತ್ಯ ಹಾಗೂ ಸಾರ್ವಜನಿಕ ಲೋಕದಲ್ಲಿ ಚರ್ಚೆಯಾಗಬೇಕು. ಚರ್ಚೆ ಮಾಡಿ ಮಸೂದೆಯಾದರೆ ಅದು ಸುದೀರ್ಘ ಅನುಷ್ಠಾನ ಯೋಜನೆಯಾಗುತ್ತದೆ. ಇದು ಅವಸರದಲ್ಲಿ ಮಾಡುವ ಕೆಲಸ ಅಲ್ಲ. ಕಾನೂನು ಆಯೋಗ ಸಂಪೂರ್ಣವಾಗಿ ಸ್ಪಷ್ಟಪಡಿಸಿ ಅಭಿಪ್ರಾಯ ನೀಡಿದ್ದಾರೆ. ಕಾನೂನು ಅಂಶಗಳಿವೆ. ಸಾಹಿತ್ಯಾತ್ಮಕ ಅಂಶಗಳಿಲ್ಲ. ಕನ್ನಡ ಸಾಹಿತ್ಯ ಪರಿಷತ್ತು ಕೆಲವು ಬದಲಾವಣೆಗಳನ್ನು ಕೇಳಿದ್ದು, ಅದನ್ನ ಮಾಡಿಕೊಡಲಾಗಿದೆ. ಆಡಳಿತಾತ್ಮಕ ಅಂಶಗಳು ಬಂದಾಗ ಮಾತ್ರ ಅದು ಪರಿಪೂರ್ಣವಾಗುತ್ತದೆ. ಬರುವ ವಿಧಾನಸಭೆಯಲ್ಲಿ ಅನುಮೋದಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕ್ರೀಡಾಮನೋಭಾವ

ಪರ್ಯಾಯ ಸಾಹಿತ್ಯ ಸಮ್ಮೇಳನ ಪ್ರತಿ ಸಾಹಿತ್ಯ ಸಮ್ಮೇಳನವಾದಾಗಲೂ ಇರುತ್ತದೆ. ಅದನ್ನು ನಾವು ಕ್ರೀಡಾಮನೋಭಾವದಿಂದ ತೆಗೆದುಕೊಂಡು, ಅಲ್ಲಿ ಚರ್ಚೆಯಾಗುವ ವಿಷಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.

ಸಮಾರೋಪ ಸಮಾರಂಭದಲ್ಲಿ ತೀರ್ಮಾನಿಸಿದ ನಂತರ ಭರವಸೆ

ಸರ್ಕಾರ ಈಗಾಗಲೇ ಗಡಿನಾಡು ಕನ್ನಡಿಗರ ಅಭಿವೃದ್ಧಿಗೆ ಪ್ಯಾಕೇಜ್ ಘೋಷಣೆ ಮಾಡಿದೆ. ಚರ್ಚೆಗಳ ಆಧಾರದ ಮೇಲೆ ಸಮಾರೋಪ ಸಮಾರಂಭದಲ್ಲಿ ತೀರ್ಮಾನಿಸಿ ಭರವಸೆ ನೀಡಲಾಗುವುದು ಎಂದಿದ್ದಾರೆ.

ವಿಲ್ಲಿನ ಚೌಕಟ್ಟಿನಲ್ಲಿ ಕ್ರಮ

ಸಿದ್ದೇಶ್ವರ ಸ್ವಾಮೀಜಿಗಳ ಕುರಿತು ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿ, ಸ್ವಾಮೀಜಿಗಳ ವಿಲ್ಲಿನ ಚೌಕಟ್ಟಿನಲ್ಲಿ ಎಲ್ಲವನ್ನೂ ಮಾಡಬೇಕು. ಅದನ್ನು ಮೀರಿ ಏನೂ ಮಾಡಲು ಸಾಧ್ಯವಿಲ್ಲ. ಕಣ್ಣೇರಿ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಟ್ರಸ್ಟಿನ ಸದಸ್ಯರೆಲ್ಲರೂ ತೀರ್ಮಾನಿಸಿದಂತೆ ಕ್ರಮ ವಹಿಸಲಾಗುವುದು ಎಂದರು.

ಮೀಸಲಾತಿ ವಿಚಾರದಲ್ಲಿ ಸರ್ಕಾರದಿಂದ ಸರಿಯಾದ ಹೆಜ್ಜೆ

ಪಂಚಮಸಾಲಿ 2 ಎ ಮೀಸಲಾತಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ ಸರ್ಕಾರ ಸರಿಯಾದ ಹೆಜ್ಜೆಯಿಟ್ಟಿದ್ದು, ಕಾನೂನು ಹಾಗೂ ಸಂವಿಧಾನಾತ್ಮಕವಾಗಿ ಕ್ರಮ ವಹಿಸಬೇಕು. ಅಂತಿಮ ವರದಿ ಬಂದ ಕೂಡಲೇ ಸ್ಪಷ್ಟವಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ