logo
ಕನ್ನಡ ಸುದ್ದಿ  /  Karnataka  /  Sansad Adarsh Gram Yojana Government School Development Under Sansad Adarsh Gram Yojna Union Minister Joshi Inaugurated

Sansad Adarsh Gram Yojana: ಆದರ್ಶ ಗ್ರಾಮ ಯೋಜನೆಯಡಿ ಸರ್ಕಾರಿ ಶಾಲೆ ಅಭಿವೃದ್ದಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಲನೆ

HT Kannada Desk HT Kannada

Feb 24, 2023 06:23 PM IST

ಧಾರವಾಡದ ಹಾರೋಬೆಳವಡಿ ಸರ್ಕಾರಿ ಶಾಲೆಗಳ ನೂತನ ಕಟ್ಟಡಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ಲೋಕಾರ್ಪಣೆ ಮಾಡಿದರು.

  • Sansad Adarsh Gram Yojana: ಧಾರವಾಡದ ಹಾರೋಬೆಳವಡಿ ಸರ್ಕಾರಿ ಶಾಲೆಗಳ ನೂತನ ಕಟ್ಟಡಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ಲೋಕಾರ್ಪಣೆ ಮಾಡಿದರು.

ಧಾರವಾಡದ ಹಾರೋಬೆಳವಡಿ ಸರ್ಕಾರಿ ಶಾಲೆಗಳ ನೂತನ ಕಟ್ಟಡಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ಲೋಕಾರ್ಪಣೆ ಮಾಡಿದರು.
ಧಾರವಾಡದ ಹಾರೋಬೆಳವಡಿ ಸರ್ಕಾರಿ ಶಾಲೆಗಳ ನೂತನ ಕಟ್ಟಡಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ಲೋಕಾರ್ಪಣೆ ಮಾಡಿದರು.

ಧಾರವಾಡ: ಸಂಸದರ ಆದರ್ಶ ಗ್ರಾಮ ಯೋಜನೆಯಲ್ಲಿ ನಿರ್ಮಿಸಲಾದ ಧಾರವಾಡದ ಹಾರೋಬೆಳವಡಿ ಸರ್ಕಾರಿ ಶಾಲೆಗಳ ನೂತನ ಕಟ್ಟಡಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ಲೋಕಾರ್ಪಣೆ ಮಾಡಿದರು.

ಟ್ರೆಂಡಿಂಗ್​ ಸುದ್ದಿ

ದಕ್ಣಿಣ ಕನ್ನಡದಲ್ಲಿ ಕೃಷಿ ರಕ್ಷಣೆಗೆ ಮಾತ್ರ ಆಯುಧ, ಚುನಾವಣೆಗೆ ಠಾಣೆಗಳಲ್ಲಿರಿಸಿದ ಶಸ್ತ್ರಾಸ್ತ್ರ ಹಿಂಪಡೆಯಲು ಜಿಲ್ಲಾಧಿಕಾರಿ ಆದೇಶ

Hassan Sex Scandal: ಬಿಜೆಪಿ ನಾಯಕನಿಗೆ ನಾನು ಮೊದಲು ಪೆನ್‌ಡ್ರೈವ್ ಕೊಟ್ಟಿದ್ದು, ಕಾಂಗ್ರೆಸ್‌ನವರಿಗೆ ಕೊಟ್ಟಿಲ್ಲ; ಕಾರ್ ಚಾಲಕನ ಹೇಳಿಕೆ

Hassan Sex Scandal: ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು, ಅಶ್ಲೀಲ ವಿಡಿಯೋ ಹಗರಣ ನಾಚಿಕೆಗೇಡಿನ ಸಂಗತಿ ಎಂದ ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು ಹವಾಮಾನ; ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಶಿಯಸ್ ಆಸುಪಾಸು, ರಣಬಿಸಿಲು, ಬಿಸಿಗಾಳಿ ಹೆಚ್ಚಳ, ಮಳೆಯ ಮಾತು ದೂರ

ಧಾರವಾಡದ ಹಾರೋಬೆಳವಡಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು 2.84 ಕೋಟಿ ರೂಪಾಯಿ ವೆಚ್ವದಲ್ಲಿ ನಿರ್ಮಿಸಲಾಗಿದೆ. ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನ ಸಿಎಸ್ಆರ್ ಅನುದಾನವನ್ನು ಬಳಸಿಕೊಂಡು ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಶಾಲೆಯ ಎಲ್ಲ ತರಗತಿಗಳಿಗೂ ಸ್ಮಾರ್ಟ್ ಕ್ಲಾಸ್ ಅಳವಡಿಸಲಾಗಿದೆ. ಈ ಶಾಲೆಯು ಬರುವ ದಿನಗಳಲ್ಲಿ ಗ್ರಾಮದ ವಿದ್ಯಾರ್ಥಿಗಳಿಗೆ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭರವಸೆ ವ್ಯಕ್ತಪಡಿಸಿದ್ದಾರೆ.

ಧಾರವಾಡದ ಕಬ್ಬೇನೂರಿನಲ್ಲಿ ನಿರ್ಮಾಣವಾಗಿರುವ ಸರಕಾರಿ ಹಿರಿಯ ಪ್ರಥಮಿಕ ಶಾಲೆ ನೂತನ ಕಟ್ಟಡವನ್ನು ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನ ಸಿಎಸ್ಆರ್ ಅನುದಾನ 3.30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಕಾರ್ಯಕ್ರಮದಲ್ಲಿ ಶಾಸಕರಾದ ಅಮೃತ್ ದೇಸಾಯಿ, ಕರ್ನಾಟಕ ಬಯಲುಸೀಮೆ ಪ್ರದೇಶಾಭಿವೃದ್ಧಿಯ ಮಂಡಳಿಯ ಅಧ್ಯಕ್ಷರಾದ ತವನಪ್ಪ ಅಷ್ಟಗಿ, ಮಾಜಿ ಶಾಸಕಿ ಸೀಮಾ ಮಸೂತಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.

ಏನಿದು ಸಂಸದರ ಆದರ್ಶ ಗ್ರಾಮ ಯೋಜನೆ?

ಸಂಸದರ ಆದರ್ಶ ಗ್ರಾಮ ಯೋಜನೆ(ಎಸ್ಎಜಿವೈ)ಯನ್ನು 2014ರ ಅಕ್ಟೋಬರ್‌ 11ರಂದು ಆರಂಭಿಸಲಾಯಿತು. ಮಹಾತ್ಮ ಗಾಂಧಿ ಅವರ ಆದರ್ಶ ಗ್ರಾಮ ಪರಿಕಲ್ಪನೆಯನ್ನು ಪ್ರಸ್ತುತಕ್ಕೆ ಅನ್ವಯಿಸುವ ಉದ್ದೇಶದೊಂದಿಗೆ ಶುರುವಾದ ಯೋಜನೆ ಇದು. ಪ್ರತಿ ಸಂಸದ ಈ ಯೋಜನೆ ಪ್ರಕಾರ, ಒಂದು ಗ್ರಾಮ ಪಂಚಾಯಿತಿಯನ್ನು ದತ್ತು ತೆಗೆದುಕೊಂಡು, ಅಲ್ಲಿ ಮೂಲಸೌಲಭ್ಯಕ್ಕೆ ಅನುಗುಣವಾಗಿ ಸಂಪೂರ್ಣ ಸಾಮಾಜಿಕ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಬೇಕು.

ಆದರ್ಶ ಗ್ರಾಮಗಳು ಸ್ಥಳೀಯ ಅಭಿವೃದ್ಧಿ ಮತ್ತು ಆಡಳಿತಕ್ಕೆ ಮಾದರಿ ಆಗಬೇಕು. ಇತರ ಗ್ರಾಮ ಪಂಚಾಯಿತಿಗಳಿಗೆ ಪ್ರೇರಣೆ ಆಗಬೇಕು ಎಂಬುದು ಕೂಡ ಈ ಯೋಜನೆಯ ಉದ್ದೇಶವಾಗಿದೆ. ಸಂಸದರ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಜ್ಞಾನ ತಂತ್ರಜ್ಞಾನ ಬಳಸಿಕೊಂಡು ಹಾಗೂ ಗ್ರಾಮಸ್ಥರನ್ನು ಒಳಗೊಂಡು ಗ್ರಾಮದ ಅಭಿವೃದ್ಧಿಗೆ ಯೋಜನೆಯನ್ನು ರೂಪಿಸಲಾಗುತ್ತದೆ. ಬಳಿಕ ಸುದೀರ್ಘ ಯೋಜನಾ ವರದಿಯನ್ನು ತಯಾರಿಸಲಾಗುತ್ತದೆ. ಇದನ್ನು ಇಲಾಖೆಗಳು ರಾಜ್ಯ ಸರಕಾರಕ್ಕೆ ಸಲ್ಲಿಸುತ್ತವೆ. ರಾಜ್ಯ ಮಟ್ಟದ ಸಮಿತಿ ವರದಿಯನ್ನು ಪರಿಶೀಲಿಸಿ, ಬದಲಾವಣೆಗಳನ್ನು ಸೂಚಿಸಿ, ಸಂಪನ್ಮೂಲವನ್ನು ಹಂಚುತ್ತದೆ. ಭಾರತ ಸರಕಾರದ ಇಲಾಖೆಗಳು/ಮಂತ್ರಾಲಯಗಳು ಈವರೆಗೆ 21 ಯೋಜನೆಗಳಿಗೆ ತಿದ್ದುಪಡಿ ತಂದು, ಎಸ್ಎಜಿವೈ ಗ್ರಾಮ ಪಂಚಾಯಿತಿ ಯೋಜನೆಗಳು ಅನುಷ್ಠಾನವಾಗುವಂತೆ ಮಾಡಿವೆ.

ಸಂಸದರ ಅಧ್ಯಕ್ಷತೆಯಲ್ಲಿ ನಡೆಯುವ ಜಿಲ್ಲಾ ಹಂತದ ಮಾಸಿಕ ಸಭೆಯಲ್ಲಿ ಗ್ರಾಪಂ ಅಭಿವೃದ್ಧಿ ಯೋಜನಾ ಪ್ರಗತಿ ಪರಿಶೀಲನೆ ನಡೆಯುತ್ತದೆ. ಪ್ರತಿ ಯೋಜನೆಯ ಪ್ರಗತಿಯನ್ನು ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಪರಿಶೀಲಿಸಿದ ಬಳಿಕ, ಈ ಬಗ್ಗೆ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.

ಸಂಸದರ ಆದರ್ಶ ಗ್ರಾಮ ಯೋಜನೆಯ ಮಾರ್ಗಸೂಚಿಯಲ್ಲಿ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಯ ಪರಿಕಲ್ಪನೆಯನ್ನು ಒದಗಿಸಲಾಗಿದೆ. ಈ ಮಾರ್ಗಸೂಚಿ ಇಲ್ಲಿದೆ. - ಸಂಸದರ ಆದರ್ಶ ಗ್ರಾಮ ಯೋಜನೆಯ ಮಾರ್ಗಸೂಚಿ

ಗಮನಿಸಬಹುದಾದ ಸುದ್ದಿ

Crypto assets action plan: ಕ್ರಿಪ್ಟೋ ಅಸೆಟ್ಸ್‌ ನಿರ್ವಹಣೆಗೆ ಐಎಂಎಫ್‌ 9 ಅಂಶಗಳ ಕ್ರಿಯಾ ಯೋಜನೆ; ಸದಸ್ಯ ರಾಷ್ಟ್ರಗಳಿಗೆ ರವಾನೆ

ಕ್ರಿಪ್ಟೋ ಅಸೆಟ್ಸ್‌ ಅನ್ನು ಯಾವ ರೀತಿ ನಿರ್ವಹಿಸಬೇಕು ಎಂಬುದಕ್ಕೆ ಸಂಬಂಧಿಸಿ ಒಂಬತ್ತು ಅಂಶಗಳ ಕ್ರಿಯಾ ಯೋಜನೆಯನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿ (International Monetary Fund) ರೂಪಿಸಿದೆ. ಬಿಟ್‌ಕಾಯಿನ್‌ಗೆ ನೀಡಿದಂತೆ ಕಾನೂನುಬದ್ಧ ಮಾನ್ಯತೆಯನ್ನು ಯಾವುದೇ ಕ್ರಿಪ್ಟೋ ಅಸೆಟ್ಸ್‌ಗೆ ಒದಗಿಸಬೇಡಿ ಎಂದು ಸದಸ್ಯ ರಾಷ್ಟ್ರಗಳಿಗೆ ಅದು ಮನವಿ ಮಾಡಿದೆ. ವಿವರ ವರದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ವಿಭಾಗ

    ಹಂಚಿಕೊಳ್ಳಲು ಲೇಖನಗಳು