logo
ಕನ್ನಡ ಸುದ್ದಿ  /  ಕರ್ನಾಟಕ  /  Shimoga Crime: ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದ ಮೂವರ ಸಜೀವ ದಹನ; ಸಾವಿನ ಸುತ್ತ ಹಲವು ಅನುಮಾನ

Shimoga Crime: ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದ ಮೂವರ ಸಜೀವ ದಹನ; ಸಾವಿನ ಸುತ್ತ ಹಲವು ಅನುಮಾನ

HT Kannada Desk HT Kannada

Oct 08, 2023 05:37 PM IST

google News

ಒಂದೇ ಕುಟುಂಬದ ಮೂವರ ಸಜೀವ ದಹನ

    • ಈ ರೀತಿ ಹಿಂಸೆ ಕೊಟ್ಟುಕೊಂಡು ಸಾಯುವ ಅನಿವಾರ್ಯತೆ ಕುಟುಂಬಕ್ಕಿಲ್ಲ. ಹತ್ತಾರು ಎಕರೆ ಜಮೀನು ಇದೆ, ವ್ಯಾಪಾರ ಕೂಡ ಇದೆ. ಪೊಲೀಸ್ ತನಿಖೆಯಿಂದಷ್ಟೇ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು ಎಂದಿದ್ದಾರೆ ಮಾಜಿ ಸಚಿವ ಆರಗ ಜ್ಞಾನೇಂದ್ರ. 
ಒಂದೇ ಕುಟುಂಬದ ಮೂವರ ಸಜೀವ ದಹನ
ಒಂದೇ ಕುಟುಂಬದ ಮೂವರ ಸಜೀವ ದಹನ

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಬಳಿಯ ಮನೆಯೊಂದರಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಭೀಕರ ಘಟನೆ ಇಂದು (ಅ.8, ಭಾನುವಾರ) ಬೆಳಗ್ಗೆ ಸಂಭವಿಸಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಹುಟ್ಟಿಕೊಂಡಿದೆ.

ತೀರ್ಥಹಳ್ಳಿ ತಾಲ್ಲೂಕಿನ ಹೊಸನಗರ ರಸ್ತೆ ಸಮೀಪ ಇರುವ ಅರಳಸುರಳಿ ಗಣಪತಿ ಕಟ್ಟೆ ರೈಸ್ ಮಿಲ್ ಹತ್ತಿರ ಇರುವ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ. ಮನೆಯ ಕೋಣೆಯ ಒಳಗೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆತ್ಮಹತ್ಯೆಯ ಶಂಕೆ ಎದುರಾಗಿದೆ. ಅದೇ ಕುಟುಂಬದ ಮತ್ತೊಬ್ಬ ಸದಸ್ಯನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಅರ್ಚಕ ರಾಘವೇಂದ್ರ ಕೆಕೋಡ್ (65), ಅವರ ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (30) ಎಂದು ಗುರುತಿಸಲಾಗಿದೆ. ಇನ್ನೋರ್ವ ಪುತ್ರ ಭರತ್ (28) ಎಂಬಾತನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಕಿಮ್ಮನೆ ರತ್ನಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಕೂಡ ಭೇಟಿ ನೀಡಿದ್ದು, ಆತ್ಮಹತ್ಯೆಯೋ? ಆಕಸ್ಮಿಕ ಘಟನೆಯೋ ಅನ್ನೋದನ್ನ ತನಿಖೆ ನಡೆಸ್ತಿದ್ದಾರೆ.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಆರಗ ಜ್ಞಾನೇಂದ್ರ,ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಇದ್ದಾರೆ. ದೇಹಗಳು ಗುರುತು ಸಿಗದ ರೀತಿಯಲ್ಲಿ ಆಗಿದೆ. ಇಂತಹ ಘಟನೆ ಆದಾಗ ಸಾಕಷ್ಟು ಅಭಿಪ್ರಾಯ ಬರೋದು ಸಹಜ. ಈ ರೀತಿ ಹಿಂಸೆ ಕೊಟ್ಟುಕೊಂಡು ಸಾಯುವ ಅನಿವಾರ್ಯತೆ ಕುಟುಂಬಕ್ಕಿಲ್ಲ. ಹತ್ತಾರು ಎಕರೆ ಜಮೀನು ಇದೆ, ವ್ಯಾಪಾರ ಕೂಡ ಇದೆ. ಪೊಲೀಸ್ ತನಿಖೆಯಿಂದಷ್ಟೇ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು ಎಂದಿದ್ದಾರೆ.

ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ ಮಿಥುನ್ ಕುಮಾರ್, ಘಟನೆ ಬೆಳಗ್ಗೆ 6 ರಿಂದ 6:30ರ ಸುಮಾರಿಗೆ ನಡೆದಿದೆ. ಮನೆಯ ಕೋಣೆಯಲ್ಲಿ ಮೂವರ ಮೃತ ದೇಹ ಪತ್ತೆಯಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಘಟನೆ ನಡೆದ ಅರ್ಧಗಂಟೆಯೊಳಗೆ ತೀರ್ಥಹಳ್ಳಿಯಿಂದ ಅಗ್ನಿಶಾಮಕ ದಳ ಸಿಬ್ಬಂದಿ ಬಂದಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಭರತ್​​ಗೆ ಶೇಕಡ 40 ರಿಂದ 50ರಷ್ಟು ಸುಟ್ಟ ಗಾಯಗಳಾಗಿದೆ. ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ದಾವಣಗೆರೆಯಿಂದ ವಿಧಿವಿಜ್ಞಾನ ತಜ್ಞರ ತಂಡ, ಸೀನ್ ಆಫ್ ಕ್ರೈಮ್ ಆಫೀಸರ್ಸ್ ತಂಡ ಹಾಗೂ ಡಾಗ್ ಸ್ಕ್ವಾಡ್ ಆಗಮಿಸಿದೆ. ಸ್ಥಳದಲ್ಲಿ ಕೆಲವೊಂದು ಮಾಹಿತಿ ಸಿಕ್ಕಿದೆ, ಗಾಯಾಳು ಭರತ ಸಹ ಕೆಲವೊಂದು ಮಾಹಿತಿ ನೀಡಿದ್ದಾರೆ. ಈಗಲೇ ಯಾವುದೇ ನಿರ್ಧಾರಕ್ಕೆ ಬರಲಾಗದು. ತನಿಖೆ ಪೂರ್ಣಗೊಂಡ ನಂತರವಷ್ಟೇ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ವಿವರಿಸಿದ್ದಾರೆ.

ವರದಿ: ಅದಿತಿ, ದಾವಣಗೆರೆ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ