logo
ಕನ್ನಡ ಸುದ್ದಿ  /  ಕರ್ನಾಟಕ  /  Siddaramaiah Slams Sriramulu: ನಿನ್ನಂತ ಪೆದ್ದನೊಂದಿಗೆ ಚರ್ಚೆ ಮಾಡಲು ನಾವು ಇಲ್ಲಿ ಬಂದಿಲ್ಲ: ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ಕಿಡಿ!

Siddaramaiah Slams Sriramulu: ನಿನ್ನಂತ ಪೆದ್ದನೊಂದಿಗೆ ಚರ್ಚೆ ಮಾಡಲು ನಾವು ಇಲ್ಲಿ ಬಂದಿಲ್ಲ: ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ಕಿಡಿ!

HT Kannada Desk HT Kannada

Oct 15, 2022 06:14 PM IST

ಬಳ್ಳಾರಿಯಲ್ಲಿ ಸಿದ್ದರಾಮಯ್ಯ ಭಾಷಣ

    • ಅಭಿವೃದ್ಧಿ ಕುರಿತು ಚರ್ಚೆಗೆ ಆಹ್ವಾನಿಸಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ ನಡೆದ ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆಯ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಅಭಿವೃದ್ಧಿಗೆ ಶ್ರೀರಾಮುಲು ಅವರ ಕೊಡುಗೆ ಶೂನ್ಯ ಎಂದು ಕಿಡಿಕಾರಿದರು. ನಮ್ಮನ್ನು ಚರ್ಚೆಗೆ ಆಹ್ವಾನಿಸುವ ಮೊದಲು, ಶ್ರೀರಾಮುಲು ಬಳ್ಳಾರಿ ಜಿಲ್ಲೆಗೆ ತನ್ನ ಕೊಡುಗೆ ಏನು ಎಂಬುದನ್ನು ಮೊದಲು ಹೇಳಲಿ ಎಂದು ಸಿದ್ದರಾಮ್ಯಯ ಸವಾಲು ಹಾಕಿದರು.
ಬಳ್ಳಾರಿಯಲ್ಲಿ ಸಿದ್ದರಾಮಯ್ಯ ಭಾಷಣ
ಬಳ್ಳಾರಿಯಲ್ಲಿ ಸಿದ್ದರಾಮಯ್ಯ ಭಾಷಣ (Verified Twitter)

ಬಳ್ಳಾರಿ: ಅಭಿವೃದ್ಧಿ ಕುರಿತು ಚರ್ಚೆಗೆ ಆಹ್ವಾನಿಸಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ ನಡೆದ ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆಯ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಅಭಿವೃದ್ಧಿಗೆ ಶ್ರೀರಾಮುಲು ಅವರ ಕೊಡುಗೆ ಶೂನ್ಯ ಎಂದು ಕಿಡಿಕಾರಿದರು.

ಟ್ರೆಂಡಿಂಗ್​ ಸುದ್ದಿ

ದೊಡ್ಡಬಳ್ಳಾಪುರ: ಹೇಮಂತಗೌಡ ಹತ್ಯೆ ಪ್ರಕರಣದ 2ನೇ ಆರೋಪಿ ಬಂಧನ, ಪೊಲೀಸರ ಮೇಲೆ ಹಲ್ಲೆಗೆತ್ನಿಸಿದ್ದ ಕಾರಣ ಕಾಲಿಗೆ ಗುಂಡೇಟು

ಮಂಗಳೂರು ವಿಮಾನ ನಿಲ್ಧಾಣಕ್ಕೆ ಬಂದು ಗೊಂದಲಕ್ಕೆ ಒಳಗಾದ ಮಹಿಳೆ, ನೆರವಾದ ಭದ್ರತಾ ಸಿಬ್ಬಂದಿ, ನಾಪತ್ತೆ ಪ್ರಕರಣ ಸುಖಾಂತ್ಯ

ದಕ್ಷಿಣ ಕನ್ನಡದ ಮಂಗಳೂರು, ಪುತ್ತೂರಲ್ಲಿ ಹಲಸು, ಮಾವು ಸೇರಿ ವಿವಿಧ ಹಣ್ಣುಗಳ ಮೇಳ, ದಿನಾಂಕ ಮತ್ತು ಇತರೆ ವಿವರ

ಬೆಂಗಳೂರು: ಕೊನೆಗೂ ತೆರಿಗೆ ಕಟ್ಟಲು ಒಪ್ಪಿಕೊಂಡ ಮಂತ್ರಿ ಮಾಲ್; ಬೀಗ ತೆಗೆಯುವಂತೆ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ

ನಮ್ಮನ್ನು ಚರ್ಚೆಗೆ ಆಹ್ವಾನಿಸುವ ಮೊದಲು, ಶ್ರೀರಾಮುಲು ಬಳ್ಳಾರಿ ಜಿಲ್ಲೆಗೆ ತನ್ನ ಕೊಡುಗೆ ಏನು ಎಂಬುದನ್ನು ಮೊದಲು ಹೇಳಲಿ. ನಿನ್ನಂತ ಪೆದ್ದನೊಂದಿಗೆ ಚರ್ಚೆ ಮಾಡಲು ನಾವು ಇಲ್ಲಿಗೆ ಬಂದಿಲ್ಲ. ದೇಶಕ್ಕೆ ಕಾಂಗ್ರೆಸ್‌ ನೀಡಿರುವ ಕೊಡುಗೆ ಏನು ಎಂಬುದನ್ನು ಶ್ರೀರಾಮುಲು ಮೊದಲು ತಿಳಿದುಕೊಳ್ಳಲಿ ಎಂದು ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು.

ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲು ವಿ.ಎಸ್​ ಉಗ್ರಪ್ಪ ಬಳ್ಳಾರಿಗೆ ಬರುತ್ತಾರೆ. ಬಳ್ಳಾರಿ ಲೂಟಿ ಮಾಡಿರುವುದೇ ನಿಮ್ಮ ಸಾಧನೆ ಎಂಬ ಸತ್ಯವನ್ನು ಜನರಿಗೆ ತಿಳಿಸುತ್ತಾರೆ. ನೆಹರು ಹಾಗೂ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಶ್ರೀರಾಮುಲು ಅವರಿಗೆ ಇಲ್ಲ ಎಂದು ಸಿದ್ದರಾಮಯ್ಯ ಹರಿಹಾಯ್ದರು.

ವಿಜಯನಗರ ಉಕ್ಕಿನ ಕಾರ್ಖನೆ ಸ್ಥಾಪಿಸಿದ್ದು ಕಾಂಗ್ರೆಸ್‌ ಕಾಲದಲ್ಲಿ. ಬಳ್ಳಾರಿಯನ್ನು ಅಭಿವೃದ್ಧಿ ಮಾಡಿದ್ದು ಸೋನಿಯಾ ಗಾಂಧಿ ಎಂಬುದನ್ನು ಶ್ರೀರಾಮುಲು ಮರೆಯಬಾರದು. ನಮ್ಮನ್ನು ಅಭಿವೃದ್ಧಿ ಕುರಿತ ಚರ್ಚೆಗೆ ಆಹ್ವಾನಿಸುವ ಮೊದಲು ಶ್ರೀರಾಮುಲು ಇತಿಹಾಸವನ್ನು ಅರಿಯಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಇನ್ನು ಭಾರತ್ ಜೋಡೋ ಯಾತ್ರೆಗೆ ಜನಸ್ಪಂದನೆ ನೋಡಿ ಬಿಜೆಪಿ ನಾಯಕರಿಗೆ ನಡುಕ ಶುರುವಾಗಿದ್ದು, ಅಧಿಕಾರ ಹೋಗುತ್ತದೆ ಎಂಬ ಆತಂಕದಲ್ಲಿ ನಿದ್ದೆಯೇ ಮಾಡುತ್ತಿಲ್ಲ. ಹಿಗಾಗಿಯೇ ಭಾರತ್‌ ಜೋಡೋ ಯಾತ್ರೆ ಬಗ್ಗೆ ಮತ್ತು ರಾಹುಲ್‌ ಗಾಂಧಿ ಅವರ ಬಗ್ಗೆ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ನಾವು 5 ವರ್ಷ ನುಡಿದಂತೆ ನಡೆದಿದ್ದೇವೆ. 2023ಕ್ಕೆ ರಾಜ್ಯದ ಜನ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲಿರುವುದು ಖಚಿತ ಎಂದು ಸಿದ್ದರಾಮಯ್ಯ ಇದೇ ವೇಳೆ ಭವಿಷ್ಯ ನುಡಿದರು.

ಭಾರತ್‌ ಜೋಡೋ ಯಾತ್ರೆ ಚುನಾವಣಾ ಉದ್ದೇಶಕ್ಕೆ ಕೈಗೊಂಡ ಪಾದಯಾತ್ರೆ ಅಲ್ಲ. ಇದೊಂದು ಐತಿಹಾಸಿಕ ಪಾದಯಾತ್ರೆ. ಐಕ್ಯತಾ ಯಾತ್ರೆ ಇದೀಗ 1,000 ಕಿ.ಮೀ. ಪೂರೈಸಿದೆ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಯಾತ್ರೆ ಕೈಗೊಳ್ಳಲಾಗಿದೆ. ದೇಶವನ್ನು ಧರ್ಮ, ಜಾತಿ ಹೆಸರಲ್ಲಿ ಒಡೆಯುತ್ತಿರುವ ಬಿಜೆಪಿ ವಿರುದ್ದ ಕಾಂಗ್ರೆಸ್‌ ಐತಿಹಾಸಿಕ ಹೋರಾಟವನ್ನು ಕೈಗೆತ್ತಿಕೊಂಡಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ದ್ವೇಷ, ಹಿಂಸೆಯ ರಾಜಕಾರಣದಿಂದ ದೇಶದ ಜನ ಆತಂಕದಲ್ಲಿದ್ದಾರೆ. ಸಂಘಪರಿವಾರ, ಹಿಂದೂ ಸಂಘಟನೆಗಳಿಂದ ಆತಂಕ ಸೃಷ್ಟಿಯಾಗುತ್ತಿದೆ. ಬಡವರು, ದಲಿತರು, ಹಿಂದುಳಿದವರು ಆತಂಕದಲ್ಲಿದ್ದಾರೆ. ದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಇದೇ ವೇಳೆ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.

ಆರ್​ಎಸ್​ಎಸ್ ಹಾಗೂ ಬಿಜೆಪಿ ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡುತ್ತಿದೆ. ರಾಹುಲ್‌ ಗಾಂಧಿ ಅವರ ಕುಟುಂಬ ಈ ದೇಶಕ್ಕಾಗಿ ಸಾಕಷ್ಟು ತ್ಯಾಗ ಬಲಿದಾನಗಳನ್ನು ಮಾಡಿದೆ. ಬಿಜೆಪಿಯ ಯಾವ ನಾಯಕರು ಈ ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದು ನಾನು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಕೇಳಲು ಬಯಸುತ್ತೇನೆ ಎಂದು ಸಿದ್ದರಾಮಯ್ಯ ಗುಡುಗಿದರು.

ಗಾಂಧಿಜೀ, ನೆಹರೂ ಆದಿಯಾಗಿ ಅನೇಕ ಕಾಂಗ್ರೆಸ್‌ ನಾಯಕರು ಈ ದೇಶಕ್ಕಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. 1925ರಲ್ಲಿ ಆರ್​ಎಸ್​ಎಸ್ ಸ್ಥಾಪನೆಯಾದ ದಿನದಿಂದ ಇದುವರೆಗೂ ಯಾರಾದರೂ ಒಬ್ಬರು ಹುತಾತ್ಮ ಆಗಿರುವ ಉದಾಹರಣೆ ಇದೆಯಾ? ಕಾಂಗ್ರೆಸ್ ತಂದುಕೊಟ್ಟ ಸ್ವಾತಂತ್ರ್ಯವನ್ನು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಅನಭವಿಸುತ್ತಿದೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ