ಕನ್ನಡ ಸುದ್ದಿ  /  ಕರ್ನಾಟಕ  /  Karnataka Next Cm: ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಏಕೈಕ ಡಿಸಿಎಂ; ಅಧಿಕೃತವಾಗಿ ಘೋಷಿಸಿದ ಕಾಂಗ್ರೆಸ್

Karnataka Next CM: ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಏಕೈಕ ಡಿಸಿಎಂ; ಅಧಿಕೃತವಾಗಿ ಘೋಷಿಸಿದ ಕಾಂಗ್ರೆಸ್

Meghana B HT Kannada

May 18, 2023 12:45 PM IST

ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಡಿಸಿಎಂ

    • Karnataka CM: ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ಅವರು ಒಬ್ಬರೇ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಿರ್ಧಾರವನ್ನು ಎಐಸಿಸಿ ತೆಗೆದುಕೊಂಡಿದೆ ಎಂದು ವೇಣುಗೋಪಾಲ್ ಹೇಳಿದರು.
ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಡಿಸಿಎಂ
ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಡಿಸಿಎಂ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಐದು ದಿನಗಳ ಬಳಿಕ ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ (Karnataka CM) ಆಯ್ಕೆ ವಿಚಾರ ಬಗೆಹರಿದಿದೆ. ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಡಿಕೆ ಶಿವಕುಮಾರ್ ಏಕೈಕ ಡಿಸಿಎಂ ಎಂಬುದನ್ನು ಕಾಂಗ್ರೆಸ್​ ಅಧಿಕೃತವಾಗಿ ಘೋಷಿಸಿದೆ.

ಟ್ರೆಂಡಿಂಗ್​ ಸುದ್ದಿ

Bangalore News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ: ಬೆಂಗಳೂರಿನ ಮಾಧ್ವ ರಾದ್ಧಾಂತ ಸಂವರ್ಧಕ ಸಭಾ ಅಧಿವೇಶನದಲ್ಲಿ ಸಲಹೆ

Bangalore News: ಪೂರ್ವ ಮುಂಗಾರು ಚುರುಕು; ಬೆಂಗಳೂರಿನಲ್ಲಿ ನೀರಿನ ಸ್ಥಿತಿ ಈಗ ಹೇಗಿದೆ?

Mysore News: ಮೈಸೂರಿನ ಫೋಟೋ, ವಿಡಿಯೋ ತೆಗೆದಿದ್ದೀರಾ, ಸ್ಪರ್ಧೆಗೆ ಕಳುಹಿಸಿ 25 ಸಾವಿರ ರೂ. ಬಹುಮಾನ ಗೆಲ್ಲಿ

ದಾಮೋದರಾಚಾರ್ಯ, ಮಧ್ವೇಶ, ಸತ್ಯಬೋಧಾಚಾರ್ಯರಿಗೆ ಭಂಡಾರಕೇರಿ ಮಠದ ಪ್ರಶಸ್ತಿ, ಬೆಂಗಳೂರಿನಲ್ಲಿ 20 ರಂದು ಪ್ರದಾನ

ಈ ಬಗ್ಗೆ ಸ್ಪಷ್ಟಪಡಿಸಲು ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಚೇರಿಯಲ್ಲಿ ಇಂದು (ಮೇ 18) ಮಹತ್ವದ ಸುದ್ದಿಗೋಷ್ಠಿಯನ್ನು ಕಾಂಗ್ರೆಸ್​ ನಡೆಸಿದೆ. ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಕರ್ನಾಟಕದಲ್ಲಿ ನಾವು ಜಯಗಳಿಸಿದ್ದೇವೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಪರಿಶ್ರಮ ಈ ಜಯದಲ್ಲಿದೆ. ಸೋನಿಯಾ ಗಾಂಧಿ ಅವರ ಮಾರ್ಗದರ್ಶನವು ನಮ್ಮ ಕಾರ್ಯಕರ್ತರಿಗೆ ಬಲತುಂಬಿತು ಎಂದು ಸ್ಮರಿಸಿದರು.

ಸಿದ್ದರಾಮಯ್ಯಗೆ ಸಿಎಂ, ಡಿಕೆ ಶಿವಕುಮಾರ್ ಒಬ್ಬರೇ ಡಿಸಿಎಂ

ಮುಂದಿನ ಲೋಕಸಭಾ ಚುನಾವಣೆ ಮುಗಿಯುವವರೆಗೂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ಅವರು ಒಬ್ಬರೇ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಿರ್ಧಾರವನ್ನು ಎಐಸಿಸಿ ತೆಗೆದುಕೊಂಡಿದೆ ಎಂದು ವೇಣುಗೋಪಾಲ್ ಹೇಳಿದರು.

ನಮ್ಮದು ಪ್ರಜಾಪ್ರಭುತ್ವ ಪದ್ಧತಿ ಅನುಸರಿಸುವ ಪಕ್ಷ. ಕರ್ನಾಟಕದಲ್ಲಿ ನಮ್ಮಲ್ಲಿ ಅತ್ಯುತ್ತಮ ನಾಯಕರಿದ್ದಾರೆ. ಒಮ್ಮತಕ್ಕೆ ಬರಲು ನಾವು ಎರಡು-ಮೂರು ದಿನ ಮಾತುಕತೆ ನಡೆಸಬೇಕಾಯಿತು. ಸಿದ್ದರಾಮಯ್ಯ ಅತ್ಯುತ್ತಮ ಆಡಳಿತಗಾರ. ಈ ಬಾರಿಯ ಚುನಾವಣೆಯಲ್ಲಿ ಅವರು ಸಾಕಷ್ಟು ಶ್ರಮಪಟ್ಟರು. ನಮ್ಮ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಅತ್ಯುತ್ತಮ ಸಂಘಟಕರು ಎಂದು ವೇಣುಗೋಪಾಲ್ ಹೇಳಿದರು.

ಮಲ್ಲಿಕಾರ್ಜುನ ಖರ್ಗೆಗೆ ಗೆಲುವಿನ ಶ್ರೇಯದಲ್ಲಿ ಪಾಲು

ಎಐಸಿಸಿ ಕರ್ನಾಟಕ ಉಸ್ತುವಾಗಿ ರಣದೀಪ್ ಸುರ್ಜೇವಾಲಾ ಮಾತನಾಡಿ, ಕಾಂಗ್ರೆಸ್‌ನ ಎಲ್ಲ ನಾಯಕರು ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಂದು ತಿಂಗಳು ಹಗಲಿರುಳು ಸಭೆಗಳನ್ನು ನಡೆಸಿ ಸಂಘಟನೆ ಮಾಡಿದ್ದಾರೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸಹ ಪಕ್ಷದ ಕಾರ್ಯಕರ್ತರಿಗೆ ಬಲ ತುಂಬಿದರು ಎಂದು ಹೇಳಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಇಬ್ಬರೂ ಅರ್ಹರು

ಸಿದ್ದರಾಮಯ್ಯ, ಡಿಕೆಶಿ ಇಬ್ಬರು ಮುಖ್ಯಮಂತ್ರಿಯಾಗಲು ಅರ್ಹರು. ಆದರೆ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕಿತ್ತು. ಆ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಈ ಇಬ್ಬರ ನೇತೃತ್ವದಲ್ಲಿ ಕಾಂಗ್ರೆಸ್‌ ಬ್ರ್ಯಾಂಡ್‌ ಕರ್ನಾಟಕ ನಿರ್ಮಾಣ ಮಾಡಲಿದೆ ಎಂದು ರಣದೀಪ್‌ ಸುರ್ಜೆವಾಲಾ ಹೇಳಿದ್ದಾರೆ.

ಅಧಿಕಾರ ಹಂಚಿಕೆ?

ಸುದ್ದಿಗೋಷ್ಠಿಯಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೆಸಿ ವೇಣುಗೋಪಾಲ್​, ಅಧಿಕಾರ ಹಂಚಿಕೆ ಸೂತ್ರವು ಕರ್ನಾಟಕದ ಜನತೆಗೆ ಅಧಿಕಾರವನ್ನು ಹಂಚುವುದಾಗಿದೆ ಎಂದು ಹೇಳಿದರು. ಆದರೆ, 30-30 ಅಧಿಕಾರ ಹಂಚಿಕೆ ಬಗ್ಗೆ ಅಧಿಕೃತವಾಗಿ ಹೇಳಿಲ್ಲ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ