logo
ಕನ್ನಡ ಸುದ್ದಿ  /  ಕರ್ನಾಟಕ  /  Siddeshwar Swamiji Death: ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು, ಡಿಕೆಶಿ ಸೇರಿ ಗಣ್ಯರ ಸಂತಾಪ

Siddeshwar Swamiji death: ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು, ಡಿಕೆಶಿ ಸೇರಿ ಗಣ್ಯರ ಸಂತಾಪ

HT Kannada Desk HT Kannada

Jan 03, 2023 11:30 AM IST

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಅವರ ಪುತ್ರ ಹೆಚ್ ಡಿ ಕುಮಾರಸ್ವಾಮಿ. ಸಿಎಂ ಇಬ್ರಾಹಿಂ ಇದ್ದಾರೆ.

  • ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹಾಗೂ ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಅವರ ಪುತ್ರ ಹೆಚ್ ಡಿ ಕುಮಾರಸ್ವಾಮಿ. ಸಿಎಂ ಇಬ್ರಾಹಿಂ ಇದ್ದಾರೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಅವರ ಪುತ್ರ ಹೆಚ್ ಡಿ ಕುಮಾರಸ್ವಾಮಿ. ಸಿಎಂ ಇಬ್ರಾಹಿಂ ಇದ್ದಾರೆ.

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರ ನಿಧನಕ್ಕೆ ರಾಜಕಾರಣಿಗಳು ಸೇರಿದಂತೆ ವಿವಿಧ ವಲಯದ ಗಣ್ಯರು ಹಾಗೂ ಅವರ ಅಪಾರ ಭಕ್ತ ಗಣ ಶೋಕ ಸಾಗರದಲ್ಲಿ ಮುಳುಗಿದೆ. ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹಾಗೂ ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ಶ್ರೀಗಳ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Bangalore News: ಬೆಂಗಳೂರಲ್ಲಿ ನಾಯಿಗಳಿಗೆ ಊಟ ಹಾಕಲು ಸಮಯ ನಿಗದಿಗೆ ಮುಂದಾದ ಪಾಲಿಕೆ, ಸಾರ್ವಜನಿಕರ ಆಕ್ರೋಶ

Bangalore Rain: ಬೆಂಗಳೂರಿಗೆ ತಂಪೆರದ ಮಳೆ; ರಾಜ್ಯದಲ್ಲಿ ಮತ್ತೆರಡು ದಿನ ಮಳೆ ಸಂಭವ, ಮಳೆಗೆ ಕುಣಿದು ಕುಪ್ಪಳಿಸಿದ ಮಕ್ಕಳು

Hassan Scandal: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ನಿಖರವಾದ ಸಾಕ್ಷಿಗಳಿದ್ದರೆ ಎಲ್ಲರನ್ನೂ ಬಂಧಿಸುತ್ತೇವೆ: ಡಾ.ಪರಮೇಶ್ವರ್‌

Forest Tales: ಅಜಯ್‌ ಮಿಶ್ರ ಎಂಬ ಅಧಿಕಾರಿ ರೂಪಿಸಿದ ಅಂಚೆಯೊಳಗಿನ ಅರಣ್ಯ ಲೋಕ, ನೋಡುವ ಆಸಕ್ತಿಯುಂಟೆ

ಮಾಜಿ ಪ್ರಧಾನಿ ಹೆಚ್ ಡಿ ದೇವೇಡರು, ದೇಶ ಕಂಡ ಶ್ರೇಷ್ಠ ಸಂತರು, ಆಧ್ಯಾತ್ಮಿಕ ಪ್ರವಚನಕಾರ,ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿರವರು ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖ ಉಂಟುಮಾಡಿದೆ. ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ,ಅವರ ಭಕ್ತ ಸಮೂಹಕ್ಕೆ ಈ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ನಡೆದಾಡುವ ದೇವರು, ಜ್ಞಾನ ಯೋಗಿ ಎಂದೇ ಖ್ಯಾತರಾಗಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಲಿಂಗೈಕ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ಬಹಳ ಬೇಸರವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುಣಮುಖರಾಗಲಿ ಎಂದು ನಾನು ಸೇರಿದಂತೆ ಅವರ ಭಕ್ತವೃಂದ ದೇವರಲ್ಲಿ ಪ್ರಾರ್ಥನೆ ಮಾಡಿತ್ತು.

ತಮ್ಮ ಪ್ರವಚನಗಳ ಮೂಲಕ ಅಸಂಖ್ಯ ಮಂದಿಯ ಮನಪರಿವರ್ತನೆ ಜತೆಗೆ ಸಮಾಜದ ಬದಲಾವಣೆಗೆ ಕಾರಣರಾಗಿದ್ದ ಸ್ವಾಮೀಜಿಗಳು ಮಹಾನ್ ಮಾನವತಾವಾದಿಗಳು. ಅವರ ಪ್ರವಚನಗಳಿಂದ ಅನೇಕರು ಪ್ರಭಾವಿತರಾಗಿ, ಸ್ಫೂರ್ತಿ ಪಡೆದು ಸಮಾಜಸೇವೆಯಲ್ಲಿ ತಮ್ಮನ್ನೂ ತೊಡಗಿಸಿಕೊಂಡಿದ್ದಾರೆ. ಅವರ ಪ್ರವಚನಗಳಿಂದ ಪ್ರಭಾವಿತನಾಗಿ ನಾನೂ ಸಹ ಅವರ ಭಕ್ತಗಣ ಸೇರಿದ್ದೆ.

ಬಹುಭಾಷೆ ಪ್ರವೀಣರಾಗಿದ್ದ ಶ್ರೀಗಳು ದೇಶ-ವಿದೇಶಗಳಲ್ಲೂ ಭಕ್ತಸಮೂಹ ಹೊಂದಿದ್ದಾರೆ. ಅವರು ಬಿಟ್ಟು ಹೋಗಿರುವ ಮೌಲ್ಯಗಳು ಈ ಸಮಾಜಕ್ಕೊಂದು ದಾರಿದೀಪ. ಸ್ವಾಮೀಜಿಗಳ ಅಗಲಿಕೆ ಇಡೀ ಮಾನವ ಕುಲಕ್ಕೇ ತುಂಬಲಾರದ ನಷ್ಟ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಅಸಂಖ್ಯ ಭಕ್ತರಿಗೆ ಭಗವಂತ ಕರುಣಿಸಲಿ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಂತಾಪ

ವಿಜಯಪುರದ ಜ್ಞಾನ ಯೋಗಾಶ್ರಮ ಪರಮಪೂಜ್ಯ ಶ್ರೀಗಳಾದ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ನಿಸ್ವಾರ್ಥ ಸೇವೆ, ಮಮಕಾರಗಳಿಲ್ಲದೆ, ಯಾರ ಹಂಗಿಗೂ ಒಳಗಾಗದೆ ಸರ್ವಜನರಿಂದಲೂ ಪ್ರೀತಿ, ವಿಶ್ವಾಸದ ಖನಿಜ ವಾಗಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ನಡೆದಾಡುವ ದೇವರೆಂದು ಪ್ರಖ್ಯಾತರಾಗಿದ್ದರು.

ಶ್ರೀಗಳು ತಮ್ಮ‌ ಅರ್ಥಗರ್ಭಿತವಾದ ಪುರಾಣ ಹಾಗೂ ಪ್ರವಚನಗಳ‌ ಮೂಲಕ, ಭಕ್ತಾದಿಗಳ ಮನದಲ್ಲಿ ಭಕ್ತಿಭಾವವನ್ನು ಮೂಡಿಸುತ್ತಾ ಸಾಂತ್ವನ‌ ನೀಡುತ್ತಿದ್ದರು. ಅವರ ಅಗಲಿಕೆಯಿಂದ ನಮ್ಮ ರಾಜ್ಯವು ಒಬ್ಬ ಆಧ್ಯಾತ್ಮಿಕ ಶಕ್ತಿಯೊಂದನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ‌ ಮತ್ತು ಭಕ್ತ ಸಮುದಾಯಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಜೆ ಶ್ರೀಗಳು ಅಂತ್ಯಕ್ರಿಯೆ

ಇಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಸಂಜೆ 4 ಗಂಟೆಗೆ ಸರ್ಕಾರದಿಂದ ಗೌರವ ವಂದನೆ ಸಲ್ಲಿಸಲಾಗುತ್ತದೆ. ಆ ನಂತರ ಪಾರ್ಥಿವ ಶರೀರವನ್ನು ಜ್ಞಾನಯೋಗಾಶ್ರಮಕ್ಕೆ ಕರೆತರಲಾಗುತ್ತದೆ. ಸಂಜೆ 5 ಗಂಟೆಗೆ ಆಶ್ರಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಈ ಸುದ್ದಿಯ ಮುಂದುವರಿ ಭಾಗ ಓದಲು ಇಲ್ಲಿ ಕ್ಲಿಕ್ ಮಾಡಿ.

    ಹಂಚಿಕೊಳ್ಳಲು ಲೇಖನಗಳು