logo
ಕನ್ನಡ ಸುದ್ದಿ  /  ಕರ್ನಾಟಕ  /  Siddu Nija Kanasugalu: ಇಂದು ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಯಾಗುತ್ತ? ಸಿದ್ದರಾಮಯ್ಯ ಗರಂ, ಕಾಂಗ್ರೆಸ್‌ ದೂರು, ಪ್ರತಿಭಟನೆ

Siddu Nija Kanasugalu: ಇಂದು ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಯಾಗುತ್ತ? ಸಿದ್ದರಾಮಯ್ಯ ಗರಂ, ಕಾಂಗ್ರೆಸ್‌ ದೂರು, ಪ್ರತಿಭಟನೆ

HT Kannada Desk HT Kannada

Jan 09, 2023 12:35 PM IST

google News

Siddu Nija Kanasugalu: ಇಂದು ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಯಾಗುತ್ತ?

    • Siddu Nija Kanasugalu: ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ಸಿದ್ದು ನಿಜ ಕನಸುಗಳು ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಉನ್ನತ ಶಿಕ್ಷಣ, ಐಟಿ ಬಿಟಿ ವಿಜ್ಞಾನ, ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಸಿಎನ್‌ ಅಶ್ವತ್ಥ ನಾರಾಯಣ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪುಸ್ತಕ ಬಿಡುಗಡೆ ಮಾಡಲಿದ್ದಾರೆ. 
Siddu Nija Kanasugalu: ಇಂದು ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಯಾಗುತ್ತ?
Siddu Nija Kanasugalu: ಇಂದು ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಯಾಗುತ್ತ?

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವುದರಿಂದ ರಾಜ್ಯ ರಾಜಕೀಯ ದಿನಕ್ಕೊಂದು ರಂಗು ಪಡೆದುಕೊಳ್ಳುತ್ತಿದೆ. ರಾಜಕೀಯ ಎದುರಾಳಿಗಳ ವಿರುದ್ಧ ವೈವಿಧ್ಯಮಯವಾದ ರಾಜಕೀಯ ಮೇಲಾಟಗಳಿಗೆ ಈ ವರ್ಷ ಸಾಕ್ಷಿಯಾಗುವ ಸಾಧ್ಯತೆಯಿದ್ದು, ಸದ್ಯ "ಸಿದ್ದು ನಿಜ ಕನಸುಗಳುʼʼ ಎಂಬ ಪುಸ್ತಕ ಬಿಡುಗಡೆ ವಿವಾದದ ಕಿಡಿ ಹೊತ್ತಿಸಿದೆ. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಆಪ್ತರು ಸಿದ್ದರಾಮಯ್ಯನವರ ನಿಜ ಸಾಧನೆಗಳನ್ನು ಬಿಂಬಿಸುವ ಚಿತ್ರ ಸಂಪುಟ ಬಿಡುಗಡೆ ಮಾಡಿದ್ದಾರೆ.

ಈಗಾಗಲೇ ಕಾಂಗ್ರೆಸ್‌ ಪಕ್ಷವು ಪುಸ್ತಕ ಬಿಡುಗಡೆ ವಿರುದ್ಧ ಎಸ್‌ಜೆ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದೆ. ಇದೇ ಸಂದರ್ಭದಲ್ಲಿ ಪುಸ್ತಕ ಬಿಡುಗಡೆ ಮಾಡಿದರೆ ಮಾನನಷ್ಟ ಮೊಕದ್ದಮ್ಮೆ ಹೂಡುತ್ತೇನೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಪೊಲೀಸರು ತಡೆಯುವರೇ? ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಿಲ್ಲುವುದೇ? ಎಂಬ ಪ್ರಶ್ನೆಯೂ ಎದ್ದಿದೆ. ಇಂದು ಅಪರಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಪೂರ್ವ ನಿಗದಿಯಂತೆ ನಡೆಸಲು ಉದ್ದೇಶಿಸಿದ್ದೇವೆ ಎಂದು ಮೂಲಗಳು ಎಚ್‌ಟಿ ಕನ್ನಡಕ್ಕೆ ತಿಳಿಸಿವೆ.

ಪುರಭವನದಲ್ಲಿಂದು ಪುಸ್ತಕ ಬಿಡುಗಡೆ

ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ಸಿದ್ದು ನಿಜ ಕನಸುಗಳು ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಉನ್ನತ ಶಿಕ್ಷಣ, ಐಟಿ ಬಿಟಿ ವಿಜ್ಞಾನ, ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಸಿಎನ್‌ ಅಶ್ವತ್ಥ ನಾರಾಯಣ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನಪರಿಷತ್‌ ಸದಸ್ಯ, ರಾಜ್ಯ ಬಿಜೆಪಿ ಪಕ್ಷದ ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ ಮುಖ್ಯ ಅತಿಥಿಯಾಗಿರಲಿದ್ದಾರೆ. ರೋಹಿತ್‌ ಚಕ್ರತೀರ್ಥ, ಸಂತೋಷ್‌ ತಮ್ಮಯ್ಯ, ವೃಷಾಂಕ್‌ ಭಟ್‌, ರಾಕೇಶ್‌ ಶೆಟ್ಟಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಮಂತ್ರಣ ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ.

ಪುಸ್ತಕ ಬಿಡುಗಡೆ ಮಾಡಿದರೆ ಮಾನನಷ್ಟ ಮೊಕದ್ದಮೆ

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ತನ್ನ ಬಗ್ಗೆ ಬರೆದ ಪುಸ್ತಕದ ಕುರಿತು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಈ ಪುಸ್ತಕ ಬಿಡುಗಡೆ ಮಾಡಿದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಪುಸ್ತಕ ನನ್ನನ್ನು ಕೆಟ್ಟದಾಗಿ ಬಿಂಬಿಸಲು ಬಿಜೆಪಿಯವರು ಮಾಡಿರುವ ಪ್ಲ್ಯಾನ್‌ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಖಡ್ಗ ಹಿಡಿದುಕೊಂಡು ಡ್ರೆಸ್ ಹಾಕಿದ್ದವರು ಯಾರು? ನನ್ನ ತೇಜೋವಧೆ ಮಾಡಲು ಹೀಗೆಲ್ಲಾ ಮಾಡುತ್ತಿದ್ದಾರೆ. ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಪುಸ್ತಕಬಿಡುಗಡೆ ಕಾರ್ಯಕ್ರಮ ನಡೆಯುವ ಪುರಭವನದ ಮುಂದೆ ಪ್ರತಿಭಟನೆ ನಡೆಸಲು ಸಿದ್ದರಾಮಯ್ಯ ಬೆಂಬಲಿಗರು ಸಿದ್ಧತೆ ನಡೆಸಿದ್ದಾರೆ.

ಕಾಂಗ್ರೆಸ್‌ ದೂರು

ಈಗಾಗಲೇ ಈ ಪುಸ್ತಕ ಬಿಡುಗಡೆಯ ವಿರುದ್ಧ ಕಾಂಗ್ರೆಸ್‌ ಪಕ್ಷವು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದೆ. ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಗೆ ಕಾಂಗ್ರೆಸ್‌ ದೂರು ನೀಡಿದೆ. "

ಸಿದ್ದು ನಿಜ ಕನಸುಗಳು' ಎಂಬ ಶೀರ್ಷಿಕೆಯಡಿ ಬಿಜೆಪಿ ಇಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದು ಇದನ್ನು ತಡೆಯುವಂತೆ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಗೆ ಕಾಂಗ್ರೆಸ್‌ ದೂರು ನೀಡಿದೆ. "ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ ಹಿಂದೆ ದುರುದ್ದೇಶವಿದೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಕಾರ್ಯಕ್ರಮವನ್ನು ರದ್ದು ಮಾಡಲು ಆಯೋಜಕರಿಗೆ ಸೂಚನೆ ನೀಡಬೇಕು. ಪುಸ್ತಕ ಬಿಡುಗಡೆಗೆ ಅನುಮತಿ ನೀಡಿದ್ದರೆ ಅದನ್ನು ರದ್ದು ಮಾಡಿʼʼಎಂದು ದೂರಿನಲ್ಲಿ ತಿಳಿಸಲಾಗಿದೆ. ಕೆಪಿಸಿಸಿ ವಕ್ತಾರ ಹಾಗೂ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಶ್ವತ್ಥ್ ನಾರಾಯಣ ಶ್ಲಾಘನೆ

ಪುಸ್ತಕ ಬಿಡುಗಡೆಯನ್ನು ಡಾ. ಸಿಎನ್‌ ಅಶ್ವತ್ಥ ನಾರಾಯಣ ನೆರವೇರಿಸಲಿದ್ದಾರೆ. ಈಗಾಗಲೇ ಡಾ. ಸಿಎನ್‌ ಅಶ್ವತ್ಥ ನಾರಾಯಣ ಪುಸ್ತಕದ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಈಗಾಗಲೇ ಇವರು "ಸಿದ್ದು ನಿಜ ಕನಸುಗಳು" ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನʼʼ ಎಂದು ಟ್ವೀಟ್‌ ಮಾಡಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ