Karnataka Rains: ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆ, ಬೆಂಗಳೂರು ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳ ಇಂದಿನ ಹವಾಮಾನ ವರದಿ
Aug 16, 2023 05:27 AM IST
ಬೆಂಗಳೂರಿನ ಕೆಲವು ಕಡೆ ಸಾಧಾರಣ ಮಳೆಯಾಗಲಿದೆ ( ಸಾಂದರ್ಭಿಕ ಚಿತ್ರ)
- South karnataka Weather Update: ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಇಂದು ಸಾಧಾರಣ, ಹಗುರ ಮಳೆಯಾಗಲಿದೆ. ಕೆಲವು ಕಡೆ ಇಂದು ಒಣಹವೆ, ಬಿಸಿಲು ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಹವಾಮಾನ ವರದಿ ಇಲ್ಲಿದೆ ಓದಿ.
ಬೆಂಗಳೂರು: ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮಳೆರಾಯ ರಜೆ ಹಾಕಿದಂತೆ ಇದೆ. ಆಕಾಶದಲ್ಲಿ ಮೋಡಗಳು ಚದುರಿದ್ದು, ಕೆಲವು ಕಡೆ ಬಿಸಿಲಿನ ತಾಪವೂ ಹೆಚ್ಚಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆ ಇಂದು ಹಗುರ ಮಳೆಯ ಸೂಚನೆಯಿದೆ. ಒಂದೆರಡು ಕಡೆ ಮಾತ್ರ ಗುಡುಗು ಮಿಂಚು ಸಹಿತ ಹಗುರ/ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬಿಸಿಲು, ಒಣಹವೆ ಇರಲಿದೆ. ಬಳ್ಳಾರಿ, ಬೆಂಗಳೂರು, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೋಲಾರ ಜಿಲ್ಲೆಗಳ ಹವಾಮಾನ ವರದಿಯನ್ನು ಬೆಂಗಳೂರಿನ ಐಎಂಡಿ ಕಚೇರಿಯು ನೀಡಿದೆ.
ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆ
ಇಂದು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗಲಿದೆ. ಅಂದರೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಬುಧವಾರ ಒಣಹವೆ ಇರಲಿದೆ. ವಿಜುನಗರದಲ್ಲಿಯೂ ಒಣಹವೆ ಇರಲಿದೆ. ಆದರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಕೇಂದ್ರ ನೀಡಿದೆ.
ಇದೇ ರೀತಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಮಿಂಚು ಸಹಿತ ಹಗುರ/ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗದ ಕೆಲವೆಡೆ ಹಗುರ ಮಳೆಯಾಗಲಿದೆ. ದಾವಣಗೆರೆಯ ಕೆಲವು ಭಾಗಗಳಲ್ಲಿಯೂ ಹಗುರ ಮಳೆಯಾಗುವ ಸೂಚನೆಯಿದೆ. ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ/ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಬುಧವಾರ ಹಗುರ ಮಳೆಯಾಗಲಿದೆ. ಶಿವಮೊಗ್ಗದಲ್ಲಿ ಹಗುರ/ಸಾಧಾರಣ ಮಳೆಯಾಗಲಿದೆ.
ಗುರುವಾರದ ಹವಾಮಾನ ವರದಿ
ದಕ್ಷಿಣ ಒಳನಾಡಿನಲ್ಲಿ ಗುರುವಾರ (ಆಗಸ್ಟ್ 17) ವೂ ಹಗುರ/ಸಾಧಾರಣ ಮಳೆ ಬರಲಿದೆ. ಕೆಲವು ಕಡೆ ಒಣಹವೆ ಮುಂದುವರೆಯಲಿದೆ. ಗುರುವಾರ ವಿಜಯನಗರದ ಕೆಲವು ಕಡೆ ಒಣ ಹವೆ ಇರಲಿದೆ. ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಹಗುರ ಅಥವಾ ಸಾಧಾರಣ ಮಳೆ ಇರಲಿದೆ. ಬಳ್ಳಾರಿ, ಬೆಂಗಳೂರು, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಕೋಲಾರಗಳ ಕೆಲವು ಕಡೆ ಹಗುರ ಮಳೆ/ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.