logo
ಕನ್ನಡ ಸುದ್ದಿ  /  ಕರ್ನಾಟಕ  /  Belagavi Kannada Flag News: ಕನ್ನಡ ಧ್ವಜ ಹಾರಿಸಿದ್ದಕ್ಕೆ ವಿದ್ಯಾರ್ಥಿಗೆ ಥಳಿತ: ಅಷ್ಟಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ವಿಡಿಯೋ

Belagavi Kannada flag News: ಕನ್ನಡ ಧ್ವಜ ಹಾರಿಸಿದ್ದಕ್ಕೆ ವಿದ್ಯಾರ್ಥಿಗೆ ಥಳಿತ: ಅಷ್ಟಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ವಿಡಿಯೋ

HT Kannada Desk HT Kannada

Dec 01, 2022 02:52 PM IST

ಕನ್ನಡ ಧ್ವಜ ಹಾರಿಸಿದ್ದಕ್ಕೆ ವಿದ್ಯಾರ್ಥಿಗೆ ಥಳಿತ

    • ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ವಿಚಾರಣೆ ಹಂತದಲ್ಲಿರುವ ಈ ವೇಳೆ ಬೆಳಗಾವಿಯಲ್ಲಿ ನಡೆದ ಘಟನೆಯೊಂದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಬಾವುಟ ಹಿಡಿದು ಕುಣಿದ ವಿದ್ಯಾರ್ಥಿಗೆ ಕೆಲ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ಥಳಿಸಿದ್ದಾರೆ.
ಕನ್ನಡ ಧ್ವಜ ಹಾರಿಸಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಕನ್ನಡ ಧ್ವಜ ಹಾರಿಸಿದ್ದಕ್ಕೆ ವಿದ್ಯಾರ್ಥಿಗೆ ಥಳಿತ

ಬೆಳಗಾವಿ: ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ವಿಚಾರಣೆ ಹಂತದಲ್ಲಿರುವ ಈ ವೇಳೆ ಬೆಳಗಾವಿಯಲ್ಲಿ ನಡೆದ ಘಟನೆಯೊಂದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಬಾವುಟ ಹಿಡಿದು ಕುಣಿದ ವಿದ್ಯಾರ್ಥಿಗೆ ಕೆಲ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ಥಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Hassan Sex Scandal; ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್‌ ಲೈಂಗಿಕ ದೌರ್ಜನ್ಯ ಕೇಸ್‌ ಏನಾಯಿತು, ಇದುವರೆಗಿನ 10 ಪ್ರಮುಖ ಅಂಶಗಳು

ನೂರಾರು ವಿದ್ಯಾರ್ಥಿಗಳ ನೆನಪಿನಂಗಳದಲ್ಲಿ ಉಳಿದಿರುವ ಗುರುಮಾತೆ; ದಿವಂಗತ ವಿದ್ಯಾ ಸರಸ್ವತಿ ಚೂಂತಾರು - ವ್ಯಕ್ತಿ ವ್ಯಕ್ತಿತ್ವ ಅಂಕಣ

Hassan Scandal: ವಾಟ್ಸ್‌ ಆಪ್‌ ಮೂಲಕವೂ ವಿಡಿಯೋ ಹಂಚಿದರೆ ಕ್ರಮ, ಎಸ್‌ಐಟಿ ಎಚ್ಚರಿಕೆ

ಸೋಮವಾರ ರಾತ್ರಿಯಿಂದ 108 ಆಂಬುಲೆನ್ಸ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಆರೋಗ್ಯ ಸೇವೆಯಲ್ಲಿ ವ್ಯತ್ಯಯ; ಅವರ ಬೇಡಿಕೆಗಳೇನು?

ಘಟನೆ ವಿವರ

ಬೆಳಗಾವಿಯ ಟಿಳಕವಾಡಿಯಲ್ಲಿನ ಗೋಗಟೆ ಕಾಲೇಜಿನಲ್ಲಿ ಈ ಘಟನೆ ನಿನ್ನೆ (ಬುಧವಾರ) ನಡೆದಿದೆ. ಅಂತರ-ಕಾಲೇಜು ಉತ್ಸವ ಕಾರ್ಯಕ್ರಮದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕನ್ನಡ ಹಾಡೊಂದು ಪ್ಲೇ ಆಗುತ್ತಿದ್ದಂತೆಯೇ ಕನ್ನಡ ಧ್ವಜ ಹಿಡಿದು ವಿದ್ಯಾರ್ಥಿಯೊಬ್ಬ ಡ್ಯಾನ್ಸ್ ಮಾಡಿದ್ದಾನೆ. ಆದರೆ ಅಲ್ಲಿದ್ದ ಕೆಲ ವಿದ್ಯಾರ್ಥಿಗಳು ಆ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಕಾಲೇಜು ಸಿಬ್ಬಂದಿ ಮಧ್ಯಪ್ರವೇಶಿಸಿ ಗಲಾಟೆ ತಡೆದಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆ ನಡೆಸಿದ ವಿದ್ಯಾರ್ಥಿಗಳು ಅಪ್ರಾಪ್ತ ವಯಸ್ಸಿನವರಾದ ಕಾರಣ ಅವರ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ.

ಹಲ್ಲೆ ನಡೆಸಿದ ವಿದ್ಯಾರ್ಥಿಗಳು ಮಹಾರಾಷ್ಟ್ರ ಪರ ಎಂದು ಹೇಳಲಾಗಿದೆ. ಅಷ್ಟೇ ಅಲ್ಲದೇ, ಈ ಬಗ್ಗೆ ದೂರು ನೀಡದಲು ಥಳಿತಕ್ಕೊಳಗಾದ ವಿದ್ಯಾರ್ಥಿ ಪೊಲೀಸ್​ ಠಾಣೆಗೆ ಹೋದರೆ ಅಲ್ಲಿ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ರತಿಭಟನೆ - ಕಾಲೇಜಿಗೆ ಮುತ್ತಿಗೆ

ಬೆಳಗಾವಿಯಲ್ಲಿ ನಡೆದ ಈ ಘಟನೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು ಬೆಳಗಾವಿ-ಗೋವಾ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಮಹಾರಾಷ್ಟ್ರ ವಿರುದ್ಧ ಘೋಷಣೆ ಕೂಗಿದ್ದಾರೆ. ಹಲ್ಲೆ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಕನ್ನಡ ಪರ ಸಂಘಟನೆಗಳು ಕಾಲೇಜಿಗೆ ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆ ಕಾಲೇಜಿನ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ಹಂತಕ್ಕೆ ಬಂದು ನಿಂತಿದೆ. ಗಡಿ ವಿಚಾರವಾಗಿ ಬಸ್​ಗಳ ಮೇಲೆ ಕಲ್ಲುತೂರಾಟ, ಮಸಿ ಬಳಿಯುವ ಘಟನೆಗಳು ನಡೆಯುತ್ತಿವೆ. ಇದರ ನಡುವೆ ಮಹಾರಾಷ್ಟ್ರ ನಾಯಕರ ಹೇಳಿಕೆಗಳು ಪರಿಸ್ಥಿತಿ ಮತ್ತಷ್ಟು ಉದ್ವಿಗ್ನವಾಗಲು ಕಾರಣವಾಗುತ್ತಿದೆ. ರಾಜಕೀಯ ನಾಯಕರ ನಡುವೆ ಇದ್ದ ವಾಕ್ಸಮರ ಇದೀಗ ವಿದ್ಯಾರ್ಥಿಗಳ ನಡುವೆ ಜಗಳದ ಮಟ್ಟಕ್ಕೆ ಬಂದು ನಿಂತಿದೆಯೇ ಎಂಬ ಆತಂಕಕ್ಕೆ ಕಾರಣವಾಗಿದೆ.

    ಹಂಚಿಕೊಳ್ಳಲು ಲೇಖನಗಳು