logo
ಕನ್ನಡ ಸುದ್ದಿ  /  ಕರ್ನಾಟಕ  /  Hd Deve Gowda: ಎಲ್ಲಾ ರಾಜ್ಯಗಳಲ್ಲೂ ಜೆಡಿಎಸ್ ಶಾಸಕರು ಇರಬೇಕು - ಹೆಚ್.ಡಿ.ದೇವೇಗೌಡ

HD Deve Gowda: ಎಲ್ಲಾ ರಾಜ್ಯಗಳಲ್ಲೂ ಜೆಡಿಎಸ್ ಶಾಸಕರು ಇರಬೇಕು - ಹೆಚ್.ಡಿ.ದೇವೇಗೌಡ

HT Kannada Desk HT Kannada

Oct 28, 2022 10:20 PM IST

ಹೆಚ್.ಡಿ.ದೇವೇಗೌಡ

    • ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ನಮ್ಮ ಕಾರ್ಯಕರ್ತರು ಇದ್ದಾರೆ. ಪ್ರತಿ ರಾಜ್ಯದಲ್ಲಿಯೂ ನಮ್ಮ ಪಕ್ಷದ ಶಾಸಕರು ಇರಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದರು.
ಹೆಚ್.ಡಿ.ದೇವೇಗೌಡ
ಹೆಚ್.ಡಿ.ದೇವೇಗೌಡ

ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ನಮ್ಮ ಕಾರ್ಯಕರ್ತರು ಇದ್ದಾರೆ. ಪ್ರತಿ ರಾಜ್ಯದಲ್ಲಿಯೂ ನಮ್ಮ ಪಕ್ಷದ ಶಾಸಕರು ಇರಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದರು. ಕರ್ನಾಟಕದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೆ ಬರುತ್ತದೆ. ಇದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದು ಅವರು ಅಚಲ ವಿಶ್ವಾಸ ವ್ಯಕ್ತಪಡಿಸಿದರು.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಸುತ್ತ ಮುತ್ತ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಅತ್ತ ಕರಾವಳಿ, ಉತ್ತರ ಕರ್ನಾಟಕದಲ್ಲಿ ಮತ್ತಷ್ಟು ಬಿಸಿಯ ಎಚ್ಚರಿಕೆ

SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಯಾವಾಗ? ಫಲಿತಾಂಶ ನೋಡುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ

Mangalore News: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಏರ್ಪೋರ್ಟ್‌ಗೆ ಬಿಗಿ ಭದ್ರತೆ, ವಾರದ ಹಿಂದಿನ ಪ್ರಕರಣ ತಡವಾಗಿ ಬೆಳಕಿಗೆ

ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಕರ್ನಾಟಕದಲ್ಲಿ 3.25 ಕೋಟಿ, ಬೆಂಗಳೂರಲ್ಲಿ 2.68 ಕೋಟಿ, ದಂಡ ವಸೂಲಿಗೆ ಬಾಕಿ

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪಕ್ಷದ ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನನ್ನು ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆ ಮಾಡಿದ್ದಕ್ಕೆ ಕಾರ್ಯಕಾರಿಣಿ ಸಮಿತಿಗೆ ಧನ್ಯವಾದ ಹೇಳಿದರು.

ನಿನ್ನೆ ರಾಷ್ಟ್ರೀಯ ಕಾರ್ಯಕಾರಿಣಿ ನಡೆದಿದೆ. ಇಂದು ಮಹಾ ಅಧಿವೇಶನದಲ್ಲಿ 3 ನಿರ್ಣಯ ಅಂಗೀಕಾರವಾಗಿದೆ. ಕಾರ್ಯಕ್ರಮಕ್ಕೆ ಬಂದಿರುವ ಕೇರಳ ಮಂತ್ರಿಗಳಿಗೂ ಧನ್ಯವಾದ ತಿಳಿಸುವುದಾಗಿ ಮಾಜಿ ಪ್ರಧಾನ ಮಂತ್ರಿಗಳು ಹೇಳಿದರು.

ಇದೊಂದು ಅತ್ಯುತ್ತಮ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ. ಲಕ್ಷಾಂತರ ಕಾರ್ಯಕರ್ತರು ಈ ಪಕ್ಷದ ಬೆನ್ನೆಲುಬು ಆಗಿದ್ದಾರೆ. ಕಾಂಗ್ರೆಸ್-ಬಿಜೆಪಿ ಬಗ್ಗೆ ಚರ್ಚೆ ಬೇಡ. ನಮ್ಮ ಕೆಲಸ ನಾವು ಪ್ರಾಮಾಣಿಕವಾಗಿ ಮಾಡಬೇಕು. ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಜನತಾ ಜಲಧಾರೆ ಮಾಡಿದ್ದರು. ಇವೆಲ್ಲವೂ ಜನರ ಅಭಿವೃದ್ಧಿ ಕಾರ್ಯಕ್ರಮಗಳು ಎಂದರು.

ನಾವೆಲ್ಲರೂ ಪಕ್ಷ ಕಟ್ಟುವ ಕೆಲಸ ಮಾಡೋಣ. ಕಾಂಗ್ರೆಸ್ ಮತ್ತು ಬಿಜೆಪಿ ಬಗ್ಗೆ ಮಾತನಾಡುವುದು ಬೇಡ. ಪ್ರತಿ ರಾಜ್ಯದ ಒಂದು ಕ್ಷೇತ್ರದಲ್ಲಾದರೂ ಒಬ್ಬರಾದರೂ ನಮ್ಮ ಶಾಸಕರು ಇರಬೇಕು. ಈ‌ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು. ನಮ್ಮ ಕೆಲಸ ನಾವು ಪ್ರಮಾಣಿಕವಾಗಿ ಮಾಡಬೇಕು. ಕುಮಾರಸ್ವಾಮಿ ಅವರು ಪಂಚರತ್ನ ಕಾರ್ಯಕ್ರಮ ರಥಯಾತ್ರೆ ಮಾಡುತ್ತಿದ್ದಾರೆ. ಜನತಾ ಜಲಧಾರೆ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ಮಾಡಿದರು. ಈಗ ರಾಜ್ಯದ ಉದ್ದಗಲಕ್ಕೂ ಪಂಚರತ್ನ ರಥಯಾತ್ರೆ ಹೊರಟಿದ್ದಾರೆ. ಅವರಿಗೆ ಶಕ್ತಿ ತುಂಬುವ ಕೆಲಸ ಮಾಡೋಣ ಎಂದು ಮಾಜಿ ಪ್ರಧಾನ ಮಂತ್ರಿಗಳು ಕರೆ ನೀಡಿದರು.

ಕೇರಳದ ಇಂಧನ ಸಚಿವ ಕೃಷ್ಣನ್‌ ಕುಟ್ಟಿ, ಕೇರಳ ಶಾಸಕ ಮ್ಯೂಥ್ಯೂ ಟಿ.ಥಾಮಸ್‌, ಶಾಸಕರು ಹಾಗೂ ಅಧ್ಯಕ್ಷರು, ಕೇರಳ ಜೆಡಿಎಸ್‌ ಘಟಕದ ಅಧ್ಯಕ್ಷ ನಾಡಾರ್‌, ಕೇರಳದ ಮಾಜಿ ಶಾಸಕ ನಾನಾ, ತಮಿಳುನಾಡು ಘಟಕದ ಅಧ್ಯಕ್ಷ ಪೊನ್ನುಸ್ವಾಮಿ, ಪಶ್ಚಿಮ ಬಂಗಾಳ ಜೆಡಿಎಸ್‌ ಘಟಕದ ಅಧ್ಯಕ್ಷ ಪುನೀತ್‌ ಕುಮಾರ್‌ ಸಿಂಗ್‌, ರಾಜ್ಯದ ಅಧ್ಯಕ್ಷ ಸಿಎಂ ಇಬ್ರಾಹಿಂ, ಗುಜರಾತ್ ಘಟಕದ ಅಧ್ಯಕ್ಷ ಜ್ಞಾನಭಾಯ್‌ ಶಾ ಸೇರಿದಂತೆ ಉತ್ತರ ಪ್ರದೇಶ, ಬಿಹಾರ ಸೇರಿ ವಿವಿಧ ರಾಜ್ಯಗಳ ಘಟಕ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು