Karnataka News Live December 17, 2024 : ರಾಯಚೂರು ಸಿಂಧನೂರು ಪಟ್ಟಣದಲ್ಲಿ ರಸ್ತೆ ಬದಿ ನಿಂತವರ ಮೇಲೆ ಲಾರಿ ಪಲ್ಟಿ; ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Dec 17, 2024 11:51 AM IST
ಎಚ್‌ಟಿ ಕನ್ನಡ ಲೈವ್ ಅಪ್‌ಡೇಟ್ಸ್‌ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.
Sindhanur Accident: ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದಲ್ಲಿ ರಸ್ತೆ ಬದಿ ನಿಂತವರ ಮೇಲೆ ಲಾರಿ ಪಲ್ಟಿಯಾಗಿದೆ. ಈ ದುರಂತದಲ್ಲಿ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣಕ್ಕೀಡಾದರು.
Bengaluru Crime: ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಮನೆಯಲ್ಲಿ 50 ಲಕ್ಷ ರೂ ಚಿನ್ನಾಭರಣ ಕಳುವಾಗಿದೆ. ಪ್ರತ್ಯೇಕ ಪ್ರಕರಣದಲ್ಲಿ ಮೊಬೈಲ್ ಅಂಗಡಿಯಿಂದ 3 ಲಕ್ಷ ರೂ ಮೌಲ್ಯದ ಮೊಬೈಲ್ ಅನ್ನು ಖದೀಮರು ದೋಚಿದ್ದಾರೆ. ಇನ್ನೊಂದೆಡೆ, ಮದ್ಯಪಾನ ಮಾಡಿ ವಾಹನ ಚಾಲನೆಯ 556 ಕೇಸ್ ದಾಖಲಾಗಿದೆ. (ವರದಿ- ಎಚ್.ಮಾರುತಿ, ಬೆಂಗಳೂರು)
Bengaluru Techie Suicide: ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಆರೋಪಿಗಳ ಪೈಕಿ ಸುಶಿಲ್ ಸಿಂಘಾನಿಯಾಗೆ ಜಾಮೀನು ಸಿಕ್ಕಿದೆ. ಉಳಿದ ಮೂವರು ಜೈಲಲ್ಲಿದ್ದಾರೆ. ಅತುಲ್ ಪತ್ನಿ ನಿಕಿತಾ ಸಿಂಘಾನಿಯಾ ಪೊಲೀಸ್ ಬಲೆಗೆ ಬೀಳಲು ಕಾರಣವಾದ ವಿಚಾರ ಮತ್ತು ಇತರೆ ಪ್ರಮುಖ ವಿವರ ಇಲ್ಲಿದೆ.
Weather Forecast: ಬೆಂಗಳೂರು ಹವಾಮಾನ ಪ್ರಕಾರ ಇಂದು ಬೆಂಗಳೂರು ನಗರ ಮತ್ತು ಸುತ್ತಮುತ್ತ ಜಿಲ್ಲೆಗಳಲ್ಲಿ ಇಂದು (ಡಿಸೆಂಬರ್ 17) ಮುಂಜಾನೆ ಮಂಜು, ಚಳಿ ಕಾಡಲಿದೆ. ತಣ್ಣನೆಯ ರಾತ್ರಿಯೂ ಅನುಭವಕ್ಕೆ ಬರಲಿದೆ. ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ವಿಪರೀತ ಶೀತ ಗಾಳಿ ಕಾರಣ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರ್ನಾಟಕ ಹವಾಮಾನ ವಿವರ ಇಲ್ಲಿದೆ.