logo
ಕನ್ನಡ ಸುದ್ದಿ  /  ಕರ್ನಾಟಕ  /  ತುಮಕೂರು: 300 ವಿದ್ಯಾರ್ಥಿನಿಯರಿದ್ದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಅಗ್ನಿದುರಂತ, ಶಾರ್ಟ್‌ ಸರ್ಕ್ಯೂಟ್‌ ಕಾರಣ

ತುಮಕೂರು: 300 ವಿದ್ಯಾರ್ಥಿನಿಯರಿದ್ದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಅಗ್ನಿದುರಂತ, ಶಾರ್ಟ್‌ ಸರ್ಕ್ಯೂಟ್‌ ಕಾರಣ

Umesh Kumar S HT Kannada

Jun 08, 2024 07:01 AM IST

google News

ತುಮಕೂರು: 300 ವಿದ್ಯಾರ್ಥಿನಿಯರಿದ್ದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ನಿನ್ನೆ ರಾತ್ರಿ ಅಗ್ನಿದುರಂತ ಸಂಭವಿಸಿದೆ. ಬಿಎಚ್ ರಸ್ತೆಯ ಈ ಹಾಸ್ಟೆಲ್‌ನ ಅಗ್ನಿದುರಂತಕ್ಕೆ ಶಾರ್ಟ್‌ ಸರ್ಕ್ಯೂಟ್‌ ಕಾರಣ ಎನ್ನಲಾಗಿದೆ.

  • ತುಮಕೂರು ಬಿಎಚ್‌ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ನಿನ್ನೆ (ಜೂನ್ 7) ರಾತ್ರಿ ಅಗ್ನಿದುರಂತ ಸಂಭವಿಸಿದೆ. 300 ವಿದ್ಯಾರ್ಥಿನಿಯರಿದ್ದ ಹಾಸ್ಟೆಲ್‌ನ ಅಗ್ನಿದುರಂತಕ್ಕೆ ಶಾರ್ಟ್‌ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. (ವರದಿ- ಈಶ್ವರ್, ತುಮಕೂರು)

ತುಮಕೂರು: 300 ವಿದ್ಯಾರ್ಥಿನಿಯರಿದ್ದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ನಿನ್ನೆ ರಾತ್ರಿ ಅಗ್ನಿದುರಂತ ಸಂಭವಿಸಿದೆ. ಬಿಎಚ್ ರಸ್ತೆಯ ಈ ಹಾಸ್ಟೆಲ್‌ನ ಅಗ್ನಿದುರಂತಕ್ಕೆ ಶಾರ್ಟ್‌ ಸರ್ಕ್ಯೂಟ್‌ ಕಾರಣ ಎನ್ನಲಾಗಿದೆ.
ತುಮಕೂರು: 300 ವಿದ್ಯಾರ್ಥಿನಿಯರಿದ್ದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ನಿನ್ನೆ ರಾತ್ರಿ ಅಗ್ನಿದುರಂತ ಸಂಭವಿಸಿದೆ. ಬಿಎಚ್ ರಸ್ತೆಯ ಈ ಹಾಸ್ಟೆಲ್‌ನ ಅಗ್ನಿದುರಂತಕ್ಕೆ ಶಾರ್ಟ್‌ ಸರ್ಕ್ಯೂಟ್‌ ಕಾರಣ ಎನ್ನಲಾಗಿದೆ.

ತುಮಕೂರು: ನಗರದ ಬಿ.ಹೆಚ್.ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಶುಕ್ರವಾರ ರಾತ್ರಿ ಆತಂಕ ಸೃಷ್ಟಿಯಾಗಿತ್ತು. ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಆವರಿಸಿ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರೆಲ್ಲಾ ಆತಂಕದಿಂದ ಹೊರಕ್ಕೆ ಓಡಿ ಬಂದಿದ್ದಾರೆ.

ಹೊಗೆಯಿಂದ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ, ಈ ಹಾಸ್ಟೆಲ್‌ನಲ್ಲಿ 300 ವಿದ್ಯಾರ್ಥಿನಿಯರು ಇದ್ದರು. ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ,

ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ ಅಗ್ನಿಶಾಮಕ ದಳ ಹೆಚ್ಚಿನ ತೊಂದರೆಯಾಗುವುದನ್ನು ತಪ್ಪಿಸಿದ್ದಾರೆ, ಹೆಚ್ಚು ವಿದ್ಯಾರ್ಥಿನಿಯರು ಇರುವ ಈ ಹಾಸ್ಟೆಲ್‌ನಲ್ಲಿ ಇಂತಹ ಅವಘಡಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಮಾಜಿ ಸಚಿವ ಸೊಗಡು ಶಿವಣ್ಣ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದ್ದಾರೆ. ಮುಂದೆ ಇಂತಹ ಅವಘಡ ನಡೆಯದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ವಿದ್ಯಾರ್ಥಿನಿಯರು ಕೂಡ ಜಾಗ್ರತೆಯಿಂದ ಇರಬೇಕು ಎಂದು ತಿಳಿಸಿದರು.

ರಾಜ್ಯದ ಎಲ್ಲ ಹಾಸ್ಟೆಲ್‌ಗಳ ವಿದ್ಯುತ್‌ ಸಂಪರ್ಕ, ವಯರಿಂಗ್‌ ಪರಿಶೀಲನೆಯಾಗಲಿ

ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ವಿದ್ಯುತ್ ಸಂಪರ್ಕ, ವಯರಿಂಗ್ ನಿರ್ವಹಣೆಯ ಪರಿಶೀಲನೆಯಾಗಬೇಕು ಎಂಬ ಮಾತು ಕೇಳಿಬಂದಿದೆ. ಕಾಲಕಾಲಕ್ಕೆ ಆಗಬೇಕಾದ ಕೆಲಸಗಳು ಇದಾಗಿದ್ದು, ನಿರ್ವಹಣೆಯಲ್ಲಿ ಲೋಪಗಳಾದಾಗ ಇಂತಹ ಅನಾಹುತಗಳಾಗುತ್ತವೆ.

ಹಾಸ್ಟೆಲ್‌ಗಳಲ್ಲ ವಿದ್ಯಾರ್ಥಿಗಳು ಇರುವ ಕಾರಣ, ದುರಂತಗಳಾಗದಂತೆ ಮುಂಜಾಗ್ರತಾ ಕ್ರಮವನ್ನು ಅನುಸರಿಸಬೇಕಾದ್ದು ಅಗತ್ಯ. ಈ ಬಗ್ಗೆ ಅಧಿಕಾರಿಗಳು, ಸರ್ಕಾರ ಗಮನಹರಿಸಬೇಕು ಎಂಬ ಮಾತುಗಳು ಸ್ಥಳದಲ್ಲಿ ಕೇಳಿಬಂದವು.

(ವರದಿ- ಈಶ್ವರ್, ತುಮಕೂರು)

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಕರ್ನಾಟಕದ ತಾಜಾ ವಿದ್ಯಮಾನ, ದೇಶ-ವಿದೇಶದ ಪ್ರಮುಖ ಬೆಳವಣಿಗೆಗಳಿಗೆ ಸಂಬಂಧಿಸಿದ ವಿಡಿಯೊಗಳಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಯುಟ್ಯೂಬ್ ಚಾನೆಲ್‌ಗೆ ಭೇಟಿ ನೀಡಿ. ಟ್ರೆಂಡಿಂಗ್ ವಿಡಿಯೊಗಳೊಂದಿಗೆ ವಿಧಾನಸಭೆ ಅಧಿವೇಶನ, ಪ್ರಮುಖ ನಾಯಕರ ಸುದ್ದಿಗೋಷ್ಠಿಗಳನ್ನೂ ನೋಡಬಹುದು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ