logo
ಕನ್ನಡ ಸುದ್ದಿ  /  ಕರ್ನಾಟಕ  /  Tumkur News: ತುಮಕೂರು ಜಿಲ್ಲೆಗೆ ಅನುದಾನ ಮಹಾಪೂರ, 1259 ಕೋಟಿರೂ. ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ; 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು

Tumkur News: ತುಮಕೂರು ಜಿಲ್ಲೆಗೆ ಅನುದಾನ ಮಹಾಪೂರ, 1259 ಕೋಟಿರೂ. ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ; 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು

Umesha Bhatta P H HT Kannada

Dec 02, 2024 04:47 PM IST

google News

ತುಮಕೂರಿನಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆಗೆ ಆಗಮಿಸಿದ ಸಿಎಂ ಅವರನ್ನು ನಗರಾಭಿವೃದ್ದಿಸಚಿವ ಬೈರತಿ ಸುರೇಶ್‌ ಅವರೇ ವಾಹನ ಚಾಲನೆ ಮಾಡಿಕೊಂಡು ಕರೆದುಕೊಂಡು ಹೋದರು.

    • Tumkur Development Fund: ತುಮಕೂರಿನಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಆಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಇಲ್ಲಿಯೇ ನಿರ್ಮಿಸಬೇಕು ಎನ್ನುವ ಬೇಡಿಕೆಯೂ ಕೇಳಿ ಬಂದಿದೆ.
ತುಮಕೂರಿನಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆಗೆ ಆಗಮಿಸಿದ ಸಿಎಂ ಅವರನ್ನು ನಗರಾಭಿವೃದ್ದಿಸಚಿವ ಬೈರತಿ ಸುರೇಶ್‌ ಅವರೇ ವಾಹನ ಚಾಲನೆ ಮಾಡಿಕೊಂಡು ಕರೆದುಕೊಂಡು ಹೋದರು.
ತುಮಕೂರಿನಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆಗೆ ಆಗಮಿಸಿದ ಸಿಎಂ ಅವರನ್ನು ನಗರಾಭಿವೃದ್ದಿಸಚಿವ ಬೈರತಿ ಸುರೇಶ್‌ ಅವರೇ ವಾಹನ ಚಾಲನೆ ಮಾಡಿಕೊಂಡು ಕರೆದುಕೊಂಡು ಹೋದರು.

Tumkur Development Fund: ಕಲ್ಪತರು ನಾಡು ತುಮಕೂರಿನಲ್ಲೀಗ ಅಭಿವೃದ್ದಿ ಪರ್ವ. ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಜಿಲ್ಲೆಯ ರೂ. 1259 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆಯ ಕಾರ್ಯಕ್ರಮ. ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಶಂಕು ಸ್ಥಾಪನೆ, ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೂ ಮನವಿ. ಸ್ಮಾರ್ಟ್‌ಸಿಟಿ ಯೋಜನೆ ತುಮಕೂರು ಮಹಾನಗರದ ಕೆಲವೇ ವಾರ್ಡ್‌ಗಳಿಗೆ ಸೀಮಿತವಾಗಿದೆ. 35 ವಾರ್ಡ್‌ಗಳ ಅಭಿವೃದ್ಧಿಗೆ ರೂ. 500 ಕೋಟಿ ಅನುದಾನ ಒದಗಿಸಲು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಒತ್ತಾಯ.

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಅವರು ಮಾತನಾಡಿದ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.‌ ಜಿ.ಪರಮೇಶ್ವರ, ತುಮಕೂರು ಜಿಲ್ಲೆಯು ಅಭಿವೃದ್ಧಿಯ ಕಡೆ ದಾಪುಗಾಲು ಇಡುತ್ತಿದೆ. ಏಷ್ಯಾದ ಅತಿದೊಡ್ಡ ಕೈಗಾರಿಕಾ ಘಟಕವನ್ನು ಸ್ಥಾಪಿಸಲು 20 ಸಾವಿರ ಭೂಮಿಯನ್ನು ನೀಡಲಾಗಿದೆ. ಜಿಲ್ಲೆಗೆ ಮೆಟ್ರೋ ರೈಲು ಯೋಜನೆ ತರಲು ಮುಖ್ಯಮಂತ್ರಿಯವರನ್ನು ಕೇಳಿಕೊಂಡಾಗ, ಅದಕ್ಕೆ ಒಪ್ಪಿ ಕಾರ್ಯಸಾಧ್ಯತ ವರದಿಗೆ ಸೂಚಿಸಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಡಿಗಲ್ಲು ಹಾಕಿದ್ದಾರೆ. ಸರ್ಕಾರವು ರಾಜ್ಯದಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು ಚಿಂತನೆ‌ ನಡೆಸಿದೆ. ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಬೇಕು. ಇದರಿಂದ ರಾಜ್ಯದ 24 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.

ಜಿಲ್ಲೆಗೆ ಅಭಿವೃದ್ಧಿಯ ಕಾಯಕಲ್ಪ ಮಾಡಲು ನಮ್ಮ ಸರ್ಕಾರವು ಎಲ್ಲ ರೀತಿಯ ಕಾರ್ಯಗತವಾಗಿ ಶ್ರಮಿಸುತ್ತಿದೆ. 2023ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ರಾಜ್ಯ ಪ್ರವಾಸ ಕೈಗೊಂಡು ಭರವಸೆಗಳನ್ನು ನೀಡಿದ್ದರು. ಬಡತನ ನಿರ್ಮೂಲನೆ ಮಾಡಿ, ಆರ್ಥಿಕವಾಗಿ ಮೇಲೆತ್ತುವ ದೃಷ್ಟಿಯಿಂದ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ ಎನ್ನುವುದು ಪರಮೇಶ್ವರ್‌ ನುಡಿ.

ತುಮಕೂರು ವಿವಿ ಕ್ಯಾಂಪಸ್‌

ನಾನು ಉನ್ನತ ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಜಿಲ್ಲೆಗೆ ವಿಶ್ವವಿದ್ಯಾನಿಲಯ ಮಂಜೂರಾಗಿತ್ತು. ವಿಶ್ವವಿದ್ಯಾಲಯಕ್ಕೆ ನೂತನ ಕ್ಯಾಂಪಸ್ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಉದ್ಘಾಟಿಸಬೇಕು. ಕೊರಟಗೆರೆಯಲ್ಲಿನ ಕೆಎಸ್‌ಆರ್‌ಪಿ ಬೆಟಾಲಿಯನ್, ಪಾವಗಡ ತಾಲ್ಲೂಕಿಗೆ ಕುಡಿಯಲು ತುಂಗಾಭದ್ರ ನದಿಯಿಂದ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನ ಯೋಜನೆಯನ್ನು ತಾವುಗಳು ಉದ್ಘಾಟಿಸಬೇಕು ಎಂಬುದು ಅವರ ಮನವಿ.

ಸ್ಮಾರ್ಟ್‌ಸಿಟಿ ಯೋಜನೆ ತುಮಕೂರು ಮಹಾನಗರದ ಕೆಲವೇ ವಾರ್ಡ್‌ಗಳಿಗೆ ಸೀಮಿತವಾಗಿದೆ. 35 ವಾರ್ಡ್‌ಗಳ ಅಭಿವೃದ್ಧಿಗೆ ರೂ. 500 ಕೋಟಿ ಅನುದಾನ ನೀಡಬೇಕು ಎಂಬ ಬೇಡಿಕೆಯನ್ನು ಪರಮೇಶ್ವರ್‌ ಮುಂದಿಟ್ಟರು.

ಸಿಎಂ ಹೇಳಿದ್ದೇನು

ತುಮಕೂರು ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಇಂದು ನೇರವಾಗಿ ತಲುಪಿವೆ. ಪ್ರತೀ ಜಿಲ್ಲೆಯಲ್ಲೂ ಲಕ್ಷ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ತಲುಪುತ್ತಲೇ ಇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಾವು ಕೊಡುತ್ತಲೇ ಹೋಗುತ್ತೇವೆ. ಜೊತೆಗೆ ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನೂ ರೂಪಿಸುತ್ತೇವೆ.ಎಸ್‌ಸಿಪಿ ಹಾಗೂ ಟಿಎಸ್‌ಪಿ ಕಾಯ್ದೆಯನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ ಮಾತ್ರ. ಆದ್ದರಿಂದ ನಮ್ಮ ಸರ್ಕಾರ ಮಹಿಳೆಯರ ಪರವಾದ ಸರ್ಕಾರ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಶ್ರೀನಿವಾಸ್, ಶಾಸಕರಾದ ಜಿ.ಬಿ.ಜ್ಯೋತಿಗಣೆಶ್, ಬಿ.ಸುರೇಶ್‌ಗೌಡ, ಹೆಚ್.ವಿ.ವೆಂಕಟೇಶ್, ಕೆ.ಷಡಕ್ಷರಿ, ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಡಿ.ಟಿ.ಶ್ರೀನಿವಾಸ್, ಆರ್.ರಾಜೇಂದ್ರ, ಕೇಂದ್ರ ವಲಯ ಐಜಿಪಿ ಲಾಭೂ ರಾಮ್ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳು, ಜಿಲ್ಲಾಡಳಿತ, ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ