logo
ಕನ್ನಡ ಸುದ್ದಿ  /  ಕರ್ನಾಟಕ  /  Tumkur News:ರೈಲುಗಳಲ್ಲಿ ತುಂಬಿ ತುಳುಕುವ ಪ್ರಯಾಣಿಕರು, ಹೆಚ್ಚುವರಿ ಟ್ರೈನ್‌ಗೆ ಸಚಿವ ಸೋಮಣ್ಣಗೆ ತುಮಕೂರು ಜನರ ಬೇಡಿಕೆ

Tumkur News:ರೈಲುಗಳಲ್ಲಿ ತುಂಬಿ ತುಳುಕುವ ಪ್ರಯಾಣಿಕರು, ಹೆಚ್ಚುವರಿ ಟ್ರೈನ್‌ಗೆ ಸಚಿವ ಸೋಮಣ್ಣಗೆ ತುಮಕೂರು ಜನರ ಬೇಡಿಕೆ

Umesha Bhatta P H HT Kannada

Jul 06, 2024 07:00 PM IST

google News

ತುಮಕೂರು ರೈಲುಗಳಲ್ಲಿನ ಜನ ಸಂದಣಿ ಹೆಚ್ಚಿರುವುದರಿಂದ ಇನ್ನಷ್ಟು ರೈಲು ಓಡಿಸುವ ಬೇಡಿಕೆ ಕೇಳಿ ಬಂದಿದೆ.

    • Indian Railway ರೈಲ್ವೆ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿರುವುದರಿಂದ ತುಮಕೂರು ನಗರಕ್ಕೂ( Tumkur) ಹೆಚ್ಚಿನ ರೈಲು ಓಡಿಸುವಂತಹ ಬೇಡಿಕೆ ಕೇಳಿ ಬಂದಿದೆ. 
    • ವರದಿ: ಈಶ್ವರ್‌ ತುಮಕೂರು
ತುಮಕೂರು ರೈಲುಗಳಲ್ಲಿನ ಜನ ಸಂದಣಿ ಹೆಚ್ಚಿರುವುದರಿಂದ ಇನ್ನಷ್ಟು ರೈಲು ಓಡಿಸುವ ಬೇಡಿಕೆ ಕೇಳಿ ಬಂದಿದೆ.
ತುಮಕೂರು ರೈಲುಗಳಲ್ಲಿನ ಜನ ಸಂದಣಿ ಹೆಚ್ಚಿರುವುದರಿಂದ ಇನ್ನಷ್ಟು ರೈಲು ಓಡಿಸುವ ಬೇಡಿಕೆ ಕೇಳಿ ಬಂದಿದೆ.

ತುಮಕೂರು: ಬೆಂಗಳೂರಿನಿಂದ ತುಮಕೂರು, ಅರಸೀಕೆರೆ ಕಡೆಗೆ ಸಂಜೆ ವೇಳೆ ಚಲಿಸುವ ವಿಶೇಷ ಪ್ಯಾಸೆಂಜರ್ ಹಾಗೂ ಗೋಲ್ ಗುಂಬಜ್‌ ರೈಲುಗಳಲ್ಲಿ ನಿಲ್ಲಲು ಜಾಗವಿಲ್ಲದೆ ಪ್ರಯಾಣಿಕರು ಹೈರಾಣಾಗುತ್ತಿದ್ದು, ಹೆಚ್ಚುವರಿ ಜನರಲ್ ಬೋಗಿಗಳು ಅಥವಾ ಹೆಚ್ಚುವರಿ ರೈಲು ಓಡಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರನ್ನು ಪ್ರಯಾಣಿಕರು ಒತ್ತಾಯಿಸಿದ್ದಾರೆ. ಪ್ರತಿನಿತ್ಯ ರಾಜಧಾನಿ ಬೆಂಗಳೂರಿಗೆ ಅರಸೀಕೆರೆ, ತಿಪಟೂರು, ಗುಬ್ಬಿ, ತುಮಕೂರು ಸೇರಿದಂತೆ ಈ ಭಾಗದ ವಿವಿಧೆಡೆಗಳಿಂದ ಸಾವಿರಾರು ಮಂದಿ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ,ಬ್ಯುಸಿನೆಸ್ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ರೈಲಿನಲ್ಲಿ ಪ್ರಯಾಣಿಸುತ್ತಾರೆ. ಕೆಲ ಎಕ್ಸ್‌ಪ್ರೆಸ್ ರೈಲುಗಳು ನಿರ್ದಿಷ್ಟ ನಿಲ್ದಾಣಗಳಲ್ಲಿ ನಿಲುಗಡೆ ಮಾಡುವುದನ್ನು ಬಿಟ್ಟರೆ ಉಳಿಡೆದೆ ನಿಲ್ಲಿಸುವುದಿಲ್ಲ. ಹಾಗಾಗಿ ಪ್ಯಾಸೆಂಜರ್ ರೈಲಿಗೆ ಬಹಳ ಬೇಡಿಕೆ ಇದೆ, ಈ ಪ್ಯಾಸೆಂಜ್ ರೈಲಿನಲ್ಲಿ ನಿತ್ಯ ಸಾವಿರಾರು ಪ್ರಯಾಣಿಕರು ಪ್ರಯಾಣಿಸುತ್ತಾರೆ.

ಈ ರೈಲಿನ ಬೋಗಿಗಳಲ್ಲಿ ಜನ ನಿಲ್ಲಲು ಜಾಗ ಇಲ್ಲದಷ್ಟರ ಮಟ್ಟಿಗೆ ಪ್ರಯಾಣಿಕರು ತುಂಬಿರುತ್ತಾರೆ, ಒಮ್ಮೊಮ್ಮೆ ಬೋಗಿಗಳಲ್ಲಿ ಉಸಿರಾಡಲು ಸಹ ಜಾಗ ಇರುವುದಿಲ್ಲ, ಉಸಿರುಗಟ್ಟಿ ಪ್ರಯಾಣಿಸಬೇಕಾದ ವಾತಾವರಣ ಸೃಷ್ಟಿಯಾಗುತ್ತಿದೆ. ಅದರಲ್ಲೂ ಬೆಳಗ್ಗೆ ಮತ್ತು ಸಂಜೆ ವೇಳೆ ವೃದ್ಧರು, ಮಕ್ಕಳು, ಮಹಿಳೆಯರು ರೈಲು ಗಾಡಿಗಳಲ್ಲಿ ಪ್ರಯಾಣಿಸುವುದು ಬಹಳ ದುಸ್ತರವಾಗಿದೆ, ಹಾಗಾಗಿ ಈ ಬಗ್ಗೆ ರೈಲ್ವೆ ಅಧಿಕಾರಿಗಳು ಹಾಗೂ ಸಚಿವ ವಿ.ಸೋಮಣ್ಣ ಅವರು ಗಮನ ಹರಿಸಿ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಹೆಚ್ಚುವರಿ ರೈಲು ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಮನವಿ ಮಾಡಿದ್ದಾರೆ.

ಸಂಜೆ 6.20ಕ್ಕೆ ಮೆಜೆಸ್ಟಿಕ್‌ನಿಂದ ವಿಶೇಷ ಪ್ಯಾಸೆಂಜರ್ ರೈಲು ಹೊರಡಲಿದೆ, ಹಾಗೆಯೇ ಸಂಜೆ 6.40ಕ್ಕೆ ಗೋಲ್‌ಗುಂಬಜ್‌ ಎಕ್ಸ್‌ಪ್ರೆಸ್ ರೈಲು ಸಹ ಹೊರಡುತ್ತದೆ, ಈ ಅವಧಿಯಲ್ಲಿ ರಾಜಧಾನಿ ಬೆಂಗಳೂರಿಗೆ ವಿವಿಧ ಉದ್ದೇಶಗಳಿಗಾಗಿ ತೆರಳಿದ್ದ ಜನರು ತಮ್ಮ ತಮ್ಮ ಊರುಗಳಿಗೆ ಹೋಗಲು ತುದಿ ಗಾಲಲ್ಲಿ ನಿಂತಿರುತ್ತಾರೆ, ಈ ಎರಡು ರೈಲು ಗಾಡಿಗಳ ಬೋಗಿಗಳಲ್ಲಿ ಜನ ನಿಲ್ಲಲು ಜಾಗ ಇಲ್ಲದೆ ಹೈರಾಣಾಗುತ್ತಿದ್ದಾರೆ.

ಇದು ಒಂದು- ಎರಡು ದಿನದ ಕಥೆಯಲ್ಲ, ಇಡೀ ವರ್ಷ ಇದೇ ಪರಿಸ್ಥಿತಿಯಲ್ಲಿ ಜನರು ಪ್ರಯಾಣಿಸಬೇಕಾಗಿದೆ, ಪ್ರಯಾಣಿಕರ ಸುರಕ್ಷತೆ ಬಗ್ಗೆ ಯಾವೊಬ್ಬ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಪ್ರಯಾಣಿಕರು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ,

ಗೋಲ್‌ಗುಂಬಜ್‌ ರೈಲಿನಲ್ಲಿ ಎರಡು ಅಥವಾ ಮೂರು ಮಾತ್ರ ಜನರಲ್ ಬೋಗಿಗಳು ಇರುತ್ತದೆ, ಉಳಿದಂತೆ ರಿಸರ್ವ್ ಬೋಗಿಗಳು ಇವೆ, ಈ ರೈಲಿಗೆ ಟಿಕೆಟ್ ಪಡೆದಿರುವ ಮತ್ತು ಪಾಸ್ ಹೊಂದಿರುವ ಪ್ರಯಾಣಿಕರು ಸಹ ಬರುತ್ತಾರೆ, ಆಗ ಇರುವ 2-3 ಜನರಲ್ ಬೋಗಿಯಲ್ಲಿ ಕಾಲಿಡಲು ಸಹ ಜಾಗ ಇಲ್ಲದೇ ಪರದಾಡುವಂತಹ ವಾತಾವರಣ ಸೃಷ್ಟಿಯಾಗುತ್ತಲೇ ಇರುತ್ತದೆ.

ಈ ಬಗ್ಗೆ ರೈಲ್ವೆ ಟಿಸಿ ಗಳು ಗಮನ ಹರಿಸುವುದಿಲ್ಲ, ಜೊತೆಗೆ ಪ್ರಯಾಣಿಕರೊಂದಿಗೆ ಸೌಜನ್ಯವಾಗಿ ವರ್ತಿಸಿ ಮಾಹಿತಿ ನೀಡುವುದಿಲ್ಲ, ಇದರಿಂದ ಪಾಸ್ ಹೊಂದಿರುವವರು ಹಾಗೂ ಟಿಕೆಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ.

ವರದಿ: ಈಶ್ವರ್, ತುಮಕೂರು

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ