logo
ಕನ್ನಡ ಸುದ್ದಿ  /  ಕರ್ನಾಟಕ  /  Tumkur News: ಒಂದು ಲಕ್ಷ ಪ್ಲಾಸ್ಟಿಕ್‌ ಬಾಟೆಲ್‌ ಬಳಸಿ ತುಮಕೂರು ಕಲಾಕೃತಿ, ಗಿನ್ನಿಸ್‌ ದಾಖಲೆಗೆ ಅಣಿಯಾದ ನಗರ ಪಾಲಿಕೆ

Tumkur News: ಒಂದು ಲಕ್ಷ ಪ್ಲಾಸ್ಟಿಕ್‌ ಬಾಟೆಲ್‌ ಬಳಸಿ ತುಮಕೂರು ಕಲಾಕೃತಿ, ಗಿನ್ನಿಸ್‌ ದಾಖಲೆಗೆ ಅಣಿಯಾದ ನಗರ ಪಾಲಿಕೆ

Umesha Bhatta P H HT Kannada

Jan 26, 2024 08:00 AM IST

google News

ತುಮಕೂರು ನಗರಪಾಲಿಕೆ ಪ್ಲಾಸ್ಟಿಕ್‌ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಲಿದೆ.

    • ತುಮಕೂರು ನಗರವು ಪ್ಲಾಸ್ಟಿಕ್‌ ಕುರಿತು ವಿಭಿನ್ನವಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.  (ವರದಿ: ಈಶ್ವರ್‌ ತುಮಕೂರು)
 ತುಮಕೂರು ನಗರಪಾಲಿಕೆ ಪ್ಲಾಸ್ಟಿಕ್‌ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಲಿದೆ.
ತುಮಕೂರು ನಗರಪಾಲಿಕೆ ಪ್ಲಾಸ್ಟಿಕ್‌ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಲಿದೆ.

ತುಮಕೂರು: ಏಕಬಳಕೆ ಪ್ಲಾಸ್ಟಿಕ್ ಬಾಟಲ್‌ಗಳನ್ನು ಉಪಯೋಗಿಸಿ ಗಿನ್ನಿಸ್ ದಾಖಲೆಯ ಪುಟ ಸೇರಲು ತುಮಕೂರು ನಗರ ಸಿದ್ಧವಾಗಿದೆ. ಮಹಾ ನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜನವರಿ 28 ರಂದು ಮಧ್ಯಾಹ್ನ 3 ಗಂಟೆಗೆ 1 ಲಕ್ಷಕ್ಕೂ ಹೆಚ್ಚು ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿ ತುಮಕೂರು ಎಂಬ ಕನ್ನಡ ಪದದ ಕಲಾಕೃತಿ ನಿರ್ಮಿಸುವ ಮೂಲಕ ತುಮಕೂರು ನಗರವನ್ನು ವಿಶ್ವ ಗಿನ್ನಿಸ್ ದಾಖಲೆಗೆ ಸೇರಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಹಿಂದೆ 14500 ಪ್ಲಾಸ್ಟಿಕ್ ಬಾಟಲಿ ಬಳಸಿ ಖತಾರ್ ದೇಶದಲ್ಲಿ ಖತಾರ್ ಎಂಬ ಆಂಗ್ಲ ಪದದ ಕಲಾಕೃತಿ ನಿರ್ಮಿಸಿ ಗಿನ್ನಿಸ್ ದಾಖಲೆಯಾಗಿತ್ತು, ಈ ದಾಖಲೆ ಮುರಿದು ಹೊಸ ದಾಖಲೆ ನಿರ್ಮಿಸಲು ತುಮಕೂರು ನಗರ ಅಣಿಯಾಗಿದೆ.

ಕಲಾಕೃತಿಯನ್ನು ಪಾಲಿಕೆ ಪೌರ ಕಾರ್ಮಿಕರು ನಿರ್ಮಿಸಲಿದ್ದಾರೆ, ಇದಕ್ಕಾಗಿ ಜನವರಿ 26 ಹಾಗೂ 27 ರಂದು ಪೌರ ಕಾರ್ಮಿಕರಿಗೆ ಪೂರ್ವ ತಾಲೀಮು ನಡೆಸಲಾಗುವುದು, ಕಲಾಕೃತಿಯನ್ನು 15=75 ಮೀಟರ್ ಅಳತೆಯಲ್ಲಿ ನಿರ್ಮಿಸಲಾಗುತ್ತಿದ್ದು, ಕಲಾಕೃತಿ ನಿರ್ಮಾಣದಲ್ಲಿ ಮಣ್ಣು, ನೀರು ಬಳಸದೆ ಕೇವಲ ಗಮ್ ಮತ್ತು ಟೇಪ್ ಬಳಸಲಾಗುತ್ತಿದೆ.

ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ಬಳಕೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಪ್ರಯತ್ನ ಮಾಡಲಾಗುತ್ತಿದೆ, ಕಳೆದ 20 ದಿನಗಳಿಂದ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳ ಮನೆ, ಹೋಟೆಲ್, ರೆಸ್ಟೋರೆಂಟ್, ಫುಡ್ ಸ್ಟ್ರೀಟ್, ಕನ್ವೆನ್ಷನ್ ಹಾಲ್‌ಗಳಿಂದ ಸಂಗ್ರಹಿಸಲಾದ ಏಕಬಳಕೆ ಬಾಟಲಿಗಳನ್ನು ಕಲಾಕೃತಿಗೆ ಬಳಸಲಾಗುತ್ತಿದೆ ಎನ್ನುವುದು ತುಮಕೂರು ನಗರ ಪಾಲಿಕೆ ಆಯುಕ್ತರು, ಪ್ಲಾಸ್ಟಿಕ್‌ ಬಳಸಿ ಗಿನ್ನಿಸ್‌ ದಾಖಲೆ ನಿರ್ಮಿಸಲು ಯೋಜಿಸಿರುವ ಅಶ್ವಿಜ.ಬಿ.ವಿ. ಅವರ ವಿವರಣೆ.

ಬಾಟಲಿಗಳನ್ನು ಅರ್ಧ ಲೀಟರ್, 1 ಲೀಟರ್, 2 ಲೀಟರ್ ಪ್ರತ್ಯೇಕಿಸಿ ಸುಮಾರು 5 ಗಂಟೆಯಿಂದ 8 ಗಂಟೆಯೊಳಗೆ ಕಲಾಕೃತಿ ನಿರ್ಮಿಸುವ ಪ್ರಯತ್ನ ಮಾಡಲಾಗುವುದು, ಈ ಕಲಾಕೃತಿ ನಿರ್ಮಾಣಕ್ಕೆ ಸಮಯದ ಮಿತಿಯನ್ನು ನಿಗದಿಗೊಳಿಸಿಲ್ಲ ಎಂದು ತಿಳಿಸಿದರಲ್ಲದೆ ಗಿನ್ನಿಸ್ ದಾಖಲೆಯನ್ನು ಲಂಡನ್ ನಿಂದ ಆಗಮಿಸಲಿರುವ ತೀರ್ಪುಗಾರರ ಸಮಕ್ಷಮದಲ್ಲಿ ಒಂದೇ ದಿನದಲ್ಲಿ ನಿರ್ಮಿಸಲಾಗುವುದು ಎನ್ನುತ್ತಾರೆ ಅವರು.

ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾ ಸ್ವಾಮೀಜಿ, ಪಾಲಿಕೆ ಮೇಯರ್ ಪ್ರಭಾವತಿ, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು, ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎನ್ನುವುದು ಅವರ ಮನವಿ.

ಭಾಗವಹಿಸಲಿಚ್ಛಿಸುವ ಸಾರ್ವಜನಿಕರು ಕಾಲ್ ಸೆಂಟರ್ ಸಂಖ್ಯೆ 0816- 2213400ಗೆ ಕರೆ ಮಾಡುವ ಮೂಲಕ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು, ಹೆಸರು ನೋಂದಾಯಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುತ್ತದೆ.

(ವರದಿ: ಈಶ್ವರ್‌ ತುಮಕೂರು)

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ