logo
ಕನ್ನಡ ಸುದ್ದಿ  /  ಕರ್ನಾಟಕ  /  ತುಮಕೂರು: ಗೋಪಾಲಪುರ ದಲಿತ ಮಹಿಳೆ ಕೊಲೆ ಪ್ರಕರಣ, 14 ವರ್ಷಗಳ ನಂತರ ತೀರ್ಪು ಪ್ರಕಟ; 21 ಮಂದಿಗೆ ಜೀವಾವಧಿ ಶಿಕ್ಷೆ

ತುಮಕೂರು: ಗೋಪಾಲಪುರ ದಲಿತ ಮಹಿಳೆ ಕೊಲೆ ಪ್ರಕರಣ, 14 ವರ್ಷಗಳ ನಂತರ ತೀರ್ಪು ಪ್ರಕಟ; 21 ಮಂದಿಗೆ ಜೀವಾವಧಿ ಶಿಕ್ಷೆ

Rakshitha Sowmya HT Kannada

Nov 21, 2024 08:19 PM IST

google News

ತುಮಕೂರು ಗೋಪಾಲಪುರ ದಲಿತ ಮಹಿಲೆ ಕೊಲೆ ಪ್ರಕರಣದಲ್ಲಿ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

  • ತುಮಕೂರು: 2010 ರಲ್ಲಿ ಗೋಪಾಲಪುರದಲ್ಲಿ ನಡೆದಿದ್ದ ಹೊನ್ನಮ್ಮ ಎಂಬ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಜೊತೆಗೆ 13.500 ರೂ ದಂಡ ವಿಧಿಸಿ ತೀರ್ಪು ನೀಡಿದೆ. 

ತುಮಕೂರು ಗೋಪಾಲಪುರ ದಲಿತ ಮಹಿಲೆ ಕೊಲೆ ಪ್ರಕರಣದಲ್ಲಿ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ
ತುಮಕೂರು ಗೋಪಾಲಪುರ ದಲಿತ ಮಹಿಲೆ ಕೊಲೆ ಪ್ರಕರಣದಲ್ಲಿ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ತುಮಕೂರು: ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರನ್ನು ಬರ್ಬರ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಮಂದಿ ಅಪರಾಧ ಸಾಬೀತಾಗಿದ್ದು ಎಲ್ಲರಿಗೂ ಜಿಲ್ಲಾ 3ನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಗುರುವಾರ ಆದೇಶಿಸಿ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ.

2010 ರಲ್ಲಿ ನಡೆದಿದ್ದ ಹೊನ್ನಮ್ಮ ಎಂಬ ಮಹಿಳೆಯ ಕೊಲೆ

ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010 ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಹೊನ್ನಮ್ಮ ಎಂಬುವರ ಕೊಲೆ ನಡೆದಿತ್ತು, ಸುದೀರ್ಘ 14 ವರ್ಷಗಳ ಕಾಲ ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿರುವುದಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಬಿಎಸ್ ಜ್ಯೋತಿ ಮಾಹಿತಿ ನೀಡಿದ್ದಾರೆ. 21 ಅಪರಾಧಿಗಳಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ.

ಗೋಪಾಲಪುರದ ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು, ಹೊನ್ನಮ್ಮ ಸಂಗ್ರಹಿಸಿ ಇಟ್ಟಿದ್ದ ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು, ಈ ಸಂಬಂಧ ಹೊನ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು, ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು, ಸದಾ ಒಂದಲ್ಲಾ ಒಂದು ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆಯುತಿತ್ತು. ಈ ಸಮಯದಲ್ಲಿ ಎಲ್ಲರೂ ಹೊನ್ನಮ್ಮ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು. ಕೊನೆಗೆ 27 ಮಂದಿ ಸೇರಿ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿದ್ದರು.

ಕೊಲೆ ಆರೋಪಿಗಳಲ್ಲಿ ಈಗಾಗಲೇ 6 ಮಂದಿ ಮೃತಪಟ್ಟಿದ್ದಾರೆ

ಕೊಲೆ ಆರೋಪದ ಮೇಲೆ ರಂಗನಾಥ, ಮಂಜುಳಾ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದ ಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ, ಸತ್ಯಪ್ಪ- ಸತೀಶ, ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಎಂಬುವರನ್ನು ಪೊಲೀಸರು ಬಂಧಿಸಿ ಕೇಸ್‌ ದಾಖಲಿಸಿದ್ದರು. ಅಂದಿನ ಡಿವೈಎಸ್ ಪಿ ಶಿವರುದ್ರಸ್ವಾಮಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಇದೀಗ ಇವರ ಅಪರಾಧ ಸಾಬೀತಾಗಿದ್ದು ಅಪರಾಧಿಗಳು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಆದರೆ ಈ 21 ಜನರಲ್ಲಿ ಹನುಮಂತಯ್ಯ, ವೆಂಕಟೇಶ್, ರಾಮಯ್ಯ, ದಾಸಪ್ಪ, ರಾಮಯ್ಯ (ಒಂದೇ ಹೆಸರಿನ ಮತ್ತೊಬ್ಬ ಅಪರಾಧಿ) ಬುಳ್ಳೆ ಹನುಮಂತಪ್ಪ ಎಂಬುವವರು ಈಗಾಗಲೇ ಮೃತಪಟ್ಟಿದ್ದಾರೆ.

ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದಾರೆ, ಐಪಿಸಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣ ಪ್ರಕಟಿಸಿದ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನಾಗೀರೆಡ್ಡಿಅವರು 21 ಅಪರಾಧಿಗಳ ಪೈಕಿ ಇಬ್ಬರು ಮಹಿಳೆಯರು ಸೇರಿ ಎಲ್ಲರಿಗೂ ಜೀವಾವಧಿ ಶಿಕ್ಷೆ ಹಾಗೂ 13.500 ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ