logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Cet Exam: ಯಾವುದೇ ಅಡೆತಡೆ ಇಲ್ಲದೆ ರಾಜ್ಯದಲ್ಲಿ ಎರಡು ದಿನಗಳ ಸಿಇಟಿ ಪರೀಕ್ಷೆ ಪಾರದರ್ಶಕವಾಗಿ ನಡೆದಿದೆ; ಕೆಇಎ

Karnataka CET Exam: ಯಾವುದೇ ಅಡೆತಡೆ ಇಲ್ಲದೆ ರಾಜ್ಯದಲ್ಲಿ ಎರಡು ದಿನಗಳ ಸಿಇಟಿ ಪರೀಕ್ಷೆ ಪಾರದರ್ಶಕವಾಗಿ ನಡೆದಿದೆ; ಕೆಇಎ

HT Kannada Desk HT Kannada

May 21, 2023 08:43 PM IST

google News

ರಾಜ್ಯಾದಾದ್ಯಂತ ನಡೆದ ಎರಡು ದಿನಗಳ ಸಿಇಟಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

  • ರಾಜ್ಯದಲ್ಲಿ ಎರಡು ದಿನಗಳ ಕಾಲ ನಡೆದ ಸಿಇಟಿ-2023 ಪರೀಕ್ಷೆ ಯಾವುದೇ ಅಡ್ಡಿ ಆತಂಕಗಳು ಇಲ್ಲದೆ ಸುಸೂತ್ರವಾಗಿ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ರಾಜ್ಯಾದಾದ್ಯಂತ ನಡೆದ ಎರಡು ದಿನಗಳ ಸಿಇಟಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
ರಾಜ್ಯಾದಾದ್ಯಂತ ನಡೆದ ಎರಡು ದಿನಗಳ ಸಿಇಟಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ವಿವಿಧ ವೃತ್ತಿಪರ ಕೋರ್ಸ್‌ಗಳಿಗಾಗಿ ರಾಜ್ಯಾದ್ಯಂತ ನಡೆಸಿದ ಎರಡು ದಿನಗಳ ಸಾಮಾನ್ಯ ಪ್ರವೇಶ ಪರೀಕ್ಷೆ (Common Entrance Test) (CET Exam -23) ಯಾವುದೇ ಅಡೆತಡೆಗಳು ಇಲ್ಲದ ಸುಸೂತ್ರವಾಗಿ ನಡೆದಿದೆ ಎಂದು ಕೆಇಎ ತಿಳಿಸಿದೆ.

ನಿನ್ನೆ (ಮೇ 20, ಶನಿವಾರ) ಇಂದು (ಮೇ 21, ಭಾನುವಾರ) ಎರಡು ದಿನಗಳ ಬೆಂಗಳೂರು ಸೇರಿದಂತೆ ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆದಿದ್ದು, ಒಟ್ಟು 2,16,610 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.

ಮೊದಲ ದಿನವಾದ ನಿನ್ನೆ (ಮೇ 20, ಶನಿವಾರ) ಬೆಳಿಗ್ಗೆ 10.30 ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರ ವರೆಗೆ ಗಣಿತ ವಿಷಯಗಳ ಪರೀಕ್ಷೆ ನಡೆದಿವೆ. ಎರಡನೇ ದಿನವಾದ ಇಂದು (ಮೇ 21, ಭಾನುವಾರ) ಬೆಳಗ್ಗೆ 10.30 ರಿಂದ 11.50 ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ 3.50ರ ವರೆಗೆ ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆ ನಡೆದಿದೆ.

ಬೆಂಗಳೂರಿನ 121 ಕೇಂದ್ರಗಳು ಸೇರಿದಂತೆ ರಾಜ್ಯದ ಎಲ್ಲಾ 592 ಕೇಂದ್ರಗಳಲ್ಲಿ ಪರೀಕ್ಷೆಯು ಪಾರದರ್ಶಕವಾಗಿ ನಡೆದಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ತಿಳಿಸಿದ್ದಾರೆ.

ಒಟ್ಟು ನೋಂದಾಯಿಸಿದ್ದ 2,61,610 ವಿದ್ಯಾರ್ಥಿಗಳ ಪೈಕಿ ಜೀವಶಾಸ್ತ್ರ ಪರೀಕ್ಷೆಗೆ 2,00,457 (82.53%) ಹಾಗೂ ಗಣಿತ ಪರೀಕ್ಷೆಗೆ 2,39,716 (93.78%) ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಹೊಸ ಮುಖ್ಯಮಂತ್ರಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಇದ್ದುದರಿಂದ ಕೆಇಎ ಮುನ್ನೆಚ್ಙರಿಕೆ ಕ್ರಮಗಳನ್ನು ತೆಗೆದುಕೊಂಡಿತ್ತು. ಮುಖ್ಯವಾಗಿ, ವಾಹನ ದಟ್ಟಣೆಯಲ್ಲಿ ಸಿಲುಕಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ತಲುಪುವುದು ತಡವಾಗಬಾರದೆಂದು ಕ್ರಮವಹಿಸಲಾಗಿತ್ತು. ಇದಕ್ಕಾಗಿ, ಬೆಂಗಳೂರಿನ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವವರಿಗೆ ನಿಗದಿತ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಆಯಾ ಕೇಂದ್ರಕ್ಕೆ ಬರುವಂತೆ ಸೂಚಿಸಲಾಗಿತ್ತು. ಅಲ್ಲದೇ, ವಿದ್ಯಾರ್ಥಿಗಳಿಗೆ ಕೇಂದ್ರವನ್ನು ತಲುಪಲು ಸಹಾಯ ಮಾಡುವಂತೆ ಪೊಲೀಸರ ಸಹಕಾರವನ್ನು ಕೂಡ ಕೋರಲಾಗಿತ್ತು ಎಂದು ರಮ್ಯಾ ತಿಳಿಸಿದ್ದಾರೆ.

ಎರಡನೇ ದಿನವಾದ ಇಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆ ನಡೆದಿದೆ. ಒಟ್ಟು ನೋಂದಾಯಿಸಿದ್ದ 2,61,610 ವಿದ್ಯಾರ್ಥಿಗಳ ಪೈಕಿ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳಿಗೆ ತಲಾ 2,39,716 (93.16%) ವಿದ್ಯಾರ್ಥಿಗಳು ಹಾಜರಾಗಿದ್ದರು.

ಸೋಮವಾರ, ಮೇ 22ರಂದು ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆಯು ನಿಗದಿಯಾಗಿರುವಂತೆ ನಡೆಯಲಿದೆ. ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಹೇಳಿದ್ದಾರೆ.

ಬಿಎಸ್ಸಿ ನರ್ಸಿಂಗ್, ವೆಟರ್ನರಿ, ಫಾರ್ಮಸಿ, ಇಂಜಿನಿಯರಿಂಗ್, ಕೃಷಿ ವಿಜ್ಞಾನ, ನ್ಯಾಚುರೋಪಥಿ ಮತ್ತು ಯೋಗ ಸೇರಿದಂತೆ ಮುಂತಾದ ವೃತ್ತಿ ಪರ ಕೋರ್ಸ್‌ಗಳಿಗಾಗಿ ಸಿಇಟಿ ಪರೀಕ್ಷೆ ನಡೆಸಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ