logo
ಕನ್ನಡ ಸುದ್ದಿ  /  ಕರ್ನಾಟಕ  /  Udupi News: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀನ ಮಾದರಿಯ ಎಂಡೋಸ್ಕೋಪಿ; ಕರಾವಳಿಯಲ್ಲೇ ಮೊದಲು

Udupi News: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀನ ಮಾದರಿಯ ಎಂಡೋಸ್ಕೋಪಿ; ಕರಾವಳಿಯಲ್ಲೇ ಮೊದಲು

HT Kannada Desk HT Kannada

Jun 07, 2023 09:56 PM IST

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ (ಎಡಚಿತ್ರ)

    • Kasturba Medical College And Hospital: ಕ್ಯಾನ್ಸರ್​​​​​ನಿಂದಾಗಿ ಗ್ಯಾಸ್ಟ್ರಿಕ್ ಔಟ್ಲೆಟ್ ಅಡಚಣೆ ಹೊಂದಿರುವ ವ್ಯಕ್ತಿಗೆ ಯಶಸ್ವಿಯಾಗಿ ಈ ಕಾರ್ಯವಿಧಾನ ಮೂಲಕ ಚಿಕಿತ್ಸೆ ನಡೆಸಲಾಯಿತು. ಈ ವಿಧಾನವು ಶಸ್ತ್ರಚಿಕಿತ್ಸೆಯನ್ನು ಮಾಡುವ ಬದಲು ಬಳಸಬಹುದು. ಯಾವುದೇ ಶಸ್ತ್ರಚಿಕಿತ್ಸೆಗೆ ಸರಿಹೊಂದದ ರೋಗಿಗಳಿಗೆ ಇದು ಸೂಕ್ತ ವಿಧಾನವಾಗಿದೆ.
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ (ಎಡಚಿತ್ರ)
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ (ಎಡಚಿತ್ರ)

ಉಡುಪಿ: ಜಿಲ್ಲೆಯ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (Kasturba Medical College And Hospital) ನವೀನ ಮಾದರಿಯ ಎಂಡೋಸ್ಕೋಪಿ (ಈಯುಎಸ್ - ಗ್ಯಾಸ್ಟ್ರೊಜೆಜುನ್ಸೋಟಮಿ) ಕಾರ್ಯವಿಧಾನ ಕಾರ್ಯರೂಪಕ್ಕೆ ಬಂದಿದ್ದು, ಇದು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮೊದಲ ಬಾರಿಗೆ ಅನುಷ್ಠಾನವಾಗಿದೆ.

ಟ್ರೆಂಡಿಂಗ್​ ಸುದ್ದಿ

108 ಆಂಬುಲೆನ್ಸ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಒಂದು ದಿನ ಮುಂದೂಡಿಕೆ; ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವರು

Hassan Scandal: ಪ್ರಜ್ವಲ್‌ ರೇವಣ್ಣ ವಿಡಿಯೋ ವೈರಲ್‌ಗೆ ಸಿಎಂ, ಡಿಸಿಎಂ ಕಾರಣ: ವಕೀಲ ದೇವರಾಜೇಗೌಡ ಸ್ಪೋಟಕ ಮಾಹಿತಿ

Drought fund: ಮುಂಗಾರು 2023 ಬರ ಪರಿಹಾರ ವಿತರಣೆಗೆ ಕ್ಷಣಗಣನೆ, ಹಣ ಬಂದಿದೆಯೇ ಎಂದು ಹೀಗೆ ಪರೀಕ್ಷಿಸಿ

Indian Railways: ಬೇಸಿಗೆಗೆ ಹುಬ್ಬಳ್ಳಿ, ಬೆಳಗಾವಿಯಿಂದ ಉತ್ತರ ಭಾರತಕ್ಕೆ ವಿಶೇಷ ರೈಲು, ಅರಸೀಕೆರೆ 2 ರೈಲು ಸಂಚಾರ ರದ್ದು

ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿರನ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಡಾ ಗಣೇಶ್ ಭಟ್, ಡಾ.ಅತಿಶ್ ಶೆಟ್ಟಿ, ಡಾ.ಬಾಲಾಜಿ ಮತ್ತು ಡಾ.ಸಂದೇಶ್ ಶೇಟ್ (ಅರಿವಳಿಕೆ) ಎಂಡೋಲ್ಟ್ರಾಸೌಂಡ್ ಗೈಡೆಡ್ ಗ್ಯಾಸ್ಟ್ರೋಜೆಜುನೋಸ್ಟೋಮಿ ಎಂಬ ವಿನೂತನ ಎಂಡೋಸ್ಕೋಪಿ ಕಾರ್ಯವಿಧಾನ (ಶಸ್ತ್ರಚಿಕಿತ್ಸೆ)ವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಇತ್ತೀಚೆಗೆ ನಡೆಸಿ ಯಶಸ್ವಿಯಾಗಿದ್ದಾರೆ.

ಕ್ಯಾನ್ಸರ್​​​​​ನಿಂದಾಗಿ ಗ್ಯಾಸ್ಟ್ರಿಕ್ ಔಟ್ಲೆಟ್ ಅಡಚಣೆ ಹೊಂದಿರುವ ವ್ಯಕ್ತಿಗೆ ಯಶಸ್ವಿಯಾಗಿ ಈ ಕಾರ್ಯವಿಧಾನ ಮೂಲಕ ಚಿಕಿತ್ಸೆ ನಡೆಸಲಾಯಿತು. ಈ ವಿಧಾನವು ಶಸ್ತ್ರಚಿಕಿತ್ಸೆಯನ್ನು ಮಾಡುವ ಬದಲು ಬಳಸಬಹುದು. ಯಾವುದೇ ಶಸ್ತ್ರಚಿಕಿತ್ಸೆಗೆ ಸರಿಹೊಂದದ ರೋಗಿಗಳಿಗೆ ಇದು ಸೂಕ್ತ ವಿಧಾನವಾಗಿದೆ. ಎಂಡೋಸ್ಕೋಪಿಯ ಮರುದಿನವೇ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದು. ಶಸ್ತ್ರಚಿಕಿತ್ಸೆಗಿಂತ ತುಂಬಾ ಕಡಿಮೆ ವೆಚ್ಚದಲ್ಲಿ ಮಾಡಬಹುದು. ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಮತ್ತು ಗ್ಯಾಸ್ಟ್ರಿಕ್ ಔಟ್ಲೆಟ್ ಅಡಚಣೆಯೊಂದಿಗೆ ನಿರಂತರ ವಾಂತಿ ಆಗುತ್ತಿದ್ದ 55 ವರ್ಷ ವಯಸ್ಸಿನ ಪುರುಷನನ್ನು ಮತ್ತೊಂದು ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಕಳುಹಿಸಿದ್ದರು. ವೈದ್ಯರ ತಂಡ ಮತ್ತು ರೋಗಿಯ ಸಂಬಂಧಿಕರೊಂದಿಗೆ ಮಾತುಕತೆ ಮತ್ತು ಚರ್ಚೆಯ ನಂತರ, ಈಯುಎಸ್ -ಗ್ಯಾಸ್ಟ್ರೊಜೆಜುನ್ಸೋಟಮಿ (ಹೊಟ್ಟೆ ಮತ್ತು ಸಣ್ಣ ಕರುಳಿನ ನಡುವಿನ ಸಂಪರ್ಕ) ಎಂಬ ವಿಶಿಷ್ಟವಾದ ಎಂಡೋಸ್ಕೋಪಿಕ್ ವಿಧಾನವನ್ನು ನಿರ್ವಹಿಸಲು ನಿರ್ಧರಿಸಲಾಯಿತು. ಕಾರ್ಯವಿಧಾನದ ನಂತರ ರೋಗಿಯು ಮೌಖಿಕ ಆಹಾರವನ್ನು ತೆಗೆದುಕೊಳ್ಳಲು ಸಾಧ್ಯವಾಗಿತ್ತು.

ಕರ್ನಾಟಕದ ಕರಾವಳಿ ಭಾಗದಲ್ಲಿ ಇದು ಮೊದಲನೆಯದ್ದಾಗಿದೆ. ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಮುಖ್ಯಸ್ಥರು ಹಾಗೂ ಉಪ ವೈದ್ಯಕೀಯ ಅಧೀಕ್ಷಕರಾದ ಡಾ.ಶಿರನ್ ಶೆಟ್ಟಿ ಈ ಕುರಿತು ಮಾತನಾಡಿ, "ಹೊಸ ತಂತ್ರಜ್ಞಾನದಿಂದಾಗಿ ವಿವಿಧ ಸಂಕೀರ್ಣ ರೋಗಗಳಿಗೆ ಎಂಡೋಸ್ಕೋಪಿ ಕಾರ್ಯವಿಧಾನಗಳ ಮೂಲಕವೇ ಹೆಚ್ಚಿನ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿದೆ. ಇದು ರೋಗಿಸ್ನೇಹಿ ಹಾಗೂ ಅತ್ಯಂತ ಕಡಿಮೆ ವೆಚ್ಚದಲ್ಲಿ ಇದನ್ನು ನಿರ್ವಹಿಸಬಹುದಾಗಿದೆ. ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಗ್ರಾಮೀಣ ಮಟ್ಟದ ಮತ್ತು ಬಡ ಹಿನ್ನೆಲೆಯ ರೋಗಿಗಳ ನಿರ್ವಹಣೆಗಾಗಿ ಇಂತಹ ಹೊಸ ಎಂಡೋಸ್ಕೋಪಿ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಭಾರತದ ಮೊದಲ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಒಂದಾಗಿದೆ" ಎಂದರು.

ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್ ಅವರು ಈ ವಿನೂತನ ಪ್ರಕ್ರಿಯೆಯಲ್ಲಿ ತೊಡಗಿರುವ ವೈದ್ಯರು ಮತ್ತು ಸಿಬ್ಬಂದಿಯ ತಂಡವನ್ನು ಶ್ಲಾಘಿಸಿದ್ದಾರೆ. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, "ಪ್ರಸ್ತುತ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗವು ಪ್ರತಿಷ್ಠಿತ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕೇಂದ್ರಗಳಿಗೆ ಸಮಾನವಾದ ಎಲ್ಲಾ ಪ್ರಮುಖ ಮತ್ತು ಸಂಕೀರ್ಣ ಎಂಡೋಸ್ಕೋಪಿಕ್ ಕಾರ್ಯವಿಧಾನಗಳನ್ನು ನಿರ್ವಹಿಸುತ್ತಿದೆ’’ ಎಂದು ತಿಳಿಸಿದ್ದಾರೆ.

ವರದಿ: ಹರೀಶ ಮಾಂಬಾಡಿ, ಮಂಗಳೂರು

    ಹಂಚಿಕೊಳ್ಳಲು ಲೇಖನಗಳು