ಕನ್ನಡ ಸುದ್ದಿ  /  ಕರ್ನಾಟಕ  /  Udupi Paryaya: ಉಡುಪಿ ಪರ್ಯಾಯಕ್ಕೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಿದ ಪುತ್ತಿಗೆ ಶ್ರೀಗಳು

Udupi Paryaya: ಉಡುಪಿ ಪರ್ಯಾಯಕ್ಕೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಿದ ಪುತ್ತಿಗೆ ಶ್ರೀಗಳು

Meghana B HT Kannada

Jan 12, 2024 09:53 PM IST

ಧರ್ಮಸ್ಥಳಕ್ಕೆ ಭೇಟಿ ನೀಡಿದ ಪುತ್ತಿಗೆ ಶ್ರೀಗಳು

    • ಧರ್ಮಸ್ಥಳಕ್ಕೆ ಆಗಮಿಸಿದ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಅವರ ಶಿಷ್ಯ ಸುಶ್ರೀಂದ್ರ ತೀರ್ಥ ಸ್ವಾಮೀಜಿಯವರಿಗೆ ಭವ್ಯ ಸ್ವಾಗತವನ್ನು ಕ್ಷೇತ್ರದ ವತಿಯಿಂದ ಮಾಡಲಾಯಿತು. ಪುತ್ತಿಗೆ ಶ್ರೀಗಳ ಭೇಟಿಯ ವಿವರ ಇಲ್ಲಿದೆ. (ವರದಿ: ಹರೀಶ ಮಾಂಬಾಡಿ)
ಧರ್ಮಸ್ಥಳಕ್ಕೆ ಭೇಟಿ ನೀಡಿದ ಪುತ್ತಿಗೆ ಶ್ರೀಗಳು
ಧರ್ಮಸ್ಥಳಕ್ಕೆ ಭೇಟಿ ನೀಡಿದ ಪುತ್ತಿಗೆ ಶ್ರೀಗಳು

ಮಂಗಳೂರು: ಪರ್ಯಾಯ ಪೀಠವನ್ನೇರಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.

ಟ್ರೆಂಡಿಂಗ್​ ಸುದ್ದಿ

MLC Elections2024: ಪರಿಷತ್‌ ಚುನಾವಣೆ, ನೈರುತ್ಯ- ದಕ್ಷಿಣ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್‌ಗೆ ಬಂಡಾಯ ಬಿಸಿ

Hassan Scandal: ಪ್ರಜ್ವಲ್‌ ಬೆಂಗಳೂರಿಗೆ ವಾಪಾಸ್‌ ಆಗುತ್ತಿಲ್ಲ ಯಾಕೆ, ವಿಳಂಬದ ಹಿಂದಿನ ತಂತ್ರವೇನು?

Hassan Scandal: ಬೆಂಗಳೂರಿಗೆ ಬಾರದ ಪ್ರಜ್ವಲ್‌ ರೇವಣ್ಣ, ಕಾದು ಕಾದು ಸುಸ್ತಾದ ಪೊಲೀಸರು

Bangalore News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ: ಬೆಂಗಳೂರಿನ ಮಾಧ್ವ ರಾದ್ಧಾಂತ ಸಂವರ್ಧಕ ಸಭಾ ಅಧಿವೇಶನದಲ್ಲಿ ಸಲಹೆ

ಧರ್ಮಸ್ಥಳಕ್ಕೆ ಆಗಮಿಸಿದ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಅವರ ಶಿಷ್ಯ ಸುಶ್ರೀಂದ್ರ ತೀರ್ಥ ಸ್ವಾಮೀಜಿಯವರಿಗೆ ಭವ್ಯ ಸ್ವಾಗತವನ್ನು ಕ್ಷೇತ್ರದ ವತಿಯಿಂದ ಮಾಡಲಾಯಿತು.

ಪುತ್ತಿಗೆ ಶ್ರೀಗಳ ಧರ್ಮಸ್ಥಳ ಭೇಟಿಯ ವಿವರ ಹೀಗಿದೆ..

- ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಬೀಡಿನಲ್ಲಿ ಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

- ಹೆಗ್ಗಡೆಯವರು ಸ್ವಾಮೀಜಿಯವರನ್ನು ಕ್ಷೇತ್ರದ ವತಿಯಿಂದ ಗೌರವಿಸಿದರು.

- ಸ್ವಾಮೀಜಿ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

- ಸ್ವಾಮೀಜಿದ್ವಯರು ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಆಶೀರ್ವಚನ ನೀಡಿದರು.

- ಕ್ಷೇತ್ರದ ಸಂಪ್ರದಾಯದಂತೆ ಸ್ವಾಮೀಜಿಯವರಿಗೆ ಪಾದಪೂಜೆ ನೆರವೇರಿಸಲಾಯಿತು.

- ಡಿ. ವೀರೇಂದ್ರ ಹೆಗ್ಗಡೆಯವರು ಸ್ವಾಮೀಜಿಯವರಿಗೆ ಭಕ್ತ್ತಿಪೂರ್ವಕ ಸ್ವಾಗತಕೋರಿ ಪೂಜ್ಯರ ಪರ್ಯಾಯ ಪೀಠಾರೋಹಣ ಹಾಗೂ ಎಲ್ಲಾ ಕಾರ್ಯಕ್ರಮಗಳು ಸುಗಮವಾಗಿ ನಡೆಯುವಂತೆ ಶ್ರೀ ಮಂಜುನಾಥ ಸ್ವಾಮಿಯನ್ನು ಪ್ರಾರ್ಥಿಸಿ ಅವರ ಅನುಗ್ರಹವನ್ನು ಕೋರಿದರು.

-ತಮಗೂ ಪೂಜ್ಯ ಸ್ವಾಮೀಜಿಯವರಿಗೂ ಕಳೆದ 40 ವರ್ಷಗಳಿಂದ ಇರುವ ಅವಿನಾಭಾವ ಸಂಬಂಧವನ್ನು ಸ್ಮರಿಸಿ ಪರ್ಯಾಯ ಸಮಿತಿಯಗೌರವಾಧ್ಯಕ್ಷರಾಗಿ ಸೇವೆ ಮಾಡಲು ತಮಗೆ ಅವಕಾಶ ದೊರಕಿರುವುದು ವಿಶೇಷ ಸಂತೋಷ ಮತ್ತುಧನ್ಯತಾ ಭಾವವನ್ನು ಮೂಡಿಸಿದೆ ಎಂದರು.

- ಇಂದು ಧರ್ಮಸ್ಥಳ ಎಲ್ಲಾತೀರ್ಥಕ್ಷೇತ್ರಗಳಿಗೂ ಮಾದರಿಕ್ಷೇತ್ರವಾಗಿ ಬೆಳೆದಿದೆ. ವಿಶ್ವದೆಲ್ಲೆಡೆ ಬೆಳಗುತ್ತಿದೆ ಎಂದು ಸ್ವಾಮೀಜಿ ಶ್ಲಾಘಿಸಿ ಹೆಗ್ಗಡೆಯವರನ್ನು ಅಭಿನಂದಿಸಿದರು.

ಡಿ. ಹರ್ಷೇಂದ್ರಕುಮಾರ್‌ ಅವರ ಕಾರ್ಯದಕ್ಷತೆ ಹಾಗೂ ಸೇವಾವೈಖರಿಯನ್ನು ಸ್ವಾಮೀಜಿ ಶ್ಲಾಘಿಸಿ ಅಭಿನಂದಿಸಿದರು.

- ಸ್ವಾಮೀಜಿಯವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ,. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್‌ ಅವರಿಗೆ ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ವರದಿ: ಹರೀಶ ಮಾಂಬಾಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ