logo
ಕನ್ನಡ ಸುದ್ದಿ  /  ಕರ್ನಾಟಕ  /  Unknown Vehicle Found In Hubli: ಹುಬ್ಬಳ್ಳಿಯಲ್ಲಿ ಪ್ರಧಾನಿ‌ ಮೋದಿ ಸಂಚರಿಸುವ ಮಾರ್ಗದಲ್ಲಿ ಅಪರಿಚಿತ ವಾಹನ ಪತ್ತೆ

Unknown vehicle found in hubli: ಹುಬ್ಬಳ್ಳಿಯಲ್ಲಿ ಪ್ರಧಾನಿ‌ ಮೋದಿ ಸಂಚರಿಸುವ ಮಾರ್ಗದಲ್ಲಿ ಅಪರಿಚಿತ ವಾಹನ ಪತ್ತೆ

HT Kannada Desk HT Kannada

Jan 12, 2023 02:37 PM IST

ರಾಷ್ಟ್ರೀಯ ಯುವಜನೋತ್ಸವಕ್ಕೆ ಸಿದ್ಧಗೊಂಡಿರುವ ಹುಬ್ಬಳ್ಳಿ

  • ಹುಬ್ಬಳ್ಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸಲಿರುವ ಮಾರ್ಗದಲ್ಲಿ ಭದ್ರತಾ ಸಿಬ್ಬಂದಿ ನಡೆಸುತ್ತಿದ್ದ ತಪಾಸಣೆ ವೇಳೆ ಅಪರಿಚಿತ ವಾಹನವೊಂದು ಪತ್ತೆಯಾಗಿದ್ದು, ಕೆಲಕಾಲ ಆತಂಕವನ್ನು ಮೂಡಿಸಿತ್ತು. ಹೊಸೂರ್ ಕ್ರಾಸ್ ನಲ್ಲಿ ಅಪರಿಚಿತ ಕಾರು ಪತ್ತೆಯಾಗಿದೆ.

ರಾಷ್ಟ್ರೀಯ ಯುವಜನೋತ್ಸವಕ್ಕೆ ಸಿದ್ಧಗೊಂಡಿರುವ ಹುಬ್ಬಳ್ಳಿ
ರಾಷ್ಟ್ರೀಯ ಯುವಜನೋತ್ಸವಕ್ಕೆ ಸಿದ್ಧಗೊಂಡಿರುವ ಹುಬ್ಬಳ್ಳಿ

ಹುಬ್ಬಳ್ಳಿ: ನಗರದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಕೆಲವೇ ನಿಮಿಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಅಂಜಲಿ ಅಂಬಿಗೇರ ಸಹೋದರಿ ಯಶೋದಾ ಆತ್ಮಹತ್ಯೆ ಯತ್ನ, ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ ಸಂಬಂಧಿಸಿದ ಇತ್ತೀಚಿನ 10 ವಿದ್ಯಮಾನಗಳು

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

ಪ್ರಧಾನಿ ಮೋದಿ ಅವರ ಆಗಮನಕ್ಕೂ ಮುನ್ನ ಹುಬ್ಬಳ್ಳಿಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ನಮೋ ಆಗಮನದ ಒಂದು ಗಂಟೆಗೂ ಮೊದಲೇ ಅವರು ಸಂಚರಿಸುವ ಮಾರ್ಗದಲ್ಲಿ ಸಾರ್ವಜನಿಕ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಿ ರಸ್ತೆಯನ್ನು ಬಂದ್ ಮಾಡಲಾಗಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಲಿರುವ ಮಾರ್ಗದಲ್ಲಿ ಭದ್ರತಾ ಸಿಬ್ಬಂದಿ ನಡೆಸುತ್ತಿದ್ದ ತಪಾಸಣೆ ವೇಳೆ ಅಪರಿಚಿತ ವಾಹನವೊಂದು ಪತ್ತೆಯಾಗಿದ್ದು, ಕೆಲಕಾಲ ಆತಂಕವನ್ನು ಮೂಡಿಸಿತ್ತು. ಹೊಸೂರ್ ಕ್ರಾಸ್ ನಲ್ಲಿ ಅಪರಿಚಿತ ಕಾರು ನಿಂತಿದೆ.

ಕಳೆದ ಎರಡು ದಿನಗಳಿಂದ ಈ ಕಾರು ಇಲ್ಲೆ ಇದೆ ಎಂದು ತಿಳಿದು ಬಂದಿದೆ. ವೋಕ್ಸ್ ವ್ಯಾಗನ್ ಕಂಪನಿಯ ಎಂ ಎಚ್ 10, ಸಿಎ 6984 ಮಹಾರಾಷ್ಟ್ರ ನೊಂದಣಿ ಹೊಂದಿರುವ ಕಾರು ಇದಾಗಿದೆ. ಕಾರು ನೋಡಿ ಪೊಲೀಸರು ಅನುಮಾನಗೊಂಡಿದ್ದು ಸದ್ಯ ಟ್ರಾಫಿಕ್ ಪೊಲೀಸರು ಕಾರನ್ನು ಬೇರೆಡೆ ಶಿಫ್ಟ್ ಮಾಡಿದ್ದಾರೆ.

ರಾಷ್ಟ್ರೀಯ ಯುವಜನೋತ್ಸವ 2023 ಉದ್ಘಾಟನಾ ಕಾರ್ಯಕ್ರಮ ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ನಡೆಯುತ್ತಿದ್ದು, ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಹೀಗಾಗಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಎಸ್​​ಪಿಜಿ ತನ್ನ ಸುಪರ್ದಿಗೆ ಪಡೆದಿದೆ. ಏರ್​​ಪೋರ್ಟ್​ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಬಂದೋಬಸ್ತ್​​​​​ ಕೈಗೊಳ್ಳಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ