logo
ಕನ್ನಡ ಸುದ್ದಿ  /  ಕರ್ನಾಟಕ  /  Karwar News: ಬಾಲಕಿಗೆ ಲೈಂಗಿಕ ಕಿರುಕುಳ: 60 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ

Karwar News: ಬಾಲಕಿಗೆ ಲೈಂಗಿಕ ಕಿರುಕುಳ: 60 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ

HT Kannada Desk HT Kannada

Aug 05, 2022 08:34 PM IST

ಸಾಂದರ್ಭಿಕ ಚಿತ್ರ

    • ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 60 ವರ್ಷದ ವೃದ್ಧನಿಗೆ ಕಾರವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಡಿ ಬರುವ ತ್ವರಿತ ವಿಚಾರಣೆಯ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 1. 20 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಾರವಾರ (ಉತ್ತರ ಕನ್ನಡ): ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 60 ವರ್ಷದ ವೃದ್ಧನಿಗೆ ಕಾರವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಡಿ ಬರುವ ತ್ವರಿತ ವಿಚಾರಣೆಯ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 1. 20 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದೆ.

ಟ್ರೆಂಡಿಂಗ್​ ಸುದ್ದಿ

ಬೆಳ್ತಂಗಡಿ ಅಕ್ರಮ ಕಲ್ಲುಗಣಿಗಾರಿಕೆ ಕೇಸ್; ಆರೋಪಿಗಳ ಬಂಧನ, ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌, 10 ವಿದ್ಯಮಾನಗಳಿವು

ಸೈಬರ್ ವಂಚಕರಿಗೆ ಸಿಮ್ ಕಾರ್ಡ್‌ ಪೂರೈಸುತ್ತಿದ್ದ ನಾರಾ ಶ್ರೀನಿವಾಸ್ ರಾವ್ ಬಂಧನ; ಗೋವಾ ಮಹಿಳೆಯ ಬ್ಲಾಕ್ ಮೇಲ್, ಬೆಂಗಳೂರಿನ ವ್ಯಕ್ತಿ ಸೆರೆ

ಬೆಂಗಳೂರು: ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಜಾಯ್‌ ರೈಡ್‌, ಯುವಕನ ಬಂಧನ, ಡಿಎಲ್ ಅಮಾನತಿಗೆ ಶಿಫಾರಸು

ಕರ್ನಾಟಕ ಹವಾಮಾನ ಮೇ 20; ದಕ್ಷಿಣ ಕನ್ನಡ, ಉಡುಪಿ ಸೇರಿ 8ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಮಳೆ ಮುನ್ಸೂಚನೆ

ಮುಂಡಗೋಡದ ಓರಲಗಿಯ ಶಿವಾನಂದ ಗೌಳೇರ ಶಿಕ್ಷೆಗೊಳಗಾದ ಅಪರಾಧಿ. ಈ ಅಜ್ಜನು ಬಾಲಕಿಯನ್ನು ಆತನ ಮನೆ ಹಾಗೂ ಹೊಲಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬುದರ ಕಿಉರಿತು 2021ರಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಪಿಐ ಸಿದ್ದಪ್ಪ ಸಿಮಾನಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಅದರಂತೆ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಧೀಶರಾದ ಶಿವಾಜಿ ನಲವಾಡೆ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.. ಸಂತ್ರಸ್ತೆ ಪರವಾಗಿ ಸರ್ಕಾರಿ ವಕೀಲ ಶುಭಾ.ಆರ್ ಗಾಂವಕರ್ ಕೋರ್ಟ್​ನಲ್ಲಿ ವಾದ ಮಾಡಿದ್ದರು.

ಬೆಂಗಳೂರಿನಲ್ಲಿ ನಡೆದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಜೂನ್ ತಿಂಗಳಲ್ಲಿ 3ನೇ ಹೆಚ್ಚುವರಿ ತ್ವರಿತ ವಿಚಾರಣೆಯ ವಿಶೇಷ ನ್ಯಾಯಾಲಯವು ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. 2017ರಲ್ಲಿ ಘಟನೆ ನಡೆದಿದ್ದು, ವಿವಾಹಿತ ವ್ಯಕ್ತಿಯು ತನಗೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳೀ 17 ವರ್ಷದ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿದ್ದನು. ಒಂದು ದಿನ ಆಕೆಯನ್ನು ಸ್ನೇಹಿತನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಈ ಕುರಿತು ಜಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ತಂದೆ-ಮಗನಿಗೆ 20 ವರ್ಷ ಜೈಲು ಶಿಕ್ಷೆ

ಮೂರು ವರ್ಷಗಳ ಹಿಂದೆ ಬಾಲಕಿಯೋರ್ವಳನ್ನು ಅಪಹರಿಸಿ ಅತ್ಯಾಚಾರ ಎಸಗಿದ 24 ವರ್ಷದ ಯುವಕ ಹಾಗೂ ಈತನಿಗೆ ಸಹಾಯ ಮಾಡಿದ ಯುವಕನ ತಂದೆಗೆ ರಾಜಸ್ಥಾನದ ಕೋಟಾದಲ್ಲಿರುವ ಪೋಕ್ಸೋ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜೈಲು ಶಿಕ್ಷೆಯ ಜೊತೆಗೆ ಮಗನಿಗೆ 30,000 ರೂ. ಹಾಗೂ ತಂದೆಗೆ 20,000 ರೂ. ದಂಡ ಕೂಡ ವಿಧಿಸಲಾಗಿದೆ.

2019ರಲ್ಲಿ ಕೋಟಾ ಜಿಲ್ಲೆಯ ಬುಧದೀತ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ವಾಸವಾಗಿರುವ ಬಾಲಕಿಯನ್ನು ಅಪಹರಿಸಿ ತನ್ನ ಮನೆಗೆ ಕರೆದೊಯ್ದು ಯುವಕ ಹಲವಾರು ಅತ್ಯಾಚಾರ ಎಸಗಿದ್ದನು. ಇದಕ್ಕೆ ಆತನ ತಂದೆ ಕೂಡ ಸಹಾಯ ಮಾಡಿದ್ದಲ್ಲದೇ ಮಗನಿಗೆ ರಕ್ಷಣೆ ನೀಡಿದ್ದನು.

ಮಗಳು ಕಾಣೆಯಾದ ಬೆನ್ನಲ್ಲೇ ಸಂತ್ರಸ್ತೆ ಪೋಷಕರು ಬುಧದೀತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಒಂದು ತಿಂಗಳ ನಂತರ ಅಪ್ರಾಪ್ತೆಯನ್ನು ತಂದೆ-ಮಗನಿಂದ ರಕ್ಷಿಸಿ, ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ