logo
ಕನ್ನಡ ಸುದ್ದಿ  /  Karnataka  /  Vatal Nagaraj Urges State Govt To Arrest The Maharashtra Minister Immediately If He Enter Karnataka

Vatal Nagaraj on border dispute: ಮಹಾರಾಷ್ಟ್ರದ ಸಚಿವರು ರಾಜ್ಯಕ್ಕೆ ಪ್ರವೇಶಿಸಿದರೆ ಕೂಡಲೇ ಬಂಧಿಸಿ: ವಾಟಾಳ್ ನಾಗರಾಜ್ ಆಗ್ರಹ

HT Kannada Desk HT Kannada

Dec 05, 2022 04:29 PM IST

ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

    • ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜ್ ದೇಸಾಯಿ, ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ, ಸಂಸದ ಶಂಭುರಾಜ್ ದೇಸಾಯಿ ಕರ್ನಾಟಕ ಪ್ರವೇಶಿಸಿದರೆ ಕೂಡಲೇ ಬಂಧಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ
ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜ್ ದೇಸಾಯಿ, ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ, ಸಂಸದ ಶಂಭುರಾಜ್ ದೇಸಾಯಿ ಕರ್ನಾಟಕ ಪ್ರವೇಶಿಸಿದರೆ ಕೂಡಲೇ ಬಂಧಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಟ್ರೆಂಡಿಂಗ್​ ಸುದ್ದಿ

Hassan Scandal; ಮಾಜಿ ಸಚಿವ ಹೆಚ್‌ ಡಿ ರೇವಣ್ಣ ವಿರುದ್ಧ ಮತ್ತೊಂದು ಕೇಸ್; ಮನೆಗೆಲಸಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆ. ದಾಖಲು, ಮೇ 7ರಿಂದ 9 ರವರೆಗೆ ಮಳೆ ನಿರೀಕ್ಷೆ- ಹವಾಮಾನ ವರದಿ

Crime News: ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಬೇಟೆ, ಮಾದಕ ವಸ್ತು ಮಾರುತ್ತಿದ್ದ ಇಬ್ಬರ ಬಂಧನ, 16 ಲಕ್ಷ ರೂ ಮೌಲ್ಯದ ಸೊತ್ತುಗಳು ವಶಕ್ಕೆ

ಸೋಶಿಯಲ್ ಮೀಡಿಯಾ ಎಫೆಕ್ಟ್: ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ನೆರವಿನ ಮಹಾಪೂರ, ಇನ್ನು ಹಣ ಹಾಕಬೇಡಿ ಎಂದ ಹೆತ್ತವರು

ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ವಾಟಾಳ್ ನಾಗರಾಜ್, ಗಡಿಯಲ್ಲಿ ಈಗ ಪರಿಸ್ಥಿತಿ ಬಿಗಡಾಯಿಸಿದೆ. ಇಂತಹ ವೇಳೆ ಬೆಳಗಾವಿಗೆ ಬಂದರೆ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬರಲಿದೆ. ಸರ್ಕಾರ ಎತ್ತೆಚ್ಚುಕೊಂಡು, ಸಚಿವರ ಬಂಧನಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಬೆಳಗಾವಿ ನಮ್ಮದು, ಕರ್ನಾಟಕದ ಒಂದು ಅಂಗಲ ಜಾಗವನ್ನು ಬಿಡುವುದಿಲ್ಲ. ಗಡಿಗಳನ್ನು ಬಂದ್ ಮಾಡಿ ಮಹಾರಾಷ್ಟ್ರದವರನ್ನು ಒಳಗೆ ಬರಲು ಬಿಡುವುದಿಲ್ಲ ಎಂದು ಎಂಇಎಸ್ ಸಂಘಟನೆ ಹಾಗೂ ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕನ್ನಡಿಗರ ಸ್ವಾಭಿಮಾನವನ್ನು ಕೆಣಕಲಾಗುತ್ತಿದೆ:

ಕನ್ನಡಿಗರ ಸ್ವಾಭಿಮಾನವನ್ನು ಕೆಣಕಲಾಗುತ್ತಿದೆ. ನಾಡು, ನುಡಿ, ನೆಲಜನ ಕಾಪಾಡೋದು ನಮ್ಮೆಲ್ಲರ ಹೊಣೆ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಪದೇ ಪದೇ ಎಂಇಎಸ್ ಖ್ಯಾತೆ ತೆಗೆಯುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ರೀತಿಯ ವ್ಯಕ್ತಿಗಳು ರಾಜಕೀಯಕ್ಕೆ ಶೋಭೆಯಲ್ಲ. ಆತ ಸಿಎಂ ಆಗೋದಕ್ಕೆ ನಾಲಾಯಕ್ ಎಂದು ಕಿಡಿಕಾರಿದರು.

ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಈಗಾಗಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈಗಾಗಲೇ ಹಿಂದೆ ಹಲವಾರು ಬಾರಿ ಈ ಪ್ರಯತ್ನಗಳಾದಾಗ ಕರ್ನಾಟಕ ಸರ್ಕಾರ ಏನು ಕ್ರಮ ಕೈಗೊಂಡಿತ್ತೋ ಅದೇ ಕ್ರಮವನ್ನು ನಾವು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಈಗಿನ ಸನ್ನಿವೇಶದಲ್ಲಿ ಮಹಾರಾಷ್ಟ್ರದ ಸಿಎಂ ಆಗಲಿ ಅಥವಾ ಯಾವುದೇ ಸಚಿವರಾಗಲಿ ಕರ್ನಾಟಕಕ್ಕೆ ಭೇಟಿ ನೀಡುವ ಅವಶ್ಯಕತೆಯಿಲ್ಲ. ಮಹಾರಾಷ್ಟ್ರದ ಸಚಿವರು ಕರ್ನಾಟಕಕ್ಕೆ ಬಂದು ಮಾಡುವುದು ಏನೂ ಇಲ್ಲ. ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರದಿರುವುದೇ ಒಳಿತು. ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದ, ಉಭಯ ರಾಜ್ಯಗಳ ಜನರ ನಡುವಿನ ಸಾಮರಸ್ಯಕ್ಕೆ ಧಕ್ಕೆ ತರಬಾರದು. ಈಗಿನ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಭೇಟಿ ನೀಡುವುದು ಸಮಂಜಸವಾದ ನಿರ್ಣಯವಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು