logo
ಕನ್ನಡ ಸುದ್ದಿ  /  ಕರ್ನಾಟಕ  /  ವಾರೆಂಟ್ ಹಿನ್ನೆಲೆ; ಮೇ 31ಕ್ಕೆ ದೇಶದ ಯಾವುದೇ ಏರ್ಪೋರ್ಟ್‌ಗೆ ಬಂದಿಳಿದರೂ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್‌ಐಟಿ ಸಿದ್ಧತೆ

ವಾರೆಂಟ್ ಹಿನ್ನೆಲೆ; ಮೇ 31ಕ್ಕೆ ದೇಶದ ಯಾವುದೇ ಏರ್ಪೋರ್ಟ್‌ಗೆ ಬಂದಿಳಿದರೂ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್‌ಐಟಿ ಸಿದ್ಧತೆ

Raghavendra M Y HT Kannada

May 28, 2024 02:42 PM IST

google News

ವಾರೆಂಟ್ ಹಿನ್ನೆಲೆ; ಮೇ 31ಕ್ಕೆ ದೇಶದ ಯಾವುದೇ ಏರ್ಪೋರ್ಟ್‌ಗೆ ಬಂದಿಳಿದರೂ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್‌ಐಟಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

    • ಭಾರತಕ್ಕೆ ಬರುತ್ತಿದ್ದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧಿಸಲು ಎಸ್‌ಐಟಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಬಂಧನದ ವಾರೆಂಟ್ ಇರುವುದರಿಂದ ಆರೋಪಿಯ ಬಂಧನ ಎಸ್‌ಐಟಿಗೆ ಅನಿವಾರ್ಯವಾಗಿದೆ ಎಂದು ತಿಳಿದು ಬಂದಿದೆ.
ವಾರೆಂಟ್ ಹಿನ್ನೆಲೆ; ಮೇ 31ಕ್ಕೆ ದೇಶದ ಯಾವುದೇ ಏರ್ಪೋರ್ಟ್‌ಗೆ ಬಂದಿಳಿದರೂ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್‌ಐಟಿ ಸಿದ್ಧತೆ ಮಾಡಿಕೊಳ್ಳುತ್ತಿದೆ.
ವಾರೆಂಟ್ ಹಿನ್ನೆಲೆ; ಮೇ 31ಕ್ಕೆ ದೇಶದ ಯಾವುದೇ ಏರ್ಪೋರ್ಟ್‌ಗೆ ಬಂದಿಳಿದರೂ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್‌ಐಟಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಬೆಂಗಳೂರು: ತಮ್ಮ ಮನೆಯ ಕೆಲಸ ಮಾಡುವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ವಿಡಿಯೊ ವೈರಲ್ ಪ್ರಕರಣ ಹಾಗೂ ಅತ್ಯಾಚಾರ ಆರೋಪ ಪ್ರಕರಣಗಳನ್ನು ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Sxual Assault Case) ಮೇ 31 ರಂದು ಭಾರತಕ್ಕೆ ವಾಪಸ್ ಆಗಲಿದ್ದಾರೆ. ಕೋರ್ಟ್ ವಾರೆಂಟ್ ಇರುವುದರಿಂದ ಅಂದು ದೇಶದ ಯಾವುದೇ ಏರ್ಪೋರ್ಟ್‌ಗೆ ಬಂದಿಳಿದರೂ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನದ ವಾರೆಂಟ್ ಇರುವುದರಿಂದ ಆರೋಪಿಯ ಬಂಧನ ಎಸ್‌ಐಟಿಗೆ ಅನಿವಾರ್ಯವಾಗಿದೆ ಎಂದು ತಿಳಿದು ಬಂದಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ತನಿಖೆ ನಡೆಸಲು ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ನಿರ್ಧರಿಸಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಕೂಡ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪ್ರಜ್ವಲ್ ರೇವಣ್ಣ ಅವರು ಭಾರತೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಕ್ಷಣ ಅವರನ್ನು ಬಂಧಿಸಬೇಕೆ ಎಂಬುದರನ್ನು ಎಸ್‌ಐಟಿ ನಿರ್ಧಾರ ಮಾಡುತ್ತದೆ. ವಿದೇಶಕ್ಕೆ ಹೋಗಿ ಬಂಧಿಸಲು ಸಾಧ್ಯವಿಲ್ಲ. ಆರೋಪಿಯ ಬಂಧನದಲ್ಲಿ ಯಾವುದೇ ವಿಳಂಬವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜ್ವಲ್ ರೇವಣ್ಣಗೆ ವಿಡಿಯೊ ಮಾಡಲು ಪ್ರೇರೇಪಿಸಿದ್ದು ಏನು ಎಂಬುದು ನನಗೆ ಗೊತ್ತಿಲ್ಲ. ಮೇ 31ಕ್ಕೆ ಏನಾಗುತ್ತದೆ ಎಂಬುದನ್ನು ನೋಡುತ್ತೇವೆ. ಆತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗದಿದ್ದರೆ ಮುಂದಿನ ಪ್ರಕ್ರಿಯೆ ಏನು ಎಂಬುದರ ಬಗ್ಗೆ ನಿರ್ಧರಿಸುತ್ತೇವೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ, ವಾರೆಂಟ್ ಕೂಡ ಹೊರಡಿಸಲಾಗಿದೆ. ಪ್ರಜ್ವಲ್ ವಿರುದ್ಧ ಪ್ರಕರಣಗಳು ದಾಖಲಾದ ಬಳಿಕ ನಾವು ಎಲ್ಲಾ ಅಗತ್ಯವಾದ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದ ಬಳಿಕ ಏಪ್ರಿಲ್ 27 ರಂದು ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ ಬಳಿಕ ತಲೆಮರೆಸಿಕೊಂಡಿದ್ದರು. ಇದೀಗ ಮೇ 31ಕ್ಕೆ ಭಾರತಕ್ಕೆ ವಾಪಸ್ ಆಗಿ ಎಸ್‌ಐಟಿ ಮುಂದೆ ಹಾಜರಾಗುವುದಾಗಿ ಮೇ 27ರ ಸೋಮವಾರ ವಿಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ಸಂಸದರ ಅವಧಿ ಮುಕ್ತಾಯವಾಗುತ್ತಿರುವುದರಿಂದ ಅವರ ಬಳಿ ಇರುವ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅವಧಿಯೂ ಮುಕ್ತಾಯಗೊಳ್ಳಲಿದೆ. ಹೀಗಾಗಿ ಅವರು ದೇಶಕ್ಕೆ ವಾಪಸ್ ಬರಲೇಬೇಕಾದ ಅನಿವಾರ್ಯತೆ ಇದೆ. ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೂಡ ಹೊರಡಿಸಲಾಗಿದೆ.

ಪ್ರಜ್ವಲ್ ರೇವಣ್ಣ ಅವರ ವಿಡಿಯೊದಲ್ಲಿದ್ದರು ಎನ್ನಲಾದ ಮಹಿಳೆಯನ್ನು ಅಪಹರಣ ಮಾಡಿಸಿದ್ದ ಆರೋಪದಲ್ಲಿ ಪ್ರಜ್ವಲ್ ತಂದೆ ಹೆಚ್‌ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿ ಜೈಲಿಗೆ ಕಳುಹಿಸಿತ್ತು. ಸದ್ಯ ಅವರು ಜಾಮೀನ ಮೇಲೆ ಹೊರಗಡೆ ಬಂದಿದ್ದಾರೆ. ಇದೇ ಪ್ರಕರಣದಲ್ಲಿ ತನಿಖೆಗೆ ಹಾಜರಾಗಿರುವ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಇಂದು (ಮೇ 28, ಮಂಗಳವಾರ) ನಡೆಯಲಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ