logo
ಕನ್ನಡ ಸುದ್ದಿ  /  ಕರ್ನಾಟಕ  /  Dr K Sudhakar On Union Budget: ಎಲ್ಲಾ ಮೆಡಿಕಲ್‌ ಕಾಲೇಜುಗಳಲ್ಲಿ ಹೊಸ ನರ್ಸಿಂಗ್‌ ಕಾಲೇಜುಗಳ ಆರಂಭ ಅತ್ಯಂತ ಸಕಾಲಿಕ: ಸುಧಾಕರ್

Dr K Sudhakar on Union Budget: ಎಲ್ಲಾ ಮೆಡಿಕಲ್‌ ಕಾಲೇಜುಗಳಲ್ಲಿ ಹೊಸ ನರ್ಸಿಂಗ್‌ ಕಾಲೇಜುಗಳ ಆರಂಭ ಅತ್ಯಂತ ಸಕಾಲಿಕ: ಸುಧಾಕರ್

HT Kannada Desk HT Kannada

Feb 01, 2023 01:55 PM IST

google News

ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ ಕೆ ಸುಧಾಕರ್ (ಫೋಟೋ-ಫೈಲ್)

  • ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಅಮೃತಕಾಲದ ಸರ್ವಸ್ಪರ್ಶಿ ಬಜೆಟ್‌ ಇದಾಗಿದ್ದು, ಮಧ್ಯಮವರ್ಗದ ಜನತೆಯ ಅವಶ್ಯಕತೆಗಳಿಗೆ ಪ್ರಧಾನಿ ಮೋದಿ ಸ್ಪಂದಿಸಿದ್ದಾರೆ. ಎಲ್ಲಾ ಮೆಡಿಕಲ್‌ ಕಾಲೇಜುಗಳಲ್ಲಿ ಹೊಸ ನರ್ಸಿಂಗ್‌ ಕಾಲೇಜುಗಳ ಆರಂಭ ಅತ್ಯಂತ ಸಕಾಲಿಕ ಎಂದಿದ್ದಾರೆ. 

ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ ಕೆ ಸುಧಾಕರ್ (ಫೋಟೋ-ಫೈಲ್)
ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ ಕೆ ಸುಧಾಕರ್ (ಫೋಟೋ-ಫೈಲ್)

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2023-24ನೇ ಸಾಲಿನ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆ ದೊರೆತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಮ ವರ್ಗದ ಜನರ ಅವಶ್ಯಕತೆಗೆ ಪೂರಕವಾದ ಹಾಗೂ ಎಲ್ಲಾ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾದ ಸರ್ವಸ್ಪರ್ಶಿ ಬಜೆಟ್‌ ನೀಡಿದ್ದಾರೆ ಎಂದರು.

ಸಾಬ್‌ಕಾ ಸಾಥ್‌ ಸಬ್‌ಕಾ ವಿಕಾಸ್‌ ಎಂಬ ಎಲ್ಲರನ್ನೂ ಒಳಗೊಳ್ಳುವ ಪ್ರಗತಿಯ ಗುರಿಯೊಂದಿಗೆ ಕೇಂದ್ರ ಸರ್ಕಾರ ಉತ್ತಮ ಬಜೆಟ್‌ ನೀಡಿದೆ. 2019 ನೇ ಆರ್ಥಿಕ ವರ್ಷದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒಟ್ಟು ಬಜೆಟ್‌ನಲ್ಲಿ ಶೇ.1.4 ರಷ್ಟು ಅನುದಾನ ಮೀಸಲಿಟ್ಟಿದ್ದು, 2023ನೇ ಸಾಲಿನಲ್ಲಿ ಶೇ.2.1 ರಷ್ಟು ಮೀಸಲಿಡಲಾಗಿದೆ. ಈ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಇನ್ನಷ್ಟು ಆದ್ಯತೆ ನೀಡಲಾಗಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

2014 ರಿಂದ ದೇಶದಲ್ಲಿ ವಿವಿಧೆಡೆ 157 ಮೆಡಿಕಲ್‌ ಕಾಲೇಜುಗಳನ್ನು ಆರಂಭಿಸಿದ್ದು, ಈ ಕಾಲೇಜುಗಳಲ್ಲಿ 157 ಹೊಸ ನರ್ಸಿಂಗ್‌ ಕಾಲೇಜುಗಳನ್ನು ಆರಂಭಿಸುವುದಾಗಿ ತಿಳಿಸಲಾಗಿದೆ. ಸಿಕಲ್‌ ಸೆಲ್‌ ಅನೀಮಿಯಾದ ನಿವಾರಣೆಗಾಗಿ ಪ್ರತ್ಯೇಕವಾದ ಅಭಿಯಾನ ಆರಂಭಿಸಲಾಗುತ್ತದೆ. ಫಾರ್ಮಾ ಉದ್ಯಮದಲ್ಲಿ ಸಂಶೋಧನೆಗೆ ಪ್ರೋತ್ಸಾಹಿಸಲು ಕಾರ್ಯಕ್ರಮ, ನಿಗದಿತ ಐಸಿಎಂಆರ್‌ ಲ್ಯಾಬ್‌ಗಳಲ್ಲಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಸಂಶೋಧನೆಗೆ ಕಾರ್ಯಕ್ರಮ ರೂಪಿಸುವುದಾಗಿ ಬಜೆಟ್‌ನಲ್ಲಿ ತಿಳಿಸಲಾಗಿದೆ. ಇದು ಆರೋಗ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆಗಳು ಎಂದು ಶ್ಲಾಘಿಸಿದ್ದಾರೆ.

ಮಧ್ಯಮ ವರ್ಗಕ್ಕೆ ಕೊಡುಗೆ

ಮಧ್ಯಮ ವರ್ಗದ ಜನರ ನಿರೀಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ಅರಿತಿದ್ದು, ಆದಾಯ ತೆರಿಗೆ ಮಿತಿಯನ್ನು 5 ಲಕ್ಷ ರೂ. ನಿಂದ 7 ಲಕ್ಷ ರೂ.ಗೆ ಹೆಚ್ಚಿಸಿದ್ದಾರೆ. ಕೋವಿಡ್‌ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಚೇತರಿಸಿಕೊಳ್ಳುತ್ತಿರುವ ಜನರಿಗೆ ಇದು ಚೇತೋಹಾರಿ ಕ್ರಮವಾಗಿದೆ.

ಚಿಕ್ಕಮಗಳೂರು, ತುಮಕೂರು ಸೇರಿದಂತೆ ಮಧ್ಯ ಕರ್ನಾಟಕ ಭಾಗಕ್ಕೆ ಉತ್ತಮ ನೀರಾವರಿ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ನೀಡಲಾಗಿದೆ. ಇದರಿಂದಾಗಿ ಈ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ವೇಗ ದೊರೆತಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ