logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಇಂದು: ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು, ಬೀದರ್‌ ಚಳಿ ಹೆಚ್ಚು; ಕರ್ನಾಟಕದ ಉಳಿದೆಡೆ ಸಾಮಾನ್ಯಕ್ಕಿಂತ ಕಡಿಮೆ ಉಷ್ಣಾಂಶ

ಕರ್ನಾಟಕ ಹವಾಮಾನ ಇಂದು: ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು, ಬೀದರ್‌ ಚಳಿ ಹೆಚ್ಚು; ಕರ್ನಾಟಕದ ಉಳಿದೆಡೆ ಸಾಮಾನ್ಯಕ್ಕಿಂತ ಕಡಿಮೆ ಉಷ್ಣಾಂಶ

Umesh Kumar S HT Kannada

Nov 26, 2024 06:40 AM IST

google News

ಕರ್ನಾಟಕ ಹವಾಮಾನ ಇಂದು: ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು, ಬೀದರ್‌ ಚಳಿ ಹೆಚ್ಚು; ಕರ್ನಾಟಕದ ಉಳಿದೆಡೆ ಸಾಮಾನ್ಯಕ್ಕಿಂತ ಕಡಿಮೆ ಉಷ್ಣಾಂಶ ಇರುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ. (ಸಾಂಕೇತಿಕ ಚಿತ್ರ)

  • Karnataka Weather Forecast: ಭಾರತೀಯ ಹವಾಮಾನ ಇಲಾಖೆಯ ಹವಾಮಾನ ವರದಿ ಪ್ರಕಾರ ಕರ್ನಾಟಕ ಹವಾಮಾನ ಇಂದು ಬಹುತೇಕ ಒಣಹವೆ ಇರಲಿದೆ. ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು ಇರಲಿದ್ದು, ಮೋಡಕವಿದ ವಾತಾವರಣ ಇರಲಿದೆ. ಬೀದರ್‌ ಚಳಿ ಹೆಚ್ಚು ಕಾಡಲಿದ್ದು, ಕರ್ನಾಟಕದ ಉಳಿದೆಡೆ ಸಾಮಾನ್ಯಕ್ಕಿಂತ ಕಡಿಮೆ ಉಷ್ಣಾಂಶ, ಒಣಹವೆ ಎಂದಿದೆ.

ಕರ್ನಾಟಕ ಹವಾಮಾನ ಇಂದು: ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು, ಬೀದರ್‌ ಚಳಿ ಹೆಚ್ಚು; ಕರ್ನಾಟಕದ ಉಳಿದೆಡೆ ಸಾಮಾನ್ಯಕ್ಕಿಂತ ಕಡಿಮೆ ಉಷ್ಣಾಂಶ ಇರುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಇಂದು: ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು, ಬೀದರ್‌ ಚಳಿ ಹೆಚ್ಚು; ಕರ್ನಾಟಕದ ಉಳಿದೆಡೆ ಸಾಮಾನ್ಯಕ್ಕಿಂತ ಕಡಿಮೆ ಉಷ್ಣಾಂಶ ಇರುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ. (ಸಾಂಕೇತಿಕ ಚಿತ್ರ) (Pexels)

Karnataka Weather Forecast: ಬೆಂಗಳೂರು ಸುತ್ತಮುತ್ತ ಇಂದು (ನವೆಂಬರ್ 26) ಭಾಗಶಃ ಮೋಡಕವಿದ ವಾತಾವರಣ, ಮುಂಜಾನೆ ಮಂಜು ಇರಲಿದ್ದು, ಕರ್ನಾಟಕದ ಒಳನಾಡಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯ ಮಟ್ಟಕ್ಕಿಂತ ಕಡಿಮೆ ಇರಲಿದೆ. ಹೀಗಾಗಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನೆ ವರದಿ ಹೇಳಿದೆ. ನಿನ್ನೆ (ನವೆಂಬರ್ 25) ಗರಿಷ್ಠ ಉಷ್ಣಾಂಶ 35.5 ಡಿಗ್ರಿ ಸೆಲ್ಶಿಯಸ್ ಕಾರವಾರದಲ್ಲಿ, ಕನಿಷ್ಠ ಉಷ್ಣಾಂಶ 12.2 ಡಿಗ್ರಿ ಸೆಲ್ಶಿಯಸ್ ಬೀದರ್‌ನಲ್ಲಿ ದಾಖಲಾಗಿದೆ. ವಿಜಯಪುರ, ಬಾಗಲಕೋಟೆ ಮುಂತಾದೆಡೆ ಉಷ್ಣಾಂಶವು ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಶಿಯಸ್ ಕಡಿಮೆ ಇತ್ತು. ಕೊಪ್ಪಳದಲ್ಲಿ ತೇವಾಂಶ ಸಾಮಾನ್ಯಕ್ಕಿಂತ ಶೇಕಡ 28 ಕಡಿಮೆ ಇತ್ತು. ಕರಾವಳಿ ಕರ್ನಾಟಕ ಭಾಗದಲ್ಲೂ ತೇವಾಂಶ ಸಾಮಾನ್ಯಕ್ಕಿಂತ ಕಡಿಮೆ ಇದ್ದು, ಒಣಹವೆ ಹೆಚ್ಚಾಗಿತ್ತು. ಕರ್ನಾಟಕ ಹವಾಮಾನ ಮುನ್ಸೂಚನೆ ವರದಿಯ ವಿವರ ಗಮನಿಸೋಣ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಹವಾಮಾನ ಇಂದು; ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಚಳಿ ಹೆಚ್ಚು

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಇರಲಿದ್ದು, ತೇವಾಂಶ ಕಡಿಮೆ ಇರುವ ಕಾರಣ ಹಲವು ಪ್ರದೇಶಗಳಲ್ಲಿ ಒಣಹವೆ ಕಾಡಬಹುದು. ಒಟ್ಟಾರೆಯಾಗಿ ರಾಜ್ಯದಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ದಟ್ಟ ಮಂಜು ಇರಲಿದ್ದು, ಇಬ್ಬನಿ ಬೀಳುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಕೆಲವು ಕಡೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುವ ಸಾಧ್ಯತೆಯಿದೆ. ಅದೇ ರೀತಿ ಉತ್ತರ ಒಳನಾಡಿನ ಕೆಲವು ಕಡೆ ಉಷ್ಣಾಂಶವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿರುವ ಸಾಧ್ಯತೆಯಿದೆ. ಬಹುಶಃ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆಯ ಕೆಲವು ಸ್ಥಳಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಶಿಯಸ್‌ ಕಡಿಮೆ ಇರಬಹುದು. ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಿರಲ್ಲ ಎಂದು ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಬೆಂಗಳೂರು ಹವಾಮಾನ ಇಂದು; ಮುಂಜಾನೆ ಮಂಜು, ಚಳಿ

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸುತ್ತಮುತ್ತ ಇನ್ನೆರಡು ದಿನ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಕಾಡಲಿದೆ. ಕೆಲವು ಕಡೆ ಇಬ್ಬನಿ ಬೀಳುವ ಸಾಧ್ಯತೆಯೂ ಇದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಡಾ ಎನ್ ಪುವಿಯರಸನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ವೇಳೆ, ಸಿನೊಪ್ಟಿಕ್ ಹವಾಮಾನ ಲಕ್ಷಣದ ವಿವರ ನೀಡಿರುವ ಹವಾಮಾನ ಮುನ್ಸೂಚನೆ ವರದಿ, ದಕ್ಷಿಣ ಬಂಗಾಳ ಕೊಲ್ಲಿ ಮತ್ತು ಪಕ್ಕದ ಪೂರ್ವ ಸಮಭಾಜಕ ಹಿಂದೂ ಮಹಾಸಾಗರದ ಮಧ್ಯ ಭಾಗಗಳ ಮೇಲೆ ಚೆನ್ನಾಗಿ ಗುರುತಿಸಲ್ಪಟ್ಟ ಕಡಿಮೆ ಒತ್ತಡದ ಪ್ರದೇಶವು ಪಶ್ಚಿಮ ವಾಯವ್ಯಕ್ಕೆ ಚಲಿಸಿತು. ವಾಯಭಾರ ಕುಸಿತ ತೀವ್ರಗೊಂಡಿದ್ದು, ಸೋಮವಾರ ಬೆಳಗ್ಗೆ 8.30ಕ್ಕೆ ಇದು ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗದಲ್ಲಿ ಕೇಂದ್ರೀಕೃತವಾಗಿತ್ತು. ಹಿಂದೂ ಮಹಾಸಾಗರದ ಸುಮಾರು ಟ್ರಿಂಕೋಮಲಿಯ ಆಗ್ನೇಯದ 600 ಕಿಮೀ, ನಾಗಪಟ್ಟಣಂನಿಂದ ಆಗ್ನೇಯಕ್ಕೆ 880 ಕಿಮೀ, ಪುದುಚೇರಿಯ ಆಗ್ನೇಯಕ್ಕೆ 980 ಕಿಮೀ ಮತ್ತು ಚೆನ್ನೈನಿಂದ ಆಗ್ನೇಯಕ್ಕೆ 1050 ಕಿಮೀ ದೂರದಲ್ಲಿದೆ. ಹೀಗಾಗಿ ಮುಂದಿನ ಎರಡು ದಿನಗಳ ಅವಧಿಯಲ್ಲಿ ತಮಿಳುನಾಡು, ಶ್ರೀಲಂಕಾ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ವಿವರಿಸಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ