logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Weather: ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೂ 5 ದಿನ ಮಳೆ; ರಾಜ್ಯದ ಹವಾಮಾನ ವರದಿ

Karnataka Weather: ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೂ 5 ದಿನ ಮಳೆ; ರಾಜ್ಯದ ಹವಾಮಾನ ವರದಿ

Jayaraj HT Kannada

Aug 27, 2024 07:11 AM IST

google News

ಕರಾವಳಿ-ದಕ್ಷಿಣ ಒಳನಾಡಿನಲ್ಲಿ ಇನ್ನೂ 5 ದಿನ ಮಳೆ; ಕರ್ನಾಟಕ ಹವಾಮಾನ ವರದಿ

    • ಕರ್ನಾಟಕದ ವಿವಿಧ ಭಾಗಗಳಲ್ಲಿ ಸೋಮವಾರ ಮಳೆಯಾಗಿದೆ. ಮಂಗಳವಾರವೂ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 
ಕರಾವಳಿ-ದಕ್ಷಿಣ ಒಳನಾಡಿನಲ್ಲಿ ಇನ್ನೂ 5 ದಿನ ಮಳೆ; ಕರ್ನಾಟಕ ಹವಾಮಾನ ವರದಿ
ಕರಾವಳಿ-ದಕ್ಷಿಣ ಒಳನಾಡಿನಲ್ಲಿ ಇನ್ನೂ 5 ದಿನ ಮಳೆ; ಕರ್ನಾಟಕ ಹವಾಮಾನ ವರದಿ (PTI)

ಕರ್ನಾಟಕ ಕರಾವಳಿಯ ಹಲವು ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಚುರುಕಾಗಿದ್ದು; ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಇಂದು (ಆಗಸ್ಟ್‌ 27, ಮಂಗಳವಾರ) ಅತಿಯಾದ ಮಳೆ ಬರುವ ಸಾಧ್ಯತೆ ಇದೆ. ಇದೇ ವೇಳೆ ಗಾಳಿಯ ವೇಗವು ನಿರಂತರವಾಗಿ 30ರಿಂದ 40 kmph ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಹೇಳಿದೆ. ಅತ್ತ ಮಲೆನಾಡು ಭಾಗದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರರಡು ಸ್ಥಳಗಳಲ್ಲಿಯೂ ಭಾರಿ ಮಳೆಯಾಗಲಿದೆ. ಗಾಳಿಯ ವೇಗವು ನಿರಂತರವಾಗಿ 40ರಿಂದ 50 kmph ವೇಗ ತಲುಪುವ ಸಾಧ್ಯತೆಯಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ ಮತ್ತು ಗಾಳಿಯ ವೇಗವು ನಿರಂತರವಾಗಿ 40ರಿಂದ 50 kmph ವೇಗ ತಲುಪುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ (ಬೀದರ್‌, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು) ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ (ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ,ಮಂಡ್ಯ, ಮಡಿಕೇರಿ, ಮೈಸೂರು) ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಇದೇ ವೇಳೆ ಗಾಳಿಯು 40ರಿಂದ 50 kmph ವೇಗದಲ್ಲಿ ಬೀಸುವ ಸಾಧ್ಯತೆಯಿದೆ.

ಕರ್ನಾಟಕ ಕರಾವಳಿಯುದ್ದಕ್ಕೂ ಗಾಳಿಯ ವೇಗವು ಗಂಟೆಗೆ 35ರಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀವರೆಗೆ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು ಹವಾಮಾನ

ರಾಜಧಾನಿ ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಲಘು ಮಳೆಯಾಗುವ ಸಂಭಾವ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40ರಿಂದ 50 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30ರಿಂದ 21 ಡಿಗ್ರಿ ಸೆಲ್ಸಿಯಸ್‌ ಇರುವ ಮುನ್ಸೂಚನೆ ಇದೆ.

ಎಲ್ಲೆಲ್ಲಿ ಮಳೆಯಾಗಿದೆ?

ಆಗಸ್ಟ್‌ 26ರಂದು ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ರಾಜ್ಯದಲ್ಲಿ ನೆೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಕ್ಯಾಸೆಲ್‌ರಾಕ್‌ನಲ್ಲಿ (16 ಸೆಂ.ಮೀ) ರಾಜ್ಯದಲ್ಲೇ ಅತಿ ಹೆಚ್ಚು ಪ್ರಮಾಣದ ಮಳೆಯಾಗಿದೆ. ಉಳಿದಂತೆ ಚಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ 12 ಸೆಂ.ಮೀ ಮಳೆಯಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ